Viral: ಪ್ರವಾಹದ ಅಬ್ಬರಕ್ಕೆ ಕಾರು ಸಮೇತ ಕೊಚ್ಚಿ ಹೋದ ದಂಪತಿ, ರಕ್ಷಣಾ ಕಾರ್ಯ ಹೇಗಿತ್ತು ನೋಡಿ

ಗುಜರಾತ್‌ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಪ್ರವಾಹದ ಅಬ್ಬರಕ್ಕೆ ಕಾರಿನ ಸಮೇತ ದಂಪತಿಗಳಿಬ್ಬರು ಕೊಚ್ಚಿ ಹೋಗಿದ್ದು, ಹಾಗೋ ಹೀಗೋ ಕಾರಿನ ಟಾಪ್‌ ಏರಿ ಕುಳಿತು ಜೀವ ರಕ್ಷಣೆಗಾಗಿ ಪರದಾಡಿದ್ದಾರೆ. ಜಲದಿಗ್ಭಂದನದಲ್ಲಿ ಸಿಲುಕಿದ ದಂಪತಿಯನ್ನು ರಕ್ಷಿಸಲಾಗಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Viral: ಪ್ರವಾಹದ ಅಬ್ಬರಕ್ಕೆ ಕಾರು ಸಮೇತ ಕೊಚ್ಚಿ ಹೋದ ದಂಪತಿ, ರಕ್ಷಣಾ ಕಾರ್ಯ ಹೇಗಿತ್ತು ನೋಡಿ
ವೈರಲ್​​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 09, 2024 | 3:59 PM

ಗುಜರಾತ್‌ನಲ್ಲಿ ಸುರಿಯುತ್ತಿರುವ ನಿರಂತರ ಧಾರಾಕಾರ ಮಳೆಯಿಂದಾಗಿ, ಈ ರಾಜ್ಯವು ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಮಹಾ ಪ್ರವಾಹಕ್ಕೆ ಪ್ರಮುಖ ನಗರಗಳು, ನದಿ ಸಮೀಪದ ಪ್ರದೇಶಗಳು ಜಲಾವೃತಗೊಂಡು ಸಾವಿರಾರು ಜನ ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆ ಪ್ರವಾಹದ ಅಬ್ಬರಕ್ಕೆ ಈ ಪ್ರವಾಹದ ಅಬ್ಬರಕ್ಕೆ ಕಾರಿನ ಸಮೇತ ದಂಪತಿಗಳಿಬ್ಬರು ಕೊಚ್ಚಿ ಹೋಗಿದ್ದು, ಹಾಗೋ ಹೀಗೋ ಕಾರಿನ ಟಾಪ್‌ ಏರಿ ಕುಳಿತು ಜೀವ ರಕ್ಷಣೆಗಾಗಿ ಪರದಾಡಿದ್ದಾರೆ. ಸತತ ಎರಡು ಗಂಟೆಗಳ ಕಾಲ ಜಲದಿಗ್ಭಂದನದಲ್ಲಿ ಸಿಲುಕಿದ ದಂಪತಿಯನ್ನು ರಕ್ಷಿಸಲಾಗಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ಭಾನುವಾರ (ಸೆಪ್ಟೆಂಬರ್‌ 9) ಈ ಘಟನೆ ನಡೆದಿದ್ದು, ಭೀಕರ ಪ್ರವಾಹಕ್ಕೆ ದಂಪತಿಗಳಿಬ್ಬರು ಕಾರು ಸಮೇತ ಕೊಚ್ಚಿ ಹೋಗಿದ್ದಾರೆ. ಸತತ ಎರಡು ಗಂಟೆಗಳ ಕಾಲ ಜಲದಿಗ್ಭಂದನದಲ್ಲಿ ಸಿಲುಕ್ಕಿದ್ದ ದಂಪತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ತುಂಬಿ ಹರಿಯುತ್ತಿದ್ದ ಕರೋಲ್‌ ನದಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ವೇಳೆ ಈ ದಂಪತಿ ಕಾರು ಸಮೇತ ಪ್ರವಾಹದ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಜೀವ ಉಳಿದರೆ ಸಾಕೆಂದು ಪ್ರವಾಹದ ನಡುವೆಯೂ ಕಾರಿನ ಟಾಪ್‌ ಏರಿ ಕುಳಿತ ದಂಪತಿ ಪ್ರಾಣ ರಕ್ಷಣೆಗೆ ಪರದಾಡಿದ್ದಾರೆ. ಪ್ರವಾಹ ಹರಿವು ಹೆಚ್ಚಿದ್ದರಿಂದ ಸ್ಥಳೀಯರಿಗೆ ತಕ್ಷಣಕ್ಕೆ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ನಂತರ ಪ್ರವಾಹ ಮಟ್ಟ ಸ್ಪಲ್ವ ತಗ್ಗಿದ ಬಳಿಕ ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಎರಡು ಗಂಟೆಗಳ ಕಾಲ ಜಲದಿಗ್ಭಂದನದಲ್ಲಿ ಸಿಲುಕಿದ ದಂಪತಿಯನ್ನು ರಕ್ಷಣೆ ಮಾಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು NarundarM ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಕಾರು ಸಮೇತ ಪ್ರವಾಹದಲ್ಲಿ ಕೊಚ್ಚಿ ಹೋದ ದಂಪತಿಗಳಿಬ್ಬರು ಪ್ರಾಣ ರಕ್ಷಣೆಗಾಗಿ ಕಾರಿನ ಟಾಪ್‌ ಏರಿ ಕುಳಿತಿರುವ ದೃಶ್ಯವನ್ನು ಕಾಣಬಹುದು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಸ್ವಯಂ ಸೇವಕರು ಬಂದು ಈ ಇಬ್ಬರನ್ನೂ ರಕ್ಷಿಸಿದ್ದಾರೆ.

ಇದನ್ನೂ ಓದಿ: ಅಯ್ಯೋ ಗುಂಡು ಹಾರಿಸ್ಬೇಡಿ, ಇದು ಜಸ್ಟ್‌ ಪ್ರಾಂಕ್, ತಮಾಷೆ ಮಾಡಲು ಹೋಗಿ ತಾವೇ ಹಳ್ಳಕ್ಕೆ ಬಿದ್ದ ಯುವಕರು

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ಪೋಸ್ಟ್‌ 3 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಪ್ರವಾಹದಲ್ಲಿ ಸಿಲುಕಿದರೂ ಯಾವುದೇ ಒತ್ತಡವನ್ನು ಮನಸ್ಸಿಗೆ ತೆಗೆದುಕೊಳ್ಳದೆ ಆರಾಮವಾಗಿ ಕುಳಿತ ಆ ದಂಪತಿಯ ಧೈರ್ಯಕ್ಕೆ ಮೆಚ್ಚಲೇಬೇಕುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇವರಿಬ್ಬರು ಎಷ್ಟು ಟೆನ್ಷನ್‌ ಫ್ರೀ ಆಗಿ ಇದ್ದಾರೆ ನೋಡಿʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ