Viral : ವಧುವಿನ ಮನೆ ಮೇಲೆ ನೋಟಿನ ಮಳೆಗೈಯಲು ವಿಮಾನವನ್ನೇ ಬಾಡಿಗೆ ಪಡೆದ ವರನ ತಂದೆ, ವಿಡಿಯೋ ವೈರಲ್
ಸೋಶಿಯಲ್ ಮೀಡಿಯಾದಲ್ಲಿ ವಿಲಕ್ಷಣ ವಿವಾಹದ ಪ್ರವೃತ್ತಿಗಳನ್ನು ನೋಡುತ್ತಿರುತ್ತೇವೆ. ಕೆಲವು ಮದುವೆ ಸಮಾರಂಭಗಳು ವಿಶೇಷತೆಗಳಿಂದ ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಈ ವೈರಲ್ ಆಗಿರುವ ವಿಡಿಯೋ ಪಾಕಿಸ್ತಾನದಲ್ಲಿ ವರನ ತಂದೆ ತನ್ನ ಮಗನ ಮದುವೆಗೆ ವಿಮಾನವನ್ನು ಬಾಡಿಗೆಗೆ ತೆಗೆದುಕೊಂಡು ವಧುವಿನ ಮನೆಯ ಮೇಲೆ ಲಕ್ಷಾಂತರ ರೂಪಾಯಿ ನೋಟಿನ ಮಳೆಗೈದಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುವ ಮೂಲಕ ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.
ಮದುವೆ ಎಂಬುದು ಪ್ರತಿಯೊಬ್ಬರ ಬದುಕಿನ ಅಮೂಲ್ಯ ಕ್ಷಣವಾಗಿದ್ದು, ಈ ಕ್ಷಣವನ್ನು ಸ್ಮರಣೀಯವನ್ನಾಗಿಸಲು ಬಯಸುತ್ತಾರೆ. ಮದುವೆ ಸಮಾರಂಭವನ್ನು ಸ್ಪೆಷಲ್ ಆಗಿ ಆಚರಿಸುವ ಮೂಲಕ ಸುದ್ದಿಯಾಗುತ್ತಾರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವರನ ತಂದೆ ತನ್ನ ಮಗನ ಮದುವೆಗೆ ವಿಮಾನವನ್ನು ಬಾಡಿಗೆಗೆ ಪಡೆದು ವಧುವಿನ ಮನೆಯ ಮೇಲೆ ನೋಟಿನ ಮಳೆಗೈದಿದ್ದಾರೆ. ಆಕಾಶದಲ್ಲಿ ಹಾರಾಡುತ್ತಿರುವ ವಿಮಾನದಿಂದ ನೋಟನ್ನು ಬೀಳಿಸುತ್ತಿರುವ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ. ಈ ಘಟನೆಯೂ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹೈದರಾಬಾದ್‌ನಲ್ಲಿ ನಡೆದಿದೆ ಎನ್ನಲಾಗಿದೆ.
ಈ ವಿಡಿಯೋವನ್ನು amalqa ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ವರನ ತಂದೆ ತನ್ನ ಮಗನ ಮದುವೆಗೆ ವಿಮಾನವನ್ನು ಬಾಡಿಗೆಗೆ ತೆಗೆದುಕೊಂಡು ವಧುವಿನ ಮನೆಯ ಮೇಲೆ ನೋಟಿನ ಮಳೆಗೈದಿದ್ದಾರೆ. ವರನು ತನ್ನ ತಂದೆಯ ಋಣವನ್ನು ತನ್ನ ಜೀವನದುದ್ದಕ್ಕೂ ತೀರಿಸುತ್ತಾನೆ ಎಂದು ಶೀರ್ಷಿಕೆ ನೀಡಲಾಗಿದೆ. ಈ ವೀಡಿಯೊದಲ್ಲಿ ವಿಮಾನವು ಆಕಾಶದಲ್ಲಿ ಹಾರುತ್ತಿರುವುದನ್ನು ಸ್ಪಷ್ಟವಾಗಿ ನೋಡಬಹುದು. ಸ್ವಲ್ಪ ಸಮಯದ ನಂತರ ಈ ವಿಮಾನದಿಂದ ರಾಶಿ ರಾಶಿ ನೋಟುಗಳು ಬೀಳುವುದನ್ನು ನೋಡಬಹುದು.
ಈ ವಿಡಿಯೋವು ಲಕ್ಷಾನುಗಟ್ಟಲೇ ವೀಕ್ಷಣೆಯನ್ನು ಪಡೆದುಕೊಂಡಿದ್ದು, ನೆಟ್ಟಿಗರು ನಾನಾ ರೀತಿಯ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಬಳಕೆದಾರರೊಬ್ಬರು, ‘ವರದಕ್ಷಿಣೆಯೂ ಸಮಾಜಕ್ಕೆ ಬಲವಾದ ಹೊಡೆತವನ್ನು ಉಂಟು ಮಾಡುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಈ ತಂದೆಯಿಂದ ಭವಿಷ್ಯದಲ್ಲಿ ಹುಡುಗ ಇಷ್ಟು ಹೊರೆ ಹೊರುತ್ತಾನೆ ಎಂದು ಯೋಚಿಸಿರಲಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಅಂತಾರಾಷ್ಟ್ರೀಯ ಹಣಕಾಸು ನಿಧಿಯು ಪಾಕಿಸ್ತಾನಕ್ಕೆ ಸಾಲ ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕು’ ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ