Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಕೈದಿಯ ವಿಚಿತ್ರ ವರ್ತನೆ; ಎಕ್ಸ್ ರೇ ನೋಡಿ ಪೊಲೀಸರು ಶಾಕ್​​

ಭಾವನಗರ ಜೈಲಿನ ಪೋಕ್ಸೊ ಪ್ರಕರಣದ ಆರೋಪಿ ರವಿ ಬಾರಯ್ಯನ ವಿಚಿತ್ರ ವರ್ತನೆಯಿಂದ ಪೊಲೀಸರಿಗೆ ಅನುಮಾನ ಬಂದಿತ್ತು. ಆಸ್ಪತ್ರೆಯ ಎಕ್ಸ್-ರೇ ಪರೀಕ್ಷೆಯಲ್ಲಿ ಆತನ ಗುದನಾಳದಲ್ಲಿ ಮೊಬೈಲ್ ಫೋನ್ ಇರುವುದು ಪತ್ತೆಯಾಗಿದೆ. ಜೈಲಿನಲ್ಲಿ ನಿಷೇಧಿತ ಮೊಬೈಲ್ ಮತ್ತು ಚಾರ್ಜರ್ ಪತ್ತೆಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಜೈಲು ಅಧಿಕಾರಿಗಳು ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

ಜೈಲಿನಲ್ಲಿ ಕೈದಿಯ ವಿಚಿತ್ರ ವರ್ತನೆ; ಎಕ್ಸ್ ರೇ ನೋಡಿ ಪೊಲೀಸರು ಶಾಕ್​​
Follow us
ಅಕ್ಷತಾ ವರ್ಕಾಡಿ
|

Updated on: Dec 08, 2024 | 9:47 AM

ಗುಜರಾತ್‌: ಪೋಕ್ಸೊ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿಯೊಬ್ಬನ ವಿಚಿತ್ರ ವರ್ತನೆ ಗಮನಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರೀಕ್ಷೆಯ ಒಳಪಡಿಸಿದ ವೈದ್ಯರು ಎಕ್ಸ್ ರೇ ಕಂಡು ಬೆಚ್ಚಿ ಬಿದ್ದಿದ್ದಾರೆ. ಎಕ್ಸ್ ರೇ ವರದಿಯಲ್ಲಿ ಕೈದಿಯ ಗುದನಾಳದಲ್ಲಿ ಮೊಬೈಲ್ ಫೋನ್ ಇರುವುದು ಕಂಡುಬಂದಿದೆ. ಈ ಘಟನೆ ಗುಜರಾತ್‌ನ ಭಾವನಗರ ಜೈಲಿನಲ್ಲಿ ನಡೆದಿದೆ.

ರವಿ ಬಾರಯ್ಯ (33) ಎಂಬ ಕೈದಿಯನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಅಕ್ಟೋಬರ್ 19 ರಿಂದ ಗುಜರಾತ್‌ನ ಭಾವನಗರ ಜಿಲ್ಲಾ ಕಾರಾಗೃಹದಲ್ಲಿ ಬಂಧಿಯಾಗಿದ್ದಾನೆ. ಜೈಲಿನೊಳಗೆ ಮೊಬೈಲ್ ಫೋನ್‌ಗಳನ್ನು ಬಳಸುವಂತಿಲ್ಲ. ಆದರೆ ಡಿಸೆಂಬರ್ 4 ರಂದು ಕಾರಾಗೃಹಕ್ಕೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಮೊಬೈಲ್ ಫೋನ್ ಚಾರ್ಜರ್ ಪತ್ತೆಯಾದಾಗ ಅಧಿಕಾರಿಗಳಿಗೆ ಅನುಮಾನ ಬಂದಿದೆ.

ಇದನ್ನೂ ಓದಿ: ಪಂಜರದೊಳಗಿದ್ದ ಸಿಂಹವನ್ನು ಕೆಣಕಿ ಕೈ ಬೆರಳನ್ನೇ ಕಳೆದುಕೊಂಡ ಯುವಕ

ಎಲ್ಲಾ ಕಡೆ ಹುಡುಕಾಡಿದರೂ ಫೋನ್ ಸಿಗದಿದ್ದಾಗ ಬಾರಯ್ಯನ ವಿಚಿತ್ರ ವರ್ತನೆ ಕಂಡು ಪೊಲೀಸರು ಅನುಮಾನಗೊಂಡು ಆತನ ಸೆಲ್‌ನಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ ಫೋನ್ ಪತ್ತೆಯಾಗಿಲ್ಲ. ಆದಾಗ್ಯೂ, ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಎಕ್ಸ್ ರೇ ತೆಗೆಯಲಾಯಿತು. ಸ್ಕ್ಯಾನ್ ಮಾಡಿದಾಗ ಗುದದ್ವಾರದಲ್ಲಿ ಮೊಬೈಲ್ ಇರುವುದು ಪತ್ತೆಯಾಗಿದೆ. ಇದರಿಂದ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಘಟನೆಯ ಬಗ್ಗೆ ಜೈಲು ಅಧಿಕಾರಿಗಳು ದೂರು ನೀಡಿದಾಗ, ಕೈದಿಗಳ ಕಾಯ್ದೆಯ ಬಿಎನ್‌ಎಸ್ 223, ಸೆಕ್ಷನ್ 42, 43 ಮತ್ತು 45(12) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಿಷೇಧಿತ ಮೊಬೈಲ್ ಫೋನ್ ಮತ್ತು ಚಾರ್ಜರ್ ಅನ್ನು ಜೈಲಿಗೆ ತಂದವರು ಯಾರು? ರವಿ ಎಷ್ಟು ಸಮಯದಿಂದ ಫೋನ್ ಬಳಸುತ್ತಿದ್ದ ಎಂದು ಜೈಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್