AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಜ್ಜಿಯ ಮುಂದೆ ಪ್ರತ್ಯಕ್ಷನಾಗಿ ಸರ್ಪ್ರೈಸ್ ನೀಡಿದ ಮೊಮ್ಮಗ

ಹಿರಿಜೀವಗಳೇ ಹಾಗೆ, ತಮ್ಮ ಮೊಮ್ಮಕ್ಕಳ ಆಗಮನವನ್ನು ಸಂಭ್ರಮಿಸುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮೊಮ್ಮಗನು ಬಹಳ ದಿನಗಳ ನಂತರ ಅಜ್ಜಿಯನ್ನು ಕಾಣಲು ಬಂದಿದ್ದು, ಮೊಮ್ಮಗನನ್ನು ನೋಡಿದ ಅಜ್ಜಿಯ ಖುಷಿಯೇ ಪಾರಾವೇ ಇಲ್ಲದಂತಾಗಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಜ್ಜಿಯ ಮುಂದೆ ಪ್ರತ್ಯಕ್ಷನಾಗಿ ಸರ್ಪ್ರೈಸ್ ನೀಡಿದ ಮೊಮ್ಮಗ
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on:Dec 31, 2025 | 1:26 PM

Share

ಅಜ್ಜ ಅಜ್ಜಿಯಂದಿರೆಂದರೆ (grandparents) ಮೊಮ್ಮಕ್ಕಳಿಗೆ ತುಂಬಾನೇ ಇಷ್ಟ. ಹೀಗಾಗಿ ಮೊಮ್ಮಕ್ಕಳು  ಶಾಲೆಗೆ ರಜೆ ಸಿಕ್ಕರೆ ಸಾಕು ಅಜ್ಜಿ ಮನೆಗೆ ಓಡಿ ಬರುತ್ತಾರೆ. ಆದರೆ ಇಲ್ಲೊಬ್ಬ ಮೊಮ್ಮಗನು ಅಜ್ಜಿಗೆ ಸರ್ಪ್ರೈಸ್ ನೀಡಿದ್ದಾನೆ. ಬಹಳ ದಿನಗಳ ಬಳಿಕ ಅಜ್ಜಿಯನ್ನು ಕಾಣಲು ಊರಿಗೆ ಬಂದಿದ್ದಾನೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಅಜ್ಜಿಯ ಮುಂದೆ ಬಂದು ನಿಲ್ಲುತ್ತಿದ್ದಂತೆ ಮೊಮ್ಮಗನನ್ನು ಕಂಡ ಖುಷಿ ಹಿರಿಜೀವದ ಮೊಗದಲ್ಲಿ ವ್ಯಕ್ತವಾಗಿದೆ. ಅಜ್ಜಿ ಹಾಗೂ ಮೊಮ್ಮಗನ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ.

ಸೂರಜ್ (@SURAJ_624) ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಅಜ್ಜಿ ತಮ್ಮ ಮೊಮ್ಮಗ ಬಹಳ ದಿನಗಳ ನಂತರ ಮನೆಗೆ ಬಂದಿರುವುದನ್ನು ನೋಡಿ ತುಂಬಾ ಸಂತೋಷಪಟ್ಟರು ಎಂದು ಶೀರ್ಷಿಕೆಯನ್ನು ನೀಡಲಾಗಿದೆ. ಈ ವಿಡಿಯೋದಲ್ಲಿ ವೃದ್ಧೆಯೊಬ್ಬರು ಹೊಲದಲ್ಲಿ ಕೆಲಸ ಮಾಡುತ್ತಿರುವುದನ್ನು ಕಾಣಬಹುದು. ಈ ವೇಳೆ ಮೊಮ್ಮಗನು ಹೇಳದೇನೆ ಅಜ್ಜಿಯ ಮುಂದೆ ಪ್ರತ್ಯಕ್ಷನಾಗಿ ಸರ್ಪ್ರೈಸ್ ನೀಡಿದ್ದಾನೆ. ಮೊಮ್ಮಗನನ್ನು ನೋಡಿದ ಖುಷಿಯೇ ಅಜ್ಜಿಗೆ ಮಾತೇ ಬರುತ್ತಿಲ್ಲ. ಮೊಮ್ಮಗನನ್ನು ತಬ್ಬಿಕೊಂಡು ತನ್ನ ಖುಷಿಯನ್ನು ಹೊರಹಾಕಿರುವುದನ್ನು ಕಾಣಬಹುದು. ಆ ಬಳಿಕ ಅಜ್ಜಿ ಮೊಮ್ಮಗ ಕೆಲಸದ ಬಗ್ಗೆ ಮಾತನಾಡುತ್ತಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಅಜ್ಜಿಯನ್ನು ಸೈಕಲ್ ಮೇಲೆ ಕೂರಿಸಿಕೊಂಡು ಮುಗ್ಗರಿಸಿ ಬಿದ್ದ ಪುಟಾಣಿ

ಡಿಸೆಂಬರ್ 30 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ತುಂಬಾ ಮುದ್ದಾದ ಸಂಬಂಧ ಎಂದಿದ್ದಾರೆ. ಇನ್ನೊಬ್ಬರು, ಇದು ನಿಜವಾದ ಸಂತೋಷ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಈ ವಿಡಿಯೋ ನೋಡಿ ನನ್ನ ಅಜ್ಜಿ ನೆನಪಾದರು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Wed, 31 December 25

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ