AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಅಜ್ಜನನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದ ಮುದ್ದಿನ ಮೊಮ್ಮಗ, ಕೊನೆಗೂ ಈಡೇರಿತು ಅಜ್ಜನ ಆಸೆ

ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಚೆನ್ನಾಗಿ ಓದಿ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಂಡು ತನ್ನ ಕುಟುಂಬದ ಸಣ್ಣ ಪುಟ್ಟ ಆಸೆಯನ್ನು ಈಡೇರಿಸಬೇಕು. ಹಾಗೂ ತನ್ನವರನ್ನು ದೂರದ ಊರುಗಳಿಗೆ ಕರೆದುಕೊಂಡು ಹೋಗಿ ಸುತ್ತಾಡಿಸಬೇಕು ಎನ್ನುವುದಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪೈಲೆಟ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬನು ತನ್ನ ಅಜ್ಜನನ್ನು ವಿಮಾನದಲ್ಲಿ ಕರೆದುಕೊಂಡು ಹೋಗಿದ್ದು ಈ ಬಗೆಗಿನ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಹಿರಿ ಜೀವಗಳನ್ನು ವಿಮಾನದಲ್ಲಿ ಕರೆದುಕೊಂಡು ಹೋದ ಈ ವ್ಯಕ್ತಿಗೆ ಎಲ್ಲರೂ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral :  ಅಜ್ಜನನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದ ಮುದ್ದಿನ ಮೊಮ್ಮಗ, ಕೊನೆಗೂ ಈಡೇರಿತು ಅಜ್ಜನ ಆಸೆ
ವೈರಲ್ ವಿಡಿಯೋ Image Credit source: Instagram
ಸಾಯಿನಂದಾ
|

Updated on: Apr 27, 2025 | 6:24 PM

Share

ತಂದೆ ತಾಯಿಗೆ ತಮ್ಮ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ (job) ಪಡೆದು ಜೀವನದಲ್ಲಿ ಸೆಟಲ್ ಆಗಬೇಕೆನ್ನುವ ಆಸೆಯಿರುವುದು ಸಹಜ. ಅದೇ ರೀತಿ ಒಂದೊಳ್ಳೆ ಉದ್ಯೋಗ ಸಿಕ್ಕ ಬಳಿಕ ಅಪ್ಪ ಅಮ್ಮ, ಅಜ್ಜ ಅಜ್ಜಿ ಮನೆಯ ಎಲ್ಲರನ್ನು ಚೆನ್ನಾಗಿ ನೋಡಿಕೊಳ್ಳಬೇಕೆನ್ನುವುದು ಪ್ರತಿಯೊಬ್ಬ ವ್ಯಕ್ತಿಯ ಕನಸು. ಒಳ್ಳೆಯ ಸಂಸ್ಥೆಯಲ್ಲಿ ಉದ್ಯೋಗ ಪಡೆದು ತನ್ನವರನ್ನು ಖುಷಿ ಪಡಿಸುವ ಹಾಗೂ ಅವರ ಸಣ್ಣ ಪುಟ್ಟ ಆಸೆಗಳನ್ನು ಈಡೇರಿಸುವ ಘಳಿಗೆ ಬಂದರೆ ಅದನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಹೌದು, ಇಂಡಿಗೋ ವಿಮಾನಯಾನ ಸಂಸ್ಥೆಯ ಪೈಲಟ್ (pilot of indigo airlines) ಆಗಿರುವ ಪ್ರದೀಪ್ ಕೃಷ್ಣನ್ (pradeep krishnan) ಅವರು ತಮ್ಮ ಅಜ್ಜ ಅಜ್ಜಿಯನ್ನು ವಿಮಾನದಲ್ಲಿ ಕರೆದುಕೊಂಡು ಹೋಗುವ ಮೂಲಕ ಅವರ ಆಸೆಯನ್ನು ಈಡೇರಿಸುವ ಕೆಲಸ ಮಾಡಿದ್ದಾರೆ.

ಹೌದು, ಇಂಡಿಗೋ ವಿಮಾನಯಾನ ಸಂಸ್ಥೆಯ ಪೈಲಟ್ ಆಗಿ ಕೆಲಸ ಮಾಡುತ್ತಿರುವ ಪ್ರದೀಪ್ ಕೃಷ್ಣನ್ ಅವರು ತಮ್ಮ ಕುಟುಂಬದ ಜೊತೆಗಿನ ವಿಮಾನ ಪ್ರಯಾಣದ ಬಗೆಗಿನ ವಿಡಿಯೋವನ್ನು capt pradeepkrishnan ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಈ ವಿಮಾನವು ಚೈನ್ನೈ ಯಿಂದ ಕೊಯಮತ್ತೂರಿಗೆ ಹೊರಟಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ತನ್ನ ಅಜ್ಜಿ ಮತ್ತು ತಾಯಿ ಕೂಡ ಇದ್ದಾರೆ ಎಂದು ಹೇಳಿಕೊಂಡಿದ್ದಾರೆ. ‘ನನ್ನ ಕುಟುಂಬ ನನ್ನೊಂದಿಗೆ ಪ್ರಯಾಣಿಸುತ್ತಿದೆ ಎಂದು ಘೋಷಿಸಲು ತುಂಬಾ ಸಂತೋಷವಾಗಿದೆ. ನನ್ನ ತಾತ, ಅಜ್ಜಿ, ಅಮ್ಮ 29 ನೇ ಸಾಲಿನಲ್ಲಿ ಕುಳಿತಿದ್ದಾರೆ. ನನ್ನ ಅಜ್ಜ ಇಂದು ನನ್ನೊಂದಿಗೆ ಮೊದಲ ಬಾರಿಗೆ ವಿಮಾನದಲ್ಲಿ ಹಾರುತ್ತಿದ್ದಾರೆ. ಹೌದು, ನಾನು ಅವರ TVS50 ಕಾರಿನ ಹಿಂದಿನ ಸೀಟಿನಲ್ಲಿ ಹಲವು ಬಾರಿ ಪ್ರಯಾಣಿಸಿದ್ದೇನೆ, ಈಗ ಅವರಿಗೆ ಸವಾರಿ ಮಾಡುವ ಸರದಿ ನನ್ನದು’ ಎಂದು ಖುಷಿಯಿಂದ ಹೇಳಿಕೊಂಡಿರುವುದನ್ನು ಕಾಣಬಹುದು. ಈ ವೇಳೆಯಲ್ಲಿ ಈ ವಿಮಾನದಲ್ಲಿ ಪ್ರಯಣಿಸುತ್ತಿರುವ ಪ್ರಯಾಣಿಕರು ಜೋರಾಗಿ ಚಪ್ಪಾಳೆ ತಟ್ಟಿದ್ದಾರೆ. ಈ ವೇಳೆಯಲ್ಲಿ ಪ್ರದೀಪ್ ಕೃಷ್ಣನ್ ಅವರ ಅಜ್ಜ ಎದ್ದು ನಿಂತು ಸಹಪ್ರಯಾಣಿಕರಿಗೆ ನಮಸ್ಕಾರಿಸಿದ್ದಾರೆ.

ಇದನ್ನೂ ಓದಿ
Image
ಶಸ್ತ್ರಚಿಕಿತ್ಸೆಯ ಸಾಧನ ಬಳಸಿ ಹರಿದ ಚಪ್ಪಲಿ ಹೊಲಿದ ವೈದ್ಯಕೀಯ ವಿದ್ಯಾರ್ಥಿ
Image
ಇದು ಬಾಯಲ್ಲಿ ನೀರೂರಿಸುವ ಫ್ರೂಟ್ ಐಸ್ ಗೋಲಾ
Image
ಈ ಸ್ಪೆಷಲ್‌ ಎಳನೀರಿನ ಟೀಯನ್ನು ಯಾವತ್ತಾದ್ರೂ ಕುಡಿದಿದ್ದೀರಾ?
Image
ಚೀನಾದಲ್ಲಿ ರಿಮೋಟ್ ಕಂಟ್ರೋಲ್ ಹಾಸಿಗೆ! ವಿಶೇಷತೆ ತಿಳಿದರೆ ಆಶ್ಚರ್ಯ ಆಗುತ್ತೆ

ಇದನ್ನೂ ಓದಿ : Viral : ಹರಿದ ಚಪ್ಪಲಿ ಹೊಲಿಯಲು ಸರ್ಜಿಕಲ್ ಸೂಜಿ, ದಾರ ಬಳಸಿದ ವೈದ್ಯಕೀಯ ವಿದ್ಯಾರ್ಥಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ಹೃದಯಸ್ಪರ್ಶಿ ವಿಡಿಯೋವೊಂದು ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ನೆಟ್ಟಿಗರು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ. ಬಳಕೆದಾರರೊಬ್ಬರು, ಇಂತಹ ಮೊಮ್ಮಗನನ್ನು ಪಡೆದ ನೀವೇ ಧನ್ಯರು ಎಂದಿದ್ದಾರೆ. ಇನ್ನೊಬ್ಬರು, ಇದು ಪ್ರತಿಯೊಬ್ಬ ಮಧ್ಯಮ ವರ್ಗದ ವ್ಯಕ್ತಿಯ ಕನಸು ಎಂದಿದ್ದಾರೆ. ಇನ್ನೊಬ್ಬರು, ಅಣ್ಣ ನೀವು ನಿಜಕ್ಕೂ ನಮಗೆಲ್ಲರಿಗೂ ಮಾದರಿಯಾಗಿದ್ದೀರಿ ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ. ಇನ್ನು ಕೆಲವರು ಈ ವಿಡಿಯೋಗೆ ಹೃದಯದ ಸಿಂಬಲ್ ಕಳುಹಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಮಂಟಪದಲ್ಲೇ ವರನಿಗೆ ಇರಿತ; 2 ಕಿಮೀ ದಾಳಿಕೋರರ ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ
ಮಂಟಪದಲ್ಲೇ ವರನಿಗೆ ಇರಿತ; 2 ಕಿಮೀ ದಾಳಿಕೋರರ ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ