AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಜ್ಜ ಅಜ್ಜಿಯ ಜತೆಗೆ ಮೊದಲ ವಿಮಾನ ಪ್ರಯಾಣ; ಹಿರಿಜೀವಗಳ ಕನಸನ್ನು ನನಸಾಗಿಸಿದ ಮೊಮ್ಮಗ

ಪ್ರತಿಯೊಬ್ಬ ಮಕ್ಕಳಿಗೂ ತಮ್ಮ ಹೆತ್ತವರು ಹಾಗೂ ಅಜ್ಜ ಅಜ್ಜಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎನ್ನುವುದಿರುತ್ತದೆ. ಇದೀಗ ಇಲ್ಲೊಬ್ಬ ಮೊಮ್ಮಗ ತನ್ನ ಅಜ್ಜ ಅಜ್ಜಿಯನ್ನು ವಿಮಾನ ಹತ್ತಿಸಿದ್ದಾನೆ. ಮೊದಲ ಬಾರಿಗೆ ದುಬೈ ಕರೆದುಕೊಂಡು ಹೋಗಿರುವ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಜ್ಜ ಅಜ್ಜಿಯ ಜತೆಗೆ ಮೊದಲ ವಿಮಾನ ಪ್ರಯಾಣ; ಹಿರಿಜೀವಗಳ ಕನಸನ್ನು ನನಸಾಗಿಸಿದ ಮೊಮ್ಮಗ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 18, 2026 | 2:33 PM

Share

ಆಕಾಶದಲ್ಲಿ ಹಾರಾಡುವ ವಿಮಾನವನ್ನು (plane) ನಾವು ನೀವುಗಳು ಒಮ್ಮೆಯಾದ್ರು ವಿಮಾನದಲ್ಲಿ ಹೋಗಬೇಕು ಅಂದುಕೊಳ್ಳುತ್ತೇವೆ. ಆ ಕ್ಷಣ ಬಂತೆಂದರೆ ಅದನ್ನು ವಿವರಿಸಲು ಪದಗಳು ಸಾಕಾಗಲ್ಲ. ಇದೀಗ ಮೊಮ್ಮಗನೊಬ್ಬ ಹಿರಿಜೀವಗಳ ಆಸೆಯನ್ನು ಈಡೇರಿಸಿದ್ದಾನೆ. ಅಜ್ಜ ಅಜ್ಜಿಯನ್ನು (Grand parents) ವಿಮಾನ ಹತ್ತಿಸಿ ದುಬೈಗೆ ಕರೆದುಕೊಂಡು ಹೋಗಿ ಸುತ್ತಿಸಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದಿದೆ.

ಅಂಕಿತ್ ಬಿಗ್ ಮೌತ್ (ankitranabigmouth) ಹೆಸರಿನ ಇನ್ಸ್ಟಾಗ್ರಾಮ್ ವಿಡಿಯೋ ಹಂಚಿಕೊಂಡಿದ್ದಾನೆ. ತನ್ನ ಮುದ್ದಿನ ಅಜ್ಜ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿದ್ದಾನೆ. ಈ ವಿಡಿಯೋಗೆ ದಾದಿ ಜೀಯ ಮೊದಲ ವಿಮಾನ ಪ್ರಯಾಣ ಎಂಬ ಶೀರ್ಷಿಕೆ ನೀಡಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

ಈ ಕ್ಲಿಪಿಂಗ್ ನಲ್ಲಿ ಅಜ್ಜ ಅಜ್ಜಿಯನ್ನು ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಬಂದಿರುವುದನ್ನು ಕಾಣಬಹುದು. ಮೊಮ್ಮಗನ ಜೊತೆ ವಿಮಾನದಲ್ಲಿ ಏರ್‌ಪೋರ್ಟ್‌ಗೆ ತೆರಳಿ ಅಲ್ಲಿಂದ ದುಬೈಗೆ ವಿಮಾನ ಪ್ರಯಾಣಿಸಿದ್ದಾರೆ. ಈ ಹಿರಿಜೀವಗಳು ತಮ್ಮ ಜೀವನದಲ್ಲಿ ಮೊದಲ ಬಾರಿಗೆ ಎತ್ತರದ ಕಟ್ಟಡಗಳು, ವಿಮಾನ ಪ್ರಯಾಣ, ದೊಡ್ಡ ಹೋಟೆಲ್‌ಗಳು ಮತ್ತು ಈಜುಕೊಳಗಳನ್ನು ನೋಡಿದ್ದಾರೆ. ಇವೆಲ್ಲವನ್ನೂ ನೋಡಿ ಅಕ್ಷರಶಃ ಮೂಕರಾಗಿದ್ದಾರೆ. ಅಜ್ಜ ಅಜ್ಜಿಯ ಪ್ರತಿಕ್ರಿಯೆ ಹಾಗೂ ದುಬೈನಲ್ಲಿ ಕಳೆದ ಸುಂದರ ಕ್ಷಣಗಳನ್ನು ತನ್ನ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾನೆ.

ಇದನ್ನೂ ಓದಿ: ಊರುಗೋಲನ್ನೇ ಕುಳಿತುಕೊಳ್ಳುವ ಆಸನವನ್ನಾಗಿ ಮಾಡಿಕೊಂಡ ವೃದ್ಧ

ಈ ವಿಡಿಯೋ 3 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಹಿರಿಜೀವಗಳ ಕನಸನ್ನು ನನಸು ಮಾಡಿದ ಮೊಮ್ಮಗ ಎಂದಿದ್ದಾರೆ. ಇನ್ನೊಬ್ಬರು, ಮುಗ್ಧ ಜೀವಗಳಿಗೆ ಹೊಸ ಲೋಕದ ಅನಾವರಣ ಎಂದು ಹೇಳಿದ್ದಾರೆ. ಮತ್ತೊಬ್ಬರು, ಮತ್ತೆ ಮತ್ತೆ ನೋಡಬೇಕೆನಿಸುವ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು