Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮುಂಬೈ ಲೋಕಲ್​ ರೈಲಿನಲ್ಲಿ ಬೆಡಗಿಯ ಬೆಲ್ಲಿ ಡ್ಯಾನ್ಸ್​; ನೆಟ್ಟಿಗರ ಆಕ್ರೋಶ

Reels : ಜಗತ್ತಿನಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದ್ದರೂ ಈ ರೀಲಿಗರ ಹಾವಿಳಿಯನ್ನು ನಿಯಂತ್ರಿಸಲು ಸಾಧ್ಯವೇ ಇಲ್ಲ ಎಂಬಂಥ ಪರಿಸ್ಥಿತಿ ಉಂಟಾಗಿದೆ. ಇದೀಗ ಮುಂಬೈ ಲೋಕಲ್ ಟ್ರೇನಿನಲ್ಲಿ ಯುವತಿಯೊಬ್ಬಳು ಬೆಲ್ಲಿ ಡ್ಯಾನ್ಸ್ ಮಾಡಿ ನೆಟ್ಟಿಗರ ಕಣ್ಣು ಕೆಂಪಾಗುವಂತೆ ಮಾಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮುಂಬೈ ರೈಲ್ವೇ ಪೊಲೀಸರು ಹಾರಿಕೆ ಉತ್ತರ ಕೊಟ್ಟಿದ್ಧಾರೆ.

Viral Video: ಮುಂಬೈ ಲೋಕಲ್​ ರೈಲಿನಲ್ಲಿ ಬೆಡಗಿಯ ಬೆಲ್ಲಿ ಡ್ಯಾನ್ಸ್​; ನೆಟ್ಟಿಗರ ಆಕ್ರೋಶ
ಮುಂಬೈ ಲೋಕಲ್​ ಟ್ರೇನಿನಲ್ಲಿ ಬೆಲ್ಲಿ ಡ್ಯಾನ್ಸ್ ಮಾಡುತ್ತಿರುವ ಯುವತಿ
Follow us
ಶ್ರೀದೇವಿ ಕಳಸದ
|

Updated on: Sep 23, 2023 | 11:53 AM

Mumbai : ದೆಹಲಿಯ ಮೆಟ್ರೋ ಮತ್ತು ಮುಂಬೈ ಲೋಕಲ್ ಟ್ರೇನ್​ಗಳು ನಿತ್ಯವೂ ಸುದ್ದಿಯಲ್ಲಿರುತ್ತವೆ. ಜಗಳ, ವಾಗ್ವಾದ, ಹೊಡದಾಟವಂತೂ ಸರ್ವೇ ಸಾಮಾನ್ಯ ಜೊತೆಗೆ ಈ ರೀಲಿಗರ ಹಾವಳಿ. ಇದೀಗ ಮುಂಬೈ ಲೋಕಲ್ ಟ್ರೇನಿನಲ್ಲಿ ಯುವತಿಯೊಬ್ಬಳು ಬೆಲ್ಲಿ ಡ್ಯಾನ್ಸ್​ (Belly Dance) ಮಾಡಿದ್ದು ವಿವಾದವನ್ನು ಹುಟ್ಟುಹಾಕಿದೆ. ಈ ಯುವತಿಯೇನೋ ಆಕರ್ಷಕವಾಗಿ ಡ್ಯಾನ್ಸ್ ಮಾಡಿದ್ದಾಳೆ, ಆದರೆ ಆಕೆ ಡ್ಯಾನ್ಸ್ ಮಾಡಿದ ಸ್ಥಳ ಸೂಕ್ತವಾಗಿಲ್ಲ ಎನ್ನುವುದು ಕೆಲವರ ಅಂಬೋಣವಾದರೆ, ಇದು ಅಸಭ್ಯತನದ ಪರಮಾವಧಿ ಎಂದು ಇನ್ನೂ ಕೆಲವರು. ಒಟ್ಟಿನಲ್ಲಿ ಈ ರೀಲು ಹೀಗೆ ಅತ್ತಿಂದಿತ್ತ ಇತ್ತಿಂದಿತ್ತ ಎಳೆದಾಡಿ ವೈರಲ್ ಆಗಿದೆ.

ಇದನ್ನೂ ಓದಿ : Viral Brain Teaser: ಗಣಿತದ ಈ ಒಗಟನ್ನು ಒಂದು ನಿಮಿಷದಲ್ಲಿ ಬಿಡಿಸಬಹುದೆ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ಮತ್ತು ಸ್ಯಾಂಡ್‌ಹರ್ಸ್ಟ್ ನಿಲ್ದಾಣಗಳ ನಡುವಿನ ಮಧ್ಯ ರೈಲ್ವೆಯ ಉಪನಗರ ವಿಭಾಗದಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ನಿಖರವಾದ ದಿನಾಂಕ ಮತ್ತು ಸ್ಥಳವನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಮುಂಬೈ ಲೋಕಲ್​ ಟ್ರೇನಿನಲ್ಲಿ ಬೆಲ್ಲಿ ಡ್ಯಾನ್ಸ್

X ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಒಟ್ಟಾರೆಯಾಗಿ ನೆಟ್ಟಿಗರು ಈ ಯುವತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳಲು ವಿಫಲಳಾಗಿರುವ ಈಕೆಯನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಲೈಕ್ಸ್​ಗಾಗಿ ಜನ ಏನನ್ನೂ ಮಾಡುತ್ತಾರೆ. ಈಕೆಗೆ ಕೌನ್ಸೆಲಿಂಗ್​ಗೆ ಕಳಿಸಬೇಕು. ಈ ವಿಡಿಯೋ ಮಾಡಲು ಸಹಕರಿಸಿದವರು ಯಾರೇ ಇದ್ದರೂ ಅವರಿಗೂ ಶಿಕ್ಷೆಯಾಗಬೇಕು ಎಂದಿದ್ದಾರೆ.

ಇದನ್ನೂ ಓದಿ : Viral: ‘ನನ್ನದು ಭಾರತದಲ್ಲಿ ತಯಾರಿಸಿದ ಐಫೋನ್ 15’ ಹೆಮ್ಮೆಪಟ್ಟ ನಟ ಮಾಧವನ್

ರೀಲಿಗರ ಹಾವಳಿ ತಪ್ಪಿಸಲು ಪ್ರತೀ ಕಂಪಾರ್ಟ್ಮೆಂಟ್​ನಲ್ಲಿ ಪೊಲೀಸರನ್ನು ನೇಮಿಸುವುದು ಅಸಾಧ್ಯ. ಹಾಗಾಗಿ ಪ್ರಯಾಣಿಕರೇ ಇವರನ್ನು ತಡೆಯಬೇಕು. ಆದರೆ ಇತರರಿಗೆ ಹಾನಿ ಮಾಡಲಾರರು ಎಂದು ಇಂಥವರನ್ನು ಬೆಂಬಲಿಸುವವರೂ ಇರುತ್ತಾರೆ. ಒಟ್ಟಾರೆಯಾಗಿ ಅಧಿಕಾರಿಗಳು ಇಂಥವರಿಗೆ ತಾಕೀತು ಮಾಡಬೇಕು ಎಂದಿದ್ಧಾರೆ ಹಲವಾರು ಮಂದಿ.

ಇದನ್ನೂ ಓದಿ : Viral: ತನ್ನ ಅಚ್ಚುಮೆಚ್ಚಿನ ‘ಜೀವಂತ ತಲೆದಿಂಬಿನೊಂದಿಗೆ’ ತಪ್ಪಿಸಿಕೊಂಡಿದ್ದ ಎರಡು ವರ್ಷದ ಹೆಣ್ಣುಮಗು

ಮುಂಬೈ ರೈಲ್ವೇ ವಿಭಾಗದ ವಿಭಾಗೀಯ ರೈಲ್ವೇ ಮ್ಯಾನೇಜರ್ ಈ ವೀಡಿಯೊ ವೈರಲ್ ಆದ ಗಮನಹರಿಸಿದ್ದಾರೆ. ರೈಲು ಪ್ರಯಾಣದ ಸಮಯದಲ್ಲಿ ಇಂತಹ ಚಟುವಟಿಕೆಗಳು ಮತ್ತು ಸಾಹಸಗಳನ್ನು ಮಾಡಕೂಡದೆಂದು ತಿಳಿಸಿದ್ಧಾರೆ. ರೈಲುಗಳು ಸಾರ್ವಜನಿಕ ಸಾರಿಗೆಯ ಸಾಧನವಾಗಿದ್ದು ಇಂತಹ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ