ಉತ್ತರಪ್ರದೇಶ: ರೀಲ್ಸ್ ಹುಚ್ಚು ಎಷ್ಟರಮಟ್ಟಿಗೆ ಮೀತಿಮೀರಿದೆ ಅಂದರೆ, ಚಿಕ್ಕಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಸಾಂಕ್ರಾಮಿಕ ರೋಗದಂತೆ ಹರಡಿದೆ. ಇದೀಗ ಬಾಲಕಿಯೊಬ್ಬಳು ರೀಲ್ಸ್ ಮಾಡಲು ಹೋಗಿ 6ನೇ ಮಹಡಿಯಿಂದ ಬಿದ್ದ ಘಟನೆ ಘಾಜಿಯಾಬಾದ್ನ ಇಂದಿರಾಪುರಂನಲ್ಲಿ ನಡೆದಿದೆ. 6ನೇ ಮಹಡಿಯಿಂದ ಬಿದ್ದ ರಭಸಕ್ಕೆ ಬಾಲಕಿ ತೀವ್ರ ಗಾಯಗೊಂಡಿದ್ದು, ನೋವು ತಡೆಯಲಾಗದೇ ಕಿರುಚುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ.
ಮೋನಿಶಾ (16) ಎಂದು ಗುರುತಿಸಲಾದ ಬಾಲಕಿ ಇಂದಿರಾಪುರಂ ಪ್ರದೇಶದಲ್ಲಿರುವ ಕ್ಲೌಡ್-9 ಸೊಸೈಟಿಯ ತನ್ನ ಮನೆಯಲ್ಲಿ ರೀಲ್ಸ್ ಮಾಡುತ್ತಿದ್ದ ವೇಳೆ ಆಯತಪ್ಪಿ 6ನೇ ಮಹಡಿಯಿಂದ ಬಿದ್ದಿದ್ದಾಳೆ. ತೀವ್ರ ಗಾಯಗೊಂಡಿದ್ದ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.
देखिए गाजियाबाद इंदिरापुरम सोसाइटी में मोनिशा अपने फ्लैट की बालकनी में खड़ी होकर अपने मोबाइल से रील वीडियो शूट कर रही थी,तभी उसके हाथ से मोबाईल छूट गया जिसको पकड़ने के चक्कर मैं वह छठवीं मंजिल से नीचे गिर गई गंभीर हालत में अस्पताल में भर्ती कराया #AAPDelhi #delhi pic.twitter.com/COBpeNUDdk
— Lavely Bakshi (@lavelybakshi) August 13, 2024
ಇದನ್ನೂ ಓದಿ: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್
@lavelybakshi ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು , ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆಗಸ್ಟ್ 13ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 9ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಪ್ರಾಣಕ್ಕೆ ಕುತ್ತು ತರವಂತಹ ಸಾಹಸದಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ