Viral Video: ಗರ್ಬಾ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಖ್ಯಾತ ಕಲಾವಿದ ಸಾವು

ಗರ್ಬಾ ಕಿಂಗ್ ಎಂದೇ ಖ್ಯಾತರಾಗಿದ್ದ ಖ್ಯಾತ ಕಲಾವಿದ ಅಶೋಕ್ ಮಾಲಿ (54) ಸೋಮವಾರ ಪುಣೆ ಜಿಲ್ಲೆಯ ಖೇಡ್‌ನಲ್ಲಿ ನವರಾತ್ರಿ ಉತ್ಸವದ ವೇಳೆ ಗರ್ಬಾ ಪ್ರದರ್ಶನ ಮಾಡುವಾಗ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ನೃತ್ಯ ಮಾಡುವಾಗಲೇ ಕುಸಿದು ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Follow us
ಅಕ್ಷತಾ ವರ್ಕಾಡಿ
|

Updated on:Oct 09, 2024 | 12:19 PM

ಪುಣೆ: ದಸರಾ ನವರಾತ್ರಿ ಹಬ್ಬ ಎಷ್ಟು ವಿಶೇಷ ಎಂದು ಹೇಳಬೇಕಾಗಿಲ್ಲ. ಈ 9 ದಿನಗಳಲ್ಲಿ ನವ ದುರ್ಗೆಯರ ಪೂಜೆಯ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತದೆ. ಇತ್ತೀಚೆಗಷ್ಟೇ ನವರಾತ್ರಿ ಉತ್ಸವದ ವೇಳೆ ಖ್ಯಾತ ಕಲಾವಿದರೊಬ್ಬರು ಗರ್ಬಾ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗರ್ಬಾ ಕಿಂಗ್ ಎಂದೇ ಖ್ಯಾತರಾಗಿದ್ದ ಖ್ಯಾತ ಕಲಾವಿದ ಅಶೋಕ್ ಮಾಲಿ (54) ಸೋಮವಾರ ಪುಣೆ ಜಿಲ್ಲೆಯ ಖೇಡ್‌ನಲ್ಲಿ ನವರಾತ್ರಿ ಉತ್ಸವದ ವೇಳೆ ಗರ್ಬಾ ಪ್ರದರ್ಶನ ಮಾಡುವಾಗ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅಶೋಕ್ ಮಾಲಿ ಗರ್ಭಾ ನೃತ್ಯ ಮಾಡುವುದನ್ನು ಕಾಣಬಹುದು. ಅವರೊಂದಿಗೆ ಮತ್ತೊಬ್ಬ ಬಾಲಕ ಡ್ಯಾನ್ಸ್ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಸುತ್ತಮುತ್ತಲಿನ ನೂರಾರು ಜನರು ಚಪ್ಪಾಳೆ ತಟ್ಟುವುದು ಮತ್ತು ಮೊಬೈಲ್ ಫೋನ್‌ಗಳಲ್ಲಿ ವೀಡಿಯೊಗಳನ್ನು ರೆಕಾರ್ಡ್​​ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಡ್ಯಾನ್ಸ್ ಮಾಡುತ್ತಿದ್ದ ಅಶೋಕ್ ಏಕಾಏಕಿ ಕುಸಿದು ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ; ಫಸ್ಟ್ ರ‍್ಯಾಂಕ್‌ ರಾಜು; ಪುಸ್ತಕ ಓದುತ್ತಲೇ ಗರ್ಬಾ ನೃತ್ಯ ಮಾಡಿದ ಯುವಕ

ತಕ್ಷಣ ಕಲಾವಿದನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಚಕನ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಮೋದ್ ವಾಘ್ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:14 pm, Wed, 9 October 24

Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್