Video : ಏಕಾಏಕಿ ಆಫೀಸ್ ಬಾಗಿಲು ಓಪನ್, ಅದೃಶ್ಯ ವ್ಯಕ್ತಿಯೊಂದಿಗೆ ಸಿಬ್ಬಂದಿಯ ಮಾತುಕತೆ,

ನಿಜವಾಗಿಯೂ ದೆವ್ವಗಳು ಇದೆಯಾ ಎನ್ನುವುದಕ್ಕೆ ಸ್ಪಷ್ಟವಾದ ಉತ್ತರವಿಲ್ಲವಾದರೂ, ದೆವ್ವ ಭೂತಗಳು ಇಲ್ಲವೇ ಇಲ್ಲ ಎಂದೇಳಲು ಸಾಧ್ಯವಿಲ್ಲ. ಇದೀಗ ಕಚೇರಿವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ವೊಬ್ಬರು ಬೆಳಗ್ಗಿನ ಜಾವ ಮೂರು ಗಂಟೆ ಸುಮಾರಿಗೆ ಅದೃಶ್ಯವಾದ ವ್ಯಕ್ತಿಯೊಂದಿಗೆ ಮಾತುಕತೆ ನಡೆಸುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆಯುತ್ತಿದೆ.

Video : ಏಕಾಏಕಿ ಆಫೀಸ್ ಬಾಗಿಲು ಓಪನ್, ಅದೃಶ್ಯ ವ್ಯಕ್ತಿಯೊಂದಿಗೆ ಸಿಬ್ಬಂದಿಯ ಮಾತುಕತೆ,
ವೈರಲ್​​​ ವಿಡಿಯೋ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 10, 2024 | 2:41 PM

ದೆವ್ವ ಭೂತಗಳು, ಪ್ರೇತಾತ್ಮಗಳು ಇವೆ ಎಂದು ಕೆಲವರು ನಂಬಿದರೆ, ಇನ್ನು ಕೆಲವರು ಇಲ್ಲ ಎಂದೇ ವಾದಿಸುತ್ತಾರೆ. ಆದರೆ ಒಳಗೊಳಗೆ ಭಯ ಅಂತೂ ಎಲ್ಲರಲ್ಲೂ ಇದ್ದೆ ಇರುತ್ತದೆ. ಕೆಲವೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ದೆವ್ವಗಳು ಇದೆ ಎನ್ನುವುದಕ್ಕೆ ಸಾಕ್ಷಿಯನ್ನು ಒದಗಿಸುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ, ಮುಂಜಾನೆಯ ವೇಳೆಯಲ್ಲಿ ಕಚೇರಿವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ವೊಬ್ಬರು ಅದೃಶ್ಯವಾಗಿರುವ ವ್ಯಕ್ತಿಯೊಂದಿಗೆ ಸಂವಹನ ನಡೆಸುತ್ತಿರುವ ವಿಚಿತ್ರ ವೀಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ವಿಡಿಯೋವೊಂದನ್ನು ಸಿಸಿಟಿವಿ ಈಡಿಯಟ್ಸ್ ಹೆಸರಿನ ಎಕ್ಸ್ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, “ಸೆಕ್ಯೂರಿಟಿ ಗಾರ್ಡ್ ಅದೃಶ್ಯ ವ್ಯಕ್ತಿಯನ್ನು ಬೆಳಗ್ಗೆ 3 ಗಂಟೆಗೆ ಕಚೇರಿ ಒಳಗೆ ಸ್ವಾಗತಿಸುತ್ತಾರೆ” ಎಂದು ಬರೆಯಲಾಗಿದೆ. ಈ ವಿಡಿಯೋದಲ್ಲಿ ಬೆಳಗ್ಗೆ 3 ಗಂಟೆಗೆ ಆಫೀಸಿನ ಬಾಗಿಲು ಸ್ವಯಂಚಾಲಿತವಾಗಿ ತೆರೆಯುತ್ತದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಆ ತಕ್ಷಣವೇ ಕುರ್ಚಿಯ ಮೇಲೆ ಕುಳಿತಿರುವ ಸಿಬ್ಬಂದಿ ತಕ್ಷಣವೇ ಮೇಲಕ್ಕೆ ಎದ್ದು ಕಾಣದ ಸಂದರ್ಶಕರನ್ನು ಒಳಗೆ ಸ್ವಾಗತಿಸಿ ಆ ಬಳಿಕ ಭದ್ರತಾ ತಪಾಸಣೆಯನ್ನು ಮಾಡಲಾಗುವುದನ್ನು ಕಾಣಬಹುದು. ಆ ಬಳಿಕ ಸಿಬ್ಬಂದಿಯು ಗಾಲಿ ಕುರ್ಚಿಯನ್ನು ಕೂರಲು ಕೊಟ್ಟು ಆ ಅದೃಶ್ಯವಾದ ವ್ಯಕ್ತಿಯೊಂದಿಗೆ ಮಾತನಾಡುವುದನ್ನು ನೋಡಬಹುದು. ಈ ವಿಡಿಯೋವನ್ನು ನೋಡುತ್ತಿದ್ದಂತೆ ಒಂದು ಕ್ಷಣ ಎದೆ ಝಲ್ ಎನ್ನುವಂತಿದೆ.

ಇದನ್ನೂ ಓದಿ: ರೈಲ್ವೆ ಸ್ಟೇಷನ್‌ ಬ್ರಿಡ್ಜ್‌ನಲ್ಲಿ ನಿಂತು ಸಾವರ್ಜನಿಕರ ಎದುರೇ ಪ್ರೇಮಿಗಳ ಮುತ್ತಿನಾಟ

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ನೆಟ್ಟಿಗನೊಬ್ಬರು ಇದು ನಿಜವಾಗಿಯೂ ಭ್ರಮೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ಆ ಸೆಕ್ಯೂರಿಟಿ ಗಾರ್ಡ್ ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದಾಗ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ