AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್‌ ಶಿಫ್ಟ್​ ಹೊರೆ ಕಡಿಮೆ ಮಾಡಲು 10 ರೋಗಿಗಳನ್ನು ಕೊಂದ ನರ್ಸ್

ಜರ್ಮನಿಯ ಪ್ಯಾಲಿಯೇಟಿವ್ ಕೇರ್ ನರ್ಸ್​10 ರೋಗಿಗಳನ್ನು ಕೊಂದು, 27 ಮಂದಿಯನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನೈಟ್ ಶಿಫ್ಟ್ ಕೆಲಸದ ಒತ್ತಡವನ್ನು ಕಡಿಮೆ ಮಾಡಲು, ರೋಗಿಗಳಿಗೆ ಮಾರ್ಫಿನ್ ಹಾಗೂ ನಿದ್ರಾಜನಕ ಚುಚ್ಚುಮದ್ದು ನೀಡಿದ್ದಾರೆ. ಈ ಕೃತ್ಯದ ಬಗ್ಗೆ ಕೋರ್ಟ್​​ ಮುಂದೆ ತಪ್ಪೊಪ್ಪಿಕೊಂಡಿದ್ದು, ಆಚೆನ್ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ನೈಟ್‌ ಶಿಫ್ಟ್​ ಹೊರೆ ಕಡಿಮೆ ಮಾಡಲು 10 ರೋಗಿಗಳನ್ನು ಕೊಂದ ನರ್ಸ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 07, 2025 | 11:03 AM

Share

ನೈಟ್​​​​ ಶಿಫ್ಟ್​​​ನಲ್ಲಿ ಕೆಲಸದ ಒತ್ತಡ ಕಡಿಮೆ ಮಾಡಲು ನರ್ಸ್​ 10 ರೋಗಿಗಳನ್ನು ಕೊಂದಿರುವ ಘಟನೆ ಜರ್ಮನಿಯಲ್ಲಿ (German nurse) ನಡೆದಿದೆ. ಇದೀಗ ಪ್ಯಾಲಿಯೇಟಿವ್ ಕೇರ್ ನರ್ಸ್ (ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆರೈಕೆ ಮಾಡುವ ನರ್ಸ್​)ಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಈ ನರ್ಸ್​​​ 10 ರೋಗಿಗಳನ್ನು ಕೊಂದದ್ದು ಮಾತ್ರವಲ್ಲದೆ, 27 ರೋಗಿಗಳನ್ನು ಕೊಲ್ಲಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಬಿಬಿಸಿ ವರದಿಯ ಪ್ರಕಾರ, ಈ ನರ್ಸ್​​​ಗೆ ಜರ್ಮನಿಯ ಆಚೆನ್‌ನ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಈ ಘಟನೆ 2023-2024ರಲ್ಲಿ ಪಶ್ಚಿಮ ಜರ್ಮನಿಯ ವೂರ್ಸೆಲೆನ್‌ನಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಈ 44 ವರ್ಷದ ನರ್ಸ್ ವೃದ್ಧರು ಮತ್ತು ಮಾರಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳನ್ನು ಟಾರ್ಗೆಟ್​​​ ಮಾಡಿ, ಮಾರ್ಫಿನ್ ಮತ್ತು ಮಿಡಜೋಲಮ್ ಎಂಬ ನಿದ್ರಾಜನಕ ಚುಚ್ಚುಮದ್ದು ನೀಡುತ್ತಿದ್ದರು. ಇದರಿಂದ ರಾತ್ರಿ ವೇಳೆ ರೋಗಿಗಳು ಸುಮ್ಮನಾಗುತ್ತಿದ್ದರು ಎಂದು ಕೋರ್ಟ್​​ ಮುಂದೆ ನರ್ಸ್​​​ ಹೇಳಿದ್ದಾರೆ. ರಾತ್ರಿ ವೇಳೆ ನನಗೆ ರೋಗಿಗಳು ಕಿರಿಕಿರಿ ಮಾಡುತ್ತಿದ್ದರು. ಸರಿಯಾಗಿ ನಿದ್ದೆಯೂ ಬರುತ್ತಿರಲಿಲ್ಲ. ರಾತ್ರಿಯಿಂದ ಬೆಳಿಗ್ಗೆ ವರೆಗೆ ಅವರ ಸೇವೆ ಮಾಡುತ್ತ ಇರಬೇಕು. ಇದರಿಂದ ಬೇಸತ್ತು ಹೀಗೆ ಮಾಡಿದ್ದೇನೆ ಎಂದು ನರ್ಸ್​​​​ ಕೋರ್ಟ್​​ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ನರ್ಸ್​​​ ಮಾಡಿದ ಈ ಕೃತ್ಯಕ್ಕೆ ಕೋರ್ಟ್​​ ಜೀವಾವಧಿ ಶಿಕ್ಷೆ ನೀಡಿ, ಆದೇಶ ಹೊರಡಿಸಿದೆ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿರುವ ಮೀನನ್ನು ಹುಡುಕಿ ಜಾಣರೆನಿಸಿಕೊಳ್ಳಿ

ಪ್ರಕರಣಕ್ಕೆ ಸಂಬಂಧಿಸಿದ  ತನಿಖೆ ನಡೆಯುತ್ತಿದೆ:

ನರ್ಸ್​ 2007ರಲ್ಲಿ ನರ್ಸಿಂಗ್ ತರಬೇತಿ ಪೂರ್ಣಗೊಳಿಸಿ, 2020ರಲ್ಲಿ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ರಾತ್ರಿ ವೇಳೆ ಕೆಲಸ ಮಾಡಿ ಅಭ್ಯಾಸವಿಲ್ಲದ ಕಾರಣ, ರೋಗಿಗಳನ್ನು ನಿಭಾಯಿಸುವುದು ಕಷ್ಟವಾಗಿತ್ತು. ರೋಗಿಗಳ ಕಾಟ ತಡೆಯಲಾಗದೆ. ನರ್ಸ್​ ಮಾರ್ಫಿನ್ ಮತ್ತು ಮಿಡಜೋಲಮ್ ಚುಚ್ಚುಮದ್ದು ನೀಡಿದ್ದರು. ಇದು ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿದು, ಪೊಲೀಸರಿಗೆ ದೂರು ನೀಡುತ್ತಾರೆ. ಈ ಬಗ್ಗೆ ತನಿಖೆ ನಡೆಸಿ, 2024ರಲ್ಲಿ ಬಂಧಿಸುತ್ತಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಲೂ ತನಿಖೆ ನಡೆಯುತ್ತಿದೆ. ಜರ್ಮನಿಯಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿದೆ ಎಂದು ಬಿಬಿಸಿ ವರದಿ ಹೇಳಿದೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ​​​

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?