Olympics 2024: ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂದು ಚಾಲನೆ; ವಿಶೇಷ ಡೂಡಲ್ ಮೂಲಕ ಸಂಭ್ರಮಿಸಿದ ಗೂಗಲ್‌

Paris Olympics Google Doodle: 33ನೇ ಒಲಿಂಪಿಕ್ಸ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಇಂದು (ಜು. 26) ರಾತ್ರಿ 11 ಗಂಟೆಗೆ ಆರಂಭವಾಗಲಿದೆ. ಇದೀಗ ಈ ಬಹುನಿರೀಕ್ಷಿತ ಕ್ರೀಡಾ ಜಾತ್ರೆಗೆ ಗೂಗಲ್ ವಿಶೇಷ ಡೂಡಲ್​​​ ಮೂಲಕ ​​​ಗೌರವ ನೀಡಿದೆ. ಈ ಡೂಡಲ್​​ ಮೇಲೆ ಕ್ಲಿಕ್​ ಮಾಡಿದರೆ, ಪ್ಯಾರಿಸ್ ಒಲಿಂಪಿಕ್ಸ್​ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನಿಮಗೆ ಸಿಗುವಂತೆ ವಿನ್ಯಾಸಗೊಳಿಸಲಾಗಿದೆ.

Olympics 2024: ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂದು ಚಾಲನೆ; ವಿಶೇಷ ಡೂಡಲ್ ಮೂಲಕ ಸಂಭ್ರಮಿಸಿದ ಗೂಗಲ್‌
Google Doodle
Follow us
ಅಕ್ಷತಾ ವರ್ಕಾಡಿ
|

Updated on:Jul 26, 2024 | 6:26 PM

33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ಯಾರಿಸ್​ ಸಜ್ಜಾಗಿ ನಿಂತಿದೆ. ಉದ್ಘಾಟನಾ ಸಮಾರಂಭ ಇಂದು (ಜು. 26) ರಾತ್ರಿ 11 ಗಂಟೆಗೆ ಆರಂಭವಾಗಲಿದ್ದು, ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಇದೀಗ ಈ ಬಹುನಿರೀಕ್ಷಿತ ಕ್ರೀಡಾ ಜಾತ್ರೆಯನ್ನು ಗೂಗಲ್‌ ಡೂಡಲ್‌ ಸಂಭ್ರಮಿಸಿದೆ. ವಿಶೇಷ ಡೂಡಲ್​​​ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ಗೆ ಗೂಗಲ್​​​ ವಿಶೇಷ ಗೌರವ ನೀಡಿದೆ.

ಸೀನ್​ ನದಿಯ ಮೇಲೆ ಅದ್ಧೂರಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಅದರಂತೆ ಗೂಗಲ್​​ ಡೂಡಲ್​​​ ನದಿಯ ವಿನ್ಯಾಸದಲ್ಲಿ ಡೂಡಲ್​​ ಅನ್ನು ತಯಾರಿಸಿದೆ. ಡೂಡಲ್​​ ಮೇಲೆ ಕ್ಲಿಕ್​ ಮಾಡಿದರೆ, ಪ್ಯಾರಿಸ್ ಒಲಿಂಪಿಕ್ಸ್​ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನಿಮಗೆ ಸಿಗುವಂತೆ ವಿನ್ಯಾಸಗೊಳಿಸಲಾಗಿದೆ. ಆದರೆ ಗೂಗಲ್ ಡೂಡಲ್ ಡಿಸೈನರ್ ಹೆಸರನ್ನು ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ವ್ಯಕ್ತಿಯ ಗುದನಾಳ ಸೇರಿದ್ದ 16 ಇಂಚು ಉದ್ದದ ಸೋರೆಕಾಯಿ; ಹೊರತೆಗೆಯಲು ವೈದ್ಯರ ಹರಸಾಹಸ

ಈ ಬಾರಿಯ ಒಲಿಂಪಿಯಾಡ್​ನಲ್ಲಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಕಣಕ್ಕಿಳಿಯುತ್ತಿರುವುದು ಭಾರತೀಯರಿಗೆ ಹೆಮ್ಮೆಯ ವಿಷಯ. ಪ್ಯಾರಿಸ್ ಕ್ರೀಡಾಕೂಟವನ್ನು ಜಿಯೋ ಆ್ಯಪ್ ಮೂಲಕ ಉಚಿತವಾಗಿ ವೀಕ್ಷಿಸಬಹುದು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:40 am, Fri, 26 July 24