AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜನನಿಬಿಡ ರಸ್ತೆಯಲ್ಲಿ ನಗ್ನವಾಗಿ ಓಡಾಡಿದ ಯುವತಿ, ಬೆತ್ತಲೆ ಅವತಾರಕ್ಕೆ ಬೆಚ್ಚಿ ಬಿದ್ದ ಜನ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ವಿಡಿಯೋ ದೃಶ್ಯಗಳು ನೆಟ್ಟಿಗರ ಕೋಪಕ್ಕೆ ಗುರಿಯಾಗುತ್ತಿರುತ್ತವೆ. ಸದ್ಯ ಅಂತಹದೇ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಯುವತಿಯೊಬ್ಬಳು ರಾತ್ರಿ ವೇಳೆ ಜನ ನಿಬಿಡ ರಸ್ತೆಯೊಂದರಲ್ಲಿ ಬೆತ್ತಲಾಗಿ ಓಡಾಡುವ ಮೂಲಕ, ಇತತರಿಗೆ ಮುಜುಗರವನ್ನುಂಟುಮಾಡಿದ್ದಾಳೆ.

Viral Video: ಜನನಿಬಿಡ ರಸ್ತೆಯಲ್ಲಿ ನಗ್ನವಾಗಿ ಓಡಾಡಿದ ಯುವತಿ, ಬೆತ್ತಲೆ ಅವತಾರಕ್ಕೆ ಬೆಚ್ಚಿ ಬಿದ್ದ ಜನ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jun 28, 2024 | 2:07 PM

Share

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಿದರೆ, ಇನ್ನೂ ಕೆಲವೊಂದು ವಿಡಿಯೋಗಳು ನೋಡುಗರಿಗೆ ಮುಜುಗರ ಉಂಟುಮಾಡುತ್ತದೆ. ಸದ್ಯ ಅದೇ ರೀತಿಯ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಯುವತಿಯೊಬ್ಬಳು ರಾತ್ರಿಯ ವೇಳೆ ಜನ ನಿಬಿಡ ರಸ್ತೆಯಲ್ಲಿ ಬಟ್ಟೆ ಧರಿಸದೆ ನಗ್ನವಾಗಿ ಓಡಾಡಿದ್ದಾಳೆ. ಈಕೆಯ ಬೆತ್ತಲೆ ಅವತಾರ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಈ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದ್ದು, ಇಲ್ಲಿನ ಮೋಹನ್‌ ನಗರದ ಜನನಿಬಿಡ ರಸ್ತೆಯಲ್ಲಿ ರಾತ್ರಿ ಸುಮಾರು 8 ರಿಂದ 9 ಗಂಟೆಯ ವೇಳೆಯಲ್ಲಿ ಯುವತಿಯೊಬ್ಬಳು ಯಾವುದೇ ಮುಜುಗರವಿಲ್ಲದೆ ರಾಜಾರೋಷವಾಗಿ ಬೆತ್ತಲಾಗಿ ಓಡಾಡಿದ್ದಾಳೆ. ಈಕೆಯ ವರ್ತನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ವರದಿಗಳ ಪ್ರಕಾರ ಜೂನ್‌ 25 ರಂದು ಈ ಆಘಾತಕಾರಿ ಘಟನೆ ನಡೆದಿದ್ದು, ಆ ಯುವತಿ ಏಕೆ ಬೆತ್ತಲಾಗಿ ರಸ್ತೆಗಿಳಿದಳು ಎಂಬುದು ಸ್ಪಷ್ಟವಾಗಿಲ್ಲ. ಆಕೆ ಯಾರು ಮತ್ತು ಬೆತ್ತಲಾಗಿ ರಸ್ತೆಯಲ್ಲಿ ಏಕೆ ತಿರುಗಾಡುತ್ತಿದ್ದಳು ಎಂಬ ಬಗ್ಗೆ ಇದೀಗ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಶಕ್ತಿ ಸಿಂಗ್‌ (@singhshakti1982) ಎಂಬವರು “ಸಾಹಿಬಾಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಮೋಹನ್‌ ನಗರದಲ್ಲಿ ಮಹಿಳೆಯೊಬ್ಬರು ವಿವಸ್ತ್ರವಾಗಿ ತಿರುಗಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡು ಈ ಕುರಿತ ಪೋಸ್ಟ್‌ ಒಂದನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ವಿಡಿಯೋದಲ್ಲಿ ಜನ ನಿಬಿಡ ರಸ್ತೆಯಲ್ಲಿ ಯುವತಿಯೊಬ್ಬಳು ಯಾವುದೇ ಮುಜುಗರವಿಲ್ಲದೆ ರಾಜಾರೋಷವಾಗಿ ಬೆತ್ತಲಾಗಿ ಓಡಾಡುತ್ತಿರುವ ಆಘಾತಕಾರಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪುರುಷರು ಮತ್ತು ಮಹಿಳೆಯರ ನಡುವೆ ಇರುವ ವ್ಯತ್ಯಾಸ ಇಷ್ಟೇ, ಲಿಂಗ ಸಮಾನತೆ ಬಗ್ಗೆ ಸುಧಾಮೂರ್ತಿ ಹೇಳಿದ್ದೇನು?

ಜೂನ್‌ 26 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇದೆಂಥಾ ಹುಚ್ಚುತನ, ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ