Acid Attack: ಪ್ರೀತಿಸಿ ಮೋಸ ಮಾಡಿದ ಪ್ರಿಯಕರನ ಮೇಲೆ ಆ್ಯಸಿಡ್​ ಎರಚಿದ ಯುವತಿ!

ಮದುವೆಯ ಮೆರವಣಿಗೆಯ ವೇಳೆ ಯುವತಿ ವೇಷ ಮರೆಸಿಕೊಂಡು ಬಂದು ವರನ ಮುಖಕ್ಕೆ ಆ್ಯಸಿಡ್​ ಎರಚಿದ್ದಾಳೆ. ತಕ್ಷಣ ಕುಟುಂಬಸ್ಥರು ವರನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಾರಿಯಾಗಲು ಯತ್ನಿಸಿದ ಯುವತಿಯನ್ನು ಸ್ಥಳೀಯ ಮಹಿಳೆಯರು ಹಿಡಿದು ಸರಿಯಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

Acid Attack: ಪ್ರೀತಿಸಿ ಮೋಸ ಮಾಡಿದ ಪ್ರಿಯಕರನ ಮೇಲೆ ಆ್ಯಸಿಡ್​ ಎರಚಿದ ಯುವತಿ!
ಪ್ರಿಯಕರನ ಮೇಲೆ ಆ್ಯಸಿಡ್​ ಎರಚಿದ ಯುವತಿ

Updated on: Apr 24, 2024 | 4:08 PM

ಬಲ್ಲಿಯಾ (ಉತ್ತರ ಪ್ರದೇಶ): ಪ್ರೀತಿಸಿ ಮೋಸ ಮಾಡಿ ಮತ್ತೊಬ್ಬಳೊಂದಿಗೆ ಮದುವೆಯಾಗಲು ಮುಂದಾಗಿದ್ದ ಪ್ರಿಯಕರನ ಮುಖಕ್ಕೆ ಆತನ ಮದುವೆಯ ದಿನವೇ ಪ್ರೇಯಸಿ ಆ್ಯಸಿಡ್​ ಎರಚಿದ ಘಟನೆ ಘಟನೆ ಮಂಗಳವಾರ, ಏಪ್ರಿಲ್ 23 ಉತ್ತರಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ನಡೆದಿದೆ. ಯುವಕನ ಮುಖದ ಮೇಲೆ ಆ್ಯಸಿಡ್​​ ಬಿದ್ದ ಪರಿಣಾಮ ತಕ್ಷಣ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ತಾಯಿಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 326 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಬಲಿಯಾದ ಪೊಲೀಸ್ ಅಧಿಕಾರಿ ಮುನ್ನಾ ಲಾಲ್ ಯಾದವ್ ಹೇಳಿದ್ದಾರೆ.

ಪೋಲೀಸರ ಪ್ರಕಾರ, ಮದುವೆಯ ಮೆರವಣಿಗೆಯ ವೇಳೆ ಯುವತಿ ವೇಷ ಮರೆಸಿಕೊಂಡು ಬಂದು ವರನ ಮುಖಕ್ಕೆ ಆ್ಯಸಿಡ್​ ಎರಚಿರುವುದಾಗಿ ತಿಳಿದುಬಂದಿದೆ. ತಕ್ಷಣ ಕುಟುಂಬಸ್ಥರು ವರನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು,ಸ್ಥಳೀಯ ಮಹಿಳೆಯರು ಯುವತಿಯನ್ನು ಹಿಡಿದು ಸರಿಯಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವಕ ಪ್ರೀತಿಸಿ ಮೋಸ ಮಾಡಿರುವುದರಿಂದಾಗಿ ಕೋಪಗೊಂಡ ಯುವತಿ ಆ್ಯಸಿಡ್​ ಎರಚಿದ್ದಾಳೆ ಎಂದು ತಿಳಿದುಬಂದಿದೆ. ಇವರಿಬ್ಬರು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದು, ಪರಸ್ಪರ ದೈಹಿಕ ಸಂಪರ್ಕವನ್ನು ಹೊಂದಿದ್ದರು ಎಂದು ತಿಳಿದುಬಂದಿದೆ. ಆದ್ರೆ ಎರಡು ಕುಟುಂಬಗಳು ಈ ಸಂಬಂಧವನ್ನು ವಿರೋಧಿಸಿದ್ದರು.

ಇದನ್ನೂ ಓದಿ: ದಿನಕ್ಕೆ ನೂರು ಬಾರಿ ಕರೆ ಮಾಡಿ ಗೆಳೆಯನಿಗೆ ಹಿಂಸೆ ನೀಡುತ್ತಿದ್ದ ಹುಡುಗಿ, ವೈದ್ಯರ ಮಾತು ಕೇಳಿ ಬೆಚ್ಚಿಬಿದ್ದ ಸ್ನೇಹಿತ

ಏಪ್ರಿಲ್ 22 ರಂದು ಯುವಕನ ಮನೆಯವರು ಬೇರೆ ಯುವತಿಯೊಂದಿಗೆ ಮದುವೆ ಮಾಡಲು ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದರು. ಇದರಿಂದ ಕೋಪಗೊಂಡ ಗೆಳತಿ ಸೇಡು ತೀರಿಸಿಕೊಳ್ಳಲು ನಿರ್ಧರಿಸಿ ವೇಷ ಧರಿಸಿ ಮೆರವಣಿಗೆಯಲ್ಲಿ ಸೇರಿಕೊಂಡು ಆತನ ಮೇಲೆ ಆ್ಯಸಿಡ್​ ಎರಚಿದ್ದಾಳೆ. ಸದ್ಯ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿದ್ದರಿಂದ ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಯುವಕನನ್ನು ಮನೆಗೆ ಕರೆತರಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕೇಸು ದಾಖಲಾಗಿದ್ದು, ಯುವತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:04 pm, Wed, 24 April 24