AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಭರ್ಜರಿ ಬೇಟೆ ಸವಿಯುತ್ತಿದ್ದ ಸಿಂಹದ ಹತ್ತಿರ ಹೋಗಿ ವಿಡಿಯೋ ಮಾಡಿದ ಯುವಕ, ಮುಂದೇನಾಯ್ತು ನೋಡಿ

ಈಗಿನ ಯುವಕ ಯುವತಿಯರ ಹುಚ್ಚು ಸಾಹಸಗಳು ಮಿತಿ ಮೀರುತ್ತಿದೆ. ಲೈಕ್ಸ್ ವೀವ್ಸ್‌ಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಡಲು ಮುಂದಾಗುತ್ತಾರೆ. ಇಲ್ಲೊಬ್ಬ ಯುವಕನು ಇದೇ ರೀತಿ ಸಿಂಹದ ಮುಂದೆ ವಿಡಿಯೋ ಮಾಡಲು ಹೋಗಿದ್ದೇನೆ. ಈ ಯುವಕನು ತನ್ನ ಹತ್ತಿರ ಬರುತ್ತಿದೆ ಎಂದು ತಿಳಿದ ಈ ಸಿಂಹ ಏನು ಮಾಡಿದೆ ನೋಡಿ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Video: ಭರ್ಜರಿ ಬೇಟೆ ಸವಿಯುತ್ತಿದ್ದ ಸಿಂಹದ ಹತ್ತಿರ ಹೋಗಿ ವಿಡಿಯೋ ಮಾಡಿದ ಯುವಕ, ಮುಂದೇನಾಯ್ತು ನೋಡಿ
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on: Aug 07, 2025 | 10:37 AM

Share

ಗುಜರಾತ್, ಆಗಸ್ಟ್ 07: ರೀಲ್ಸ್‌ ರೀಲ್ಸ್‌ ರೀಲ್ಸ್… ಎಲ್ಲಿ ನೋಡಿದ್ರೂ ರೀಲ್ಸ್‌ (reels) ವಿಡಿಯೋಗಳದ್ದೇ ಹವಾ. ಈ ಯುವಕರು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ರೀಲ್ಸ್ ಮಾಡಿ ಫೇಮಸ್ ಆಗುವ ಭರದಲ್ಲಿ ಹುಚ್ಚು ಸಾಹಸಕ್ಕೆ ಕೈ ಹಾಕುತ್ತಾರೆ. ಈಗಾಗಲೇ ಸಾರ್ವಜನಿಕರಿಗೆ ತೊಂದರೆ ಕೊಡುವ ಇಲ್ಲವಾದ್ರೆ ಪ್ರಾಣಕ್ಕೆ ಅಪಾಯ ತಂದೊಡ್ಡುವ ರೀಲ್ಸ್‌ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದವರೇ ಹೆಚ್ಚು. ಇಲ್ಲೊಬ್ಬ ಬೇಟೆಯನ್ನು ತಿನ್ನುತ್ತಿದ್ದ ಸಿಂಹದ ಹತ್ತಿರ ಹೋಗಿ ವಿಡಿಯೋ ಮಾಡಲು ಹೋಗಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆಯೂ ಗುಜರಾತಿನ ಭಾವನಗರದಲ್ಲಿ (Bhavnagar of Gujarat) ನಡೆದಿದೆ ಎನ್ನಲಾಗಿದೆ. ಈ ದೃಶ್ಯ ವೈರಲ್ ಆಗುತ್ತಿದ್ದಂತೆ ಬಳಕೆದಾರರು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಯುವಕನ ರೀಲ್ಸ್ ಹುಚ್ಚಾಟ ನೋಡಿ

ಇದನ್ನೂ ಓದಿ
Image
ವೆಜ್ ಬಿರಿಯಾನಿಯಲ್ಲಿ ಪತ್ತೆಯಾಯ್ತು ಮೂಳೆ, ಇಲ್ಲಿದೆ ಅಸಲಿ ವಿಚಾರ
Image
ಕನ್ನಡದಲ್ಲಿ ಮಾತ್ರ ಮಾತನಾಡು, ಹಿಂದಿ, ಇಂಗ್ಲೀಷ್​ ಬೇಡ ಎಂದ ಗುಜರಾತಿ ತಾಯಿ
Image
ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು
Image
ಕಾರ್ಮಿಕನ ಬ್ಯಾಂಕ್ ಖಾತೆಗೆ ಬಂತು ಕೋಟಿ ಕೋಟಿ ಹಣ

@TheSiasatDaily ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ ಸಿಂಹವೊಂದು ತಾನು ಬೇಟೆಯಾಡಿದ ಪ್ರಾಣಿಯನ್ನು ತಿನ್ನುವುದರಲ್ಲಿ ಬ್ಯುಸಿಯಾಗಿದೆ. ಈ ವೇಳೆಯಲ್ಲಿ ಯುವಕನೊಬ್ಬನು ಸಿಂಹದ ಹತ್ತಿರ ಮೊಬೈಲ್ ಹಿಡಿದುಕೊಂಡು ವಿಡಿಯೋ ಹೋಗುತ್ತಿರುವುದನ್ನು ನೋಡಬಹುದು. ತನ್ನ ಹತ್ತಿರ ಬಂದ ಯುವಕನನ್ನು ನೋಡುತ್ತಿದ್ದಂತೆ ಸಿಂಹವು ಒಂದೊಂದೇ ಹೆಜ್ಜೆಯನ್ನು ಮುಂದಕ್ಕೆ ಹಾಕುತ್ತಾ ಈತನ ಕಡೆಗೆ ಓಡೋಡಿ  ಬರುತ್ತಿದೆ. ಈ ವೇಳೆಯಲ್ಲಿ ಅಲ್ಲೇ ಇದ್ದ ಜನರು ಈತನಿಗೆ ಹಿಂದಕ್ಕೆ ಹೋಗುವಂತೆ ಎಚ್ಚರಿಕೆ ನೀಡುತ್ತಿರುವುದನ್ನು ನೋಡಬಹುದು.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಆದರೆ ಈ ಯುವಕನು ಹಿಂದಕ್ಕೆ ಸರಿಯುತ್ತಿದ್ದರೂ ವಿಡಿಯೋ ಮಾಡುವುದನ್ನು ಮಾತ್ರ ನಿಲ್ಲಿಸಿಲ್ಲ. ವಿಡಿಯೋ ಮಾಡುತ್ತಲೇ ಹಿಂದಕ್ಕೆ ಸರಿಯುತ್ತಿರುವುದನ್ನು ಕಾಣಬಹುದು.  ಅದೃಷ್ಟವಶಾತ್ ಈ ಯುವಕನು ಸಿಂಹಕ್ಕೆ ಆಹಾರವಾಗದೇ ಪ್ರಾಣಾಪಾಯದಿಂದ ಪಾರಾಗಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಈ ಯುವಕನನ್ನು ಗೌತಮ್ ಎಂದು ಗುರುತಿಸಲಾಗಿದೆ. ಈ ಯುವಕ ಈ ರೀತಿ ಹುಚ್ಚಾಟ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Video: ರೆಸ್ಟೋರೆಂಟ್‌ನ ವೆಜ್ ಬಿರಿಯಾನಿಯಲ್ಲಿ ಪತ್ತೆಯಾಯ್ತು ಮೂಳೆ, ಇದರ ಅಸಲಿ ವಿಚಾರ ಬೇರೇನೇ ಇದೇ ನೋಡಿ

ಬಳಕೆದಾರರ ಕಾಮೆಂಟ್‌ಗಳು ಹೀಗಿವೆ

ಆಗಸ್ಟ್ 6 ರಂದು ಶೇರ್ ಮಾಡಲಾದ ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಬಳಕೆದಾರರೊಬ್ಬರು, ಇಂತಹ ಹುಚ್ಚು ಸಾಹಸ ಮಾಡಿ ನೀವು ಪಡೆಯುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬರು, ಈ ರೀತಿ ಹುಚ್ಚಾಟ ಆಡುವ ಯುವಕರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಯುವಕರು ರೀಲ್ಸ್ ಮಾಡುವ ಭರದಲ್ಲಿ ಅತಿರೇಕವಾಗಿ ಆಡುತ್ತಿದ್ದಾರೆ. ಈ ಯುವಕನ ಆಯಸ್ಸು ಗಟ್ಟಿಯಿತ್ತು ಕಾಣಿಸುತ್ತದೆ ಎಂದು ಮತ್ತೊಬ್ಬ ಬಳಕೆದಾರ ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ