ಸಾಮಾನ್ಯವಾಗಿ ಹುಟ್ಟಿದ ಮಕ್ಕಳಿಗೆ ತೊಟ್ಟಿಲು ಶಾಸ್ತ್ರ ಮಾಡುವಂತಹ ಸಂಪ್ರದಾಯ ನಮ್ಮಲ್ಲಿದೆ. ಆದ್ರೆ ನೀವು ಎಂದಾದರೂ ಕರುವಿಗೆ ತೊಟ್ಟಿಲು ಶಾಸ್ತ್ರವನ್ನು ಮಾಡುವುದನ್ನು ನೋಡಿದ್ದೀರಾ? ಈ ಹಿಂದೆ ಸಾಕು ಪ್ರಾಣಿಗಳಿಗೆ ಮನೆಯವರು ಸೀಮಂತ ಶಾಸ್ತ್ರ ಮಾಡಿಸಿದಂತಹ ಸುದ್ದಿಗಳನ್ನು ಕೇಳಿರುತ್ತೀರಿ ಅಲ್ವಾ. ಅದೇ ರೀತಿ ಇಲ್ಲೊಂದು ಕಡೆ ಮುದ್ದು ಕರುವಿಗೆ ತೊಟ್ಟಿಲು ಶಾಸ್ತ್ರವನ್ನು ನೆರವೇರಿಸಲಾಗಿದೆ. ಹೌದು ಪುಟಾಣಿ ಮಗುವಿಗೆ ಮಾಡಿಸುವಂತೆ ಕರುವಿಗೆ ಅದ್ದೂರಿ ತೊಟ್ಟಿಲುಶಾಸ್ತ್ರ ಮಾಡಿಸಿದ್ದಾರೆ. ಈ ಕುರಿತ ಮುದ್ದಾದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಈ ದೃಶ್ಯ ಇದೀಗ ನೆಟ್ಟಿಗರ ಮನ ಗೆದ್ದಿದೆ.
ಉಡುಪಿ ಜಿಲ್ಲೆಯ ಕಾರ್ಕಳದ ಬಂಡಿಮಠದ ಅನಂತಕೃಷ್ಣ ಗೋಶಾಲೆಯಲ್ಲಿ ಕರುವಿಗೆ ಅದ್ದೂರಿ ತೊಟ್ಟಿಲು ಶಾಸ್ತ್ರವನ್ನು ನೆರವೇರಿಸಲಾಗಿದೆ. ಈ ಕುರಿತ ವಿಡಿಯೋವನ್ನು ಆದರ್ಶ್ ಹೆಗ್ಡೆ (adarshahgd) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಶಾಸ್ತ್ರೋಕವಾಗಿ ನಾಮಕರಣ ಶಾಸ್ತ್ರ ನೆರವೇರಿಸುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಮಂತ್ರಗಳನ್ನು ಪಠಿಸುತ್ತಾ ಕರುವನ್ನು ಮಗುವಿನಂತೆ ತೊಟ್ಟಿಲಲ್ಲಿ ಕೂರಿಸಿ ತೊಟ್ಟಿಲು ಶಾಸ್ತ್ರ ಮಾಡಿಸಿದ್ದಾರೆ.
A new born calf was welcomed like this by their Yajamana and his family 🙂 pic.twitter.com/jxBjZ99rPG
— Adarsh Hegde (@adarshahgd) January 9, 2025
ಮತ್ತಷ್ಟು ಓದಿ:ಮನುಷ್ಯರನ್ನು ನೀರಿಗಿಳಿಯುವಂತೆ ಮಾಡಲು ಸಾವಿನ ನಾಟಕವಾಡುವ ಖತರ್ನಾಕ್ ಮೊಸಳೆಗಳು; ವಿಡಿಯೋ ವೈರಲ್
ಜನವರಿ 9 ರಂದು ಹಂಚಿಕೊಳ್ಳಲಾದ ಈ ವಿಡಿಯೋ 95 ಸಾವಿರ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼತುಂಬಾ ಅದ್ಭುತವಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಗೋವುಗಳನ್ನು ಕುಟುಂಬ ಸದಸ್ಯರಂತೆ ಕಾಣುವ ಸಂಸ್ಕೃತಿ ನಮ್ಮ ದೇಶದಲ್ಲಿ ಮಾತ್ರ ಕಾಣಲು ಸಾದ್ಯʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಈ ದೃಶ್ಯಕ್ಕೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:59 am, Sat, 11 January 25