ವಾರಣಾಸಿ: ಮಳೆಗಾಗಿ ಕಪ್ಪೆಗಳಿಗೆ ಮದುವೆ; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಸ್ಥಳೀಯ ದಂಪತಿಗಳು ಹಿಂದೂ ಪುರೋಹಿತರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಾನಗಳ ಮೂಲಕ ಕಪ್ಪೆಗಳಿಗೆ ಮದುವೆ ಮಾಡಿಸುತ್ತಿರುವುದನ್ನು ಕಾಣಬಹುದು. ಆರಂಭದಲ್ಲಿ, ಕಪ್ಪೆಗಳಿಗೆ ವಧು ವರರಂತೆ ಕೆಂಪು ಬಣ್ಣದ ಶಾಲು ಹೊದಿಸಿ ನಂತರ ಹೂವಿನ ಹಾರಗಳನ್ನು ಹಾಕುತ್ತಿರುವುದನ್ನು ಕಾಣಬಹುದು.

ವಾರಣಾಸಿ: ಮಳೆಗಾಗಿ ಕಪ್ಪೆಗಳಿಗೆ ಮದುವೆ; ವಿಡಿಯೋ ಇಲ್ಲಿದೆ ನೋಡಿ
Frog Wedding

Updated on: Jun 14, 2024 | 5:53 PM

ಜನರು ಸತ್ತವರ ಮದುವೆಯನ್ನು ನಡೆಸುವ ‘ಪ್ರೇತ ವಿವಾಹ’ವನ್ನು ಇತ್ತೀಚಿಗೆ ಭಾರೀ ಸುದ್ದಿಯಲ್ಲಿತ್ತು. ಇದೀಗ ಕಪ್ಪೆಗಳಿಗೆ ಮದುವೆ ಮಾಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವಾರಣಾಸಿಯಲ್ಲಿ ಇತ್ತೀಚೆಗೆ ಕಪ್ಪೆ ವಿವಾಹವನ್ನು ನಡೆಸುತ್ತಿರುವುದು ಕಂಡುಬಂದಿದೆ, ಇದನ್ನು ವರುಣ ದೇವರ ಆಶೀರ್ವಾದವನ್ನು ಕೋರಲು ಮತ್ತು ಮಳೆ ಬರಿಸಲು ಹಿಂದಿನಿಂದಲೂ ಇಲ್ಲಿ ಮಾಡಿಕೊಂಡು ಬರಲಾಗುತ್ತಿದೆ ಎಂದು ವರದಿಯಾಗಿದೆ.

ಎರಡು ಕಪ್ಪೆಗಳ ಮದುವೆಯ ದೃಶ್ಯಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ವಿಡಿಯೋದಲ್ಲಿ ಸ್ಥಳೀಯ ದಂಪತಿಗಳು ಹಿಂದೂ ಪುರೋಹಿತರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಾನಗಳ ಮೂಲಕ ಕಪ್ಪೆಗಳಿಗೆ ಮದುವೆ ಮಾಡಿಸುತ್ತಿರುವುದನ್ನು ಕಾಣಬಹುದು. ಆರಂಭದಲ್ಲಿ, ಕಪ್ಪೆಗಳಿಗೆ ವಧು ವರರಂತೆ ಕೆಂಪು ಬಣ್ಣದ ಶಾಲು ಹೊದಿಸಿ ನಂತರ ಹೂವಿನ ಹಾರಗಳನ್ನು ಹಾಕುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

ಸಂಗೀತ ಮತ್ತು ಸಂಭ್ರಮದ ಲಹರಿಯೊಂದಿಗೆ ಸ್ಥಳೀಯರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಪ್ಪೆ ವಿವಾಹವನ್ನು ನೆರವೇರಿಸಿದ್ದಾರೆ. ಮದುವೆಯ ಸಂದರ್ಭದಲ್ಲಿ ಮಹಿಳೆಯರ ಗುಂಪು ವಾದ್ಯಗಳನ್ನು ಬಾರಿಸುವುದು ಮತ್ತು ಭಜನೆಗಳನ್ನು ಹಾಡುವುದು ಕಂಡುಬಂದಿದೆ. ವರದಿಯ ಪ್ರಕಾರ, ಈ ಆಚರಣೆಯು ಪ್ರದೇಶದ ಜನರು ಮಳೆಗಾಗಿ ಮತ್ತು ಸುಡುವ ಶಾಖದಿಂದ ಪರಿಹಾರಕ್ಕಾಗಿ ಪ್ರಾರ್ಥಿಸುವ ವಿಧಾನವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us