AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಿಜ್ಜಾ ಆರ್ಡರ್ ಮಾಡಿ ಅಜ್ಜಿಗೆ ಸರ್ಪ್ರೈಸ್ ಕೊಟ್ಟ ಮೊಮ್ಮಗಳು

ಪಿಜ್ಜಾ ಅಂದ್ರೆ ಎಲ್ಲರಿಗೂ ಇಷ್ಟನೇ. ಮಕ್ಕಳಿಂದ ಹಿಡಿದು ದೊಡ್ಡವರೆಗೂ ಬಾಯಿ ಚಪ್ಪರಿಸಿಕೊಂಡು ತಿಂತಾರೆ. ಆದರೆ ಮೊಮ್ಮಗಳೊಬ್ಬಳು ತನ್ನ 92 ವರ್ಷದ ಈ ಅಜ್ಜಿಗೆ ಪಿಜ್ಜಾ ಆರ್ಡರ್ ಮಾಡಿ ಖುಷಿ ಪಡಿಸಿದ್ದಾಳೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪಿಜ್ಜಾ ಆರ್ಡರ್ ಮಾಡಿ ಅಜ್ಜಿಗೆ ಸರ್ಪ್ರೈಸ್ ಕೊಟ್ಟ ಮೊಮ್ಮಗಳು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 11, 2026 | 1:05 PM

Share

ಅಜ್ಜ ಅಜ್ಜಿಯಂದಿರು (grandparents) ಪಿಜ್ಜಾ, ಬರ್ಗರ್ ಹಾಗೂ ಫಾಸ್ಟ್ ಫುಡ್ ಕೊಟ್ಟರೆ ಇಷ್ಟ ಪಟ್ಟು ತಿನ್ನುವುದು ಕಡಿಮೆಯೇ. ಆದರೆ 92 ವರ್ಷದ ಈ ಅಜ್ಜಿ ಮಾತ್ರ ಪಿಜ್ಜಾ ಪ್ರಿಯೆ. ಹೀಗಾಗಿ ಮೊಮ್ಮಗಳು ಅಜ್ಜಿಗಾಗಿ ಪಿಜ್ಜಾ ಆರ್ಡರ್ ಮಾಡಿ ಸರ್ಪ್ರೈಸ್  (surprise) ನೀಡಿದ್ದಾಳೆ. ಮನೆ ಬಾಗಿಲಿಗೆ ಡೆಲಿವರಿ ಬಾಯ್ ಪಿಜ್ಜಾ ತಂದು ಕೊಡುತ್ತಿದ್ದಂತೆ ಅಜ್ಜಿ ಫುಲ್ ಖುಷ್‌ ಆಗಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.

ವ್ಯೂಸ್ ಅಂಡ್ ಬ್ರೇವ್ಸ್ ಬೈ ಹರ್ಷದ (ViewsandBrews by Harshada) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಅಜ್ಜಿಯೊಬ್ಬರು ಮನೆಬಾಗಿಲಿಗೆ ಬಂದ ಡೆಲಿವರಿಯನ್ನು ತೆಗೆದುಕೊಂಡಿದ್ದಾರೆ. ಡೆಲಿವರಿ ಬಾಯ್ ಪಿಜ್ಜಾ ಕೈಗೆ ಕೊಡುತ್ತಿದ್ದಂತೆ ಅಜ್ಜಿಯ ಮೊಗದಲ್ಲಿ ನಗು ಮೂಡಿದೆ. ಮೊಮ್ಮಗಳು ಪಿಜ್ಜಾ ಆರ್ಡರ್ ಮಾಡಿ ಸರ್ಪ್ರೈಸ್ ಕೊಟ್ಟಿರುವುದಕ್ಕೆ ಅಜ್ಜಿ ಖುಷಿಯಾಗಿದ್ದಾರೆ. ಈ ಬಾಕ್ಸ್ ಓಪನ್ ಮಾಡಿ ಬಾಯಿ ಚಪ್ಪರಿಸಿಕೊಂಡು ಈ ವೃದ್ಧ ಮಹಿಳೆ ಪಿಜ್ಜಾ ತಿನ್ನೋದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: Video: ಮಗಳ ಹುಟ್ಟುಹಬ್ಬಕ್ಕೆ ಟ್ರಕ್ ಒಳಗೆ ಅಲಂಕರಿಸಿ ಸರ್ಪ್ರೈಸ್ ನೀಡಿದ ತಂದೆ

ಈ ವಿಡಿಯೋ ಇದುವರೆಗೆ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅಜ್ಜಿ ತುಂಬಾ ಕ್ಯೂಟ್ ಆಗಿದ್ದಾರೆ ಎಂದಿದ್ದಾರೆ. ಮತ್ತೊಬ್ಬರು, ಅಜ್ಜಿಯ ನಗು ನನ್ನ ಹೃದಯವನ್ನೇ ಕರಗಿಸಿತು ಎಂದು ಹೇಳಿದ್ದಾರೆ. ಇನ್ನೊಬ್ಬರು, ಅಜ್ಜಿ ಎಂಜಾಯ್ ಮಾಡಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು