AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಯಿಂಟ್​ ವೀಲ್​ನಿಂದ ಹೊರಬಿದ್ದ ಬಾಲಕಿ, 60 ಅಡಿಯಲ್ಲಿ ನೇತಾಡುತ್ತಿದ್ದವಳ ರಕ್ಷಣೆಯೇ ರೋಚಕ

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಜಾತ್ರೆಯಲ್ಲಿ ಚಲಿಸುತ್ತಿದ್ದ ಜಾಯಿಂಟ್ ವೀಲ್ ನಿಂದ ಬಾಲಕಿ ಬಿದ್ದು, 60 ಅಡಿ ಎತ್ತರದಿಂದ ನೇತಾಡುತ್ತಾ ಪಾರಾಗಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಲಕಿ ಸುರಕ್ಷಿತವಾಗಿದ್ದಾಳೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ವೀಡಿಯೋ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದೆ.

ಜಾಯಿಂಟ್​ ವೀಲ್​ನಿಂದ ಹೊರಬಿದ್ದ ಬಾಲಕಿ, 60 ಅಡಿಯಲ್ಲಿ ನೇತಾಡುತ್ತಿದ್ದವಳ ರಕ್ಷಣೆಯೇ ರೋಚಕ
ಅಕ್ಷತಾ ವರ್ಕಾಡಿ
|

Updated on:Dec 06, 2024 | 3:33 PM

Share

ಉತ್ತರ ಪ್ರದೇಶ: ಚಲಿಸುತ್ತಿರುವ ಜಾಯಿಂಟ್​ ವೀಲ್​ನಿಂದ ಬಾಲಕಿ ಆಯಾತಪ್ಪಿ ಬಿದ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಲಖಿಂಪುರ ಖೇರಿಯ ನಿಘಾಸನ್ ಪ್ರದೇಶದ ರಾಕೆಹ್ತಿ ಗ್ರಾಮದ ಜಾತ್ರೆಯಲ್ಲಿ ನಡೆದ ಈ ಆಘಾತಕಾರಿ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಬಾಲಕಿ ಜಾಯಿಂಟ್​ ವೀಲ್​ನಿಂದ ಹೊರಬಿದಿದ್ದು, ಸುಮಾರು 60 ಅಡಿ ಎತ್ತರದಲ್ಲಿ ನೇತಾಡುತ್ತಾ ತನ್ನ ಪ್ರಾಣವನ್ನು ಉಳಿಸಿದ್ದಾಳೆ. ಆಕೆ ಜಾಯಿಂಟ್​ ವೀಲ್​​ನ ಕಬ್ಬಿಣದ ಸರಳು ಹಿಡಿದು ನೇತಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬಾಲಕಿ ಜಾರಿಬೀಳುವುದನ್ನು ಮತ್ತು ರಾಡ್‌ನಲ್ಲಿ ತೂಗಾಡುತ್ತಿರುವುದನ್ನು ಗಮನಿಸಿದ ಅಲ್ಲಿದ್ದ ಜನರು ಆಕೆಯನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral Video: ಉಂಗುರು ಹುಡುಕುವ ಶಾಸ್ತ್ರದಲ್ಲಿ ಪರಸ್ಪರ ಕಿತ್ತಾಡಿಕೊಂಡ ನವ ಜೋಡಿ

ಬಾಲಕಿ ಸುರಕ್ಷಿತವಾಗಿದ್ದಾರೆ ಎಂದು ಉಪ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೀವ್ ನಿಗಮ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. @gharkekalesh ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಡಿ.05 ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 30 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:18 pm, Fri, 6 December 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ