AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸರ್ಕಾರಿ ಕಾರಿನ ಮೇಲೆ ಹತ್ತಿ ಯುವತಿಯ ಅಶ್ಲೀಲ ನೃತ್ಯ; ವಿಡಿಯೋ ವೈರಲ್​​​

Video: ಸರ್ಕಾರಿ ಕಾರಿನ ಮೇಲೆ ಹತ್ತಿ ಯುವತಿಯ ಅಶ್ಲೀಲ ನೃತ್ಯ; ವಿಡಿಯೋ ವೈರಲ್​​​

ಅಕ್ಷತಾ ವರ್ಕಾಡಿ
|

Updated on: Nov 13, 2024 | 3:39 PM

Share

ಯುವತಿಯೊಬ್ಬಳು ಸರ್ಕಾರಿ ಕಾರಿನ ಬೊನೆಟ್‌ ಮೇಲೆ ಹತ್ತಿ ಅಶ್ಲೀಲವಾಗಿ ನೃತ್ಯ ಮಾಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಉತ್ತರ ಪ್ರದೇಶ: ಯುವತಿಯೊಬ್ಬಳು ಸರ್ಕಾರಿ ಕಾರಿನ ಬೊನೆಟ್‌ ಮೇಲೆ ಹತ್ತಿ ಅಶ್ಲೀಲವಾಗಿ ನೃತ್ಯ ಮಾಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ವೈರಲ್ ವೀಡಿಯೊದಲ್ಲಿ, ಸರ್ಕಾರಿ ಕಾರಿನ ಮೇಲೆ ‘ಉತ್ತರ ಪ್ರದೇಶ ಸರ್ಕಾರ’ ಮತ್ತು ಎಸ್‌ಡಿಎಂ ಎಂದು ಬರೆದಿರುವುದನ್ನು ಕಾಣಬಹುದು. @Manoj_Yadav_ ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಝಾನ್ಸಿ ಪೊಲೀಸರು, ವೀಡಿಯೊವನ್ನು ತನಿಖೆ ಮಾಡಲು ಮತ್ತು ಅಗತ್ಯ ಕ್ರಮ ಕೈಗೊಳ್ಳಲು ಶಹಜಹಾನ್‌ಪುರದ ಇನ್‌ಸ್ಪೆಕ್ಟರ್‌ಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕನ್ನಡಲ್ಲಿ ಪ್ರಕಟಣೆ ನೀಡಿದ ಅಂತರಾಷ್ಟ್ರೀಯ ವಿಮಾನಯಾನ ಸಂಸ್ಥೆ ಲುಫ್ತಾನ್ಸ ವಿಮಾನ

 

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More