Viral Video: ನಡುರಸ್ತೆಯಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿದ ಕಾಮುಕ; ವಿಡಿಯೋ ವೈರಲ್‌

ರಸ್ತೆಯಲ್ಲಿ ಬುರ್ಖಾಧಾರಿ ಯುವತಿಯೊಬ್ಬಳು ತನ್ನ ಪಾಡಿಗೆ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಆಕೆಯ ಹಿಂದೆಯಿಂದ ಬಂದಂತಹ ಯುವಕನೊಬ್ಬ ಆ ಯುವತಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದಾನೆ. ಈ ಕುರಿತ ವಿಡಿಯೋವೊಂದು ವೈರಲ್‌ ಆಗುತ್ತಿದ್ದಂತೆ, ವಿಕೃತಿ ಮೆರೆದ ಆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

Viral Video: ನಡುರಸ್ತೆಯಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿದ ಕಾಮುಕ; ವಿಡಿಯೋ ವೈರಲ್‌
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 09, 2024 | 4:23 PM

ಕೆಲವು ವಿಕೃತ ಮನಸ್ಥಿತಿಯ ವ್ಯಕ್ತಿಗಳ ಕಾರಣದಿಂದ ಹೆಂಗಳೆಯರು ಸ್ವತಂತ್ರವಾಗಿ ಓಡಾಡಲು ಕೂಡಾ ಕಷ್ಟವಾಗಿಬಿಟ್ಟಿದೆ. ಒಂಟಿ ಹೆಣ್ಣು ಸಿಕ್ಕರೆ ಸಾಕು ಕೆಲವು ವಿಕೃತ ಮನಸ್ಥಿತಿಯವರು ಅವರ ಮೈ ಮುಟ್ಟುವಂತಹದ್ದೂ, ಹೆಣ್ಣು ಮಕ್ಕಳನ್ನು ಹಿಂಬಾಲಿಸುತ್ತಾ ಬಂದು ಅವರೊಂದಿಗೆ ಅನುಚಿತವಾಗಿ ವರ್ತಿಸುವಂತಹದ್ದು ಮಾಡುತ್ತಿರುತ್ತಾರೆ. ಇಂತಹ ನಾಚಿಕೆಗೇಡಿನ ಸಂಗತಿಗಳು ಪ್ರತಿನಿತ್ಯ ನಡೆಯುತ್ತಲೇ ಇರುತ್ತವೆ. ಇದೀಗ ಅಂತಹದೇ ಹೇಯ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಯುವತಿಯೊಬ್ಬಳು ತನ್ನ ಪಾಡಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸುತ್ತಾ ಬಂದ ಕಾಮುಕ ವ್ಯಕ್ತಿಯೊಬ್ಬ ಆಕೆಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಪರಾರಿಯಾಗಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದ್ದು, ಇಲ್ಲಿನ ಕೊತ್ವಾಲಿ ಎಂಬಲ್ಲಿ ಯುವತಿಯೊಬ್ಬಳು ತನ್ನ ಪಾಡಿಗೆ ನಡೆದುಕೊಂಡು ಹೋಗುತ್ತಿದ್ದಂತಹ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸುತ್ತಾ ಬಂದ ಕಾಮುಕನೊಬ್ಬ ನಡುರಸ್ತೆಯಲ್ಲಿಯೇ ಆ ಯುವತಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ ವಿಕೃತಿ ಮೆರೆದಿದ್ದಾನೆ. ಈ ದೃಶ್ಯ ಅಲ್ಲೇ ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪೊಲೀಸರು ಯುವತಿಯ ಮೈ ಮುಟ್ಟಿದ ಕಾಮುಕನನ್ನು ಹಿಡಿದು ಬಂಧಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ (ಎಕ್ಸ್​​ ಖಾತೆ)

ಮನೋಜ್‌ ಶರ್ಮಾ (ManojSh28986262) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕಾಮುಕನೊಬ್ಬ ನಡುರಸ್ತೆಯಲ್ಲಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ದೃಶ್ಯವನ್ನು ಕಾಣಬಹುದು. ಬುರ್ಖಾಧಾರಿ ಯುವತಿಯೊಬ್ಬಳು ತನ್ನ ಪಾಡಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುತ್ತಾಳೆ. ಆ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸುತ್ತಾ ಬಂದ ಕಾಮುಕನೊಬ್ಬ ಆಕೆಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದಿದ್ದಾನೆ.

ಇದನ್ನೂ ಓದಿ:  ನಾರಿಮಣಿಯ ನಕಲಿ ಮದುವೆ ಜಾಲ; ಹಣದಾಸೆಗೆ 50 ಜನರನ್ನು ಮದುವೆಯಾಗಿ ಸಿಕ್ಕಿಬಿದ್ದ ಕಿಲಾಡಿ ಲೇಡಿ

ಜುಲೈ 05 ರಂದು ಹಂಚಿಕೊಳ್ಳಲಾದ ಈ ವಿಡಿಯೋ 64 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಮೀರತ್‌ ಪೊಲೀಸರು ಪ್ರತಿಕ್ರಿಯಿಸಿದ್ದಾರೆ. ಇನ್ನೂ ಅನೇಕರು ಇಂತಹ ಕಾಮುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ