AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿತ ಶಿಕ್ಷಕನಿಗೆ 18 ಬಾರಿ ಕಪಾಳಮೋಕ್ಷ ಮಾಡಿದ ಸ್ಕೂಲ್‌ ಪ್ರಿನ್ಸಿಪಾಲ್;‌ ವಿಡಿಯೋ ವೈರಲ್‌

ವಿದ್ಯಾರ್ಥಿಗಳು ತಪ್ಪು ಮಾಡಿದಾಗ ಶಿಕ್ಷಕರು ಅವರಿಗೆ ಗದರುವಂತಹ, ಪೆಟ್ಟು ಕೊಡುವಂತಹ ದೃಶ್ಯವನ್ನು ನೋಡಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಂದು ಶಾಲೆಯಲ್ಲಿ ಪ್ರಿನ್ಸಿಪಾಲ್‌ ಗಣಿತ ಶಿಕ್ಷಕನ ಕೆನ್ನೆಗೆ ಬಾರಿಸಿದ್ದಾರೆ. ಹೌದು ತರಗತಿಯಲ್ಲಿ ಅನುಚಿತ ವರ್ತನೆ ತೋರಿದರೆಂದು ಶಿಕ್ಷಕನಿಗೆ ಪ್ರಿನ್ಸಿಪಾಲ್‌ 25 ಸೆಕೆಂಡುಗಳಲ್ಲಿ 18 ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಈ ಆಘಾತಕಾರಿ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗುತ್ತಿದೆ.

ಗಣಿತ ಶಿಕ್ಷಕನಿಗೆ 18 ಬಾರಿ ಕಪಾಳಮೋಕ್ಷ ಮಾಡಿದ ಸ್ಕೂಲ್‌ ಪ್ರಿನ್ಸಿಪಾಲ್;‌ ವಿಡಿಯೋ ವೈರಲ್‌
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Feb 12, 2025 | 4:25 PM

Share

ಕೆಲವೊಂದು ಬಾರಿ ವಿದ್ಯಾರ್ಥಿಗಳಿಗೆ ಪಾಠ, ಸಂಸ್ಕಾರ ಹೇಳಿಕೊಡಬೇಕಾದ ಶಿಕ್ಷಕರೇ ಅತಿರೇಕದ ವರ್ತನೆಯನ್ನು ತೋರುತ್ತಿರುತ್ತಾರೆ. ಹೀಗೆ ವಿದ್ಯಾರ್ಥಿಗಳ ಕೈಯಲ್ಲಿ ಕೆಲಸ ಮಾಡಿಸಿ, ಪಾಠ ಮಾಡದೆ ಕ್ಲಾಸ್‌ ರೂಮ್‌ನಲ್ಲಿ ಮಲಗಿ, ಕುಡಿದು ಶಾಲೆಗೆ ಬಂದು ರಂಪಾಟ ಮಾಡಿದ ಶಿಕ್ಷಕರಿಗೆ ಸಂಬಂಧಪಟ್ಟ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ದೃಶ್ಯವೊಂದು ಹರಿದಾಡುತ್ತಿದ್ದು, ತರಗತಿಯಲ್ಲಿ ಅನುಚಿತ ವರ್ತನೆ ತೋರಿದರೆಂದು ಗಣಿತ ಶಿಕ್ಷಕನಿಗೆ ಸ್ಕೂಲ್‌ ಪ್ರಿನ್ಸಿಪಾಲ್‌ 25 ಸೆಕೆಂಡುಗಳಲ್ಲಿ 18 ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಈ ದೃಶ್ಯ ಅಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಘಟನೆ ಗುಜರಾತ್‌ನ ಭರೂಚ್‌ ಜಿಲ್ಲೆಯ ನವಯುಗ್‌ ಶಾಲೆಯಲ್ಲಿ ನಡೆದಿದ್ದು, ತರಗತಿಯಲ್ಲಿ ಅನುಚಿತ ವರ್ತನೆ, ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ ಮೇರೆಗೆ ಸ್ಕೂಲ್‌ ಪ್ರಿನ್ಸಿಪಾಲ್‌ ಗಣಿತ ಶಿಕ್ಷಕನ ಕೆನ್ನೆಗೆ ಬಾರಿಸಿದ್ದಾರೆ. ಪ್ರಾಂಶುಪಾಲ ಹಿತೇಂದ್ರ ಠಾಕೂರ್‌ ಗಣಿತ ಶಿಕ್ಷಕರಾದ ರಾಜೇಂದ್ರ ಪಾರ್ಮರ್‌ ಎಂಬವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಆಫೀಸ್‌ ರೂಮ್‌ನಲ್ಲಿ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೊನೆಯಲ್ಲಿ ಪ್ರಿನ್ಸಿಪಾಲ್‌ ಕೋಪದಲ್ಲಿ 25 ಸೆಕೆಂಡುಗಳಲ್ಲಿ ಗಣಿತ ಶಿಕ್ಷಕನಿಗೆ 18 ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಅಲ್ಲಿದ್ದ ಸಹ ಶಿಕ್ಷಕರು ಮಧ್ಯಪ್ರವೇಶಿಸಿ ಇವರಿಬ್ಬರ ಜಗಳವನ್ನು ಶಮನಗೊಳಿಸಿದ್ದು, ಈ ಕುರಿತ ಸಿಸಿ ದೃಶ್ಯ ಇದೀಗ ವೈರಲ್‌ ಆಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಗಣಿತ ಶಿಕ್ಷಕ ಸರಿಯಾಗಿ ಪಾಠ ಮಾಡುತ್ತಿಲ್ಲ, ಜೊತೆಗೆ ತರಗತಿಯಲ್ಲಿ ಅನುಚಿತ ವರ್ತನೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾರೆ ಎಂದು ಪ್ರಿನ್ಸಿಪಾಲ್‌ ಗಂಭೀರ ಆರೋಪ ಮಾಡಿದ್ದು, ಜಿಲ್ಲಾ ಶಿಕ್ಷಣಾಧಿಕಾರಿ ಈ ವಿಷಯದ ಬಗ್ಗೆ ಇದೀಗ ತನಿಖೆಯನ್ನು ಆರಂಭಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಹೆಂಡ್ತಿ ಸಹಾಯದಿಂದ ಬೆಂಚ್‌ ಪ್ರೆಸ್‌ ವ್ಯಾಯಾಮ ಮಾಡಲು ಹೋಗಿ ಫಜೀತಿಗೆ ಸಿಲುಕಿದ ವ್ಯಕ್ತಿ; ವಿಡಿಯೋ ವೈರಲ್

Hate Detector ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಕುರ್ಚಿಯಿಂದ ಎದ್ದು ಹೋಗಿ ಪ್ರಿನ್ಸಿಪಾಲ್‌ ಗಣಿತ ಶಿಕ್ಷಕನ ಕೆನ್ನೆಗೆ ಬಾರಿಸಿ ದೈಹಿಕ ಹಲ್ಲೆ ನಡೆಸಿದಂತಹ ಆಘಾತಕಾರಿ ದೃಶ್ಯವನ್ನು ಕಾಣಬಹುದು. ಈ ದೃಶ್ಯವನ್ನು ಕಂಡು ನೋಡುಗರು ಫುಲ್‌ ಶಾಕ್‌ ಆಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್