Video: ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ವ್ಯಕ್ತಿ
ಶಿವ ದೇವಾಲಯದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿದ್ದ ವ್ಯಕ್ತಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.
ವ್ಯಕ್ತಿಯೊಬ್ಬ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿರುವಾಗಲೇ ಏಕಾಏಕಿ ಕುಸಿದು ಬಿದ್ದು ಪ್ರಾಣ ಬಿಟ್ಟಿರುವ ಘಟನೆ ಗುಜರಾತ್‌ನ ಶಿವ ದೇವಾಲಯದಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಕುಸಿದು ಬೀಳುತ್ತಿದ್ದಂತೆ ದೇವಸ್ಥಾನದಲ್ಲಿದ್ದ ಇತರ ಭಕ್ತರು ತಬ್ಬಿಬ್ಬಾಗಿ ಹೋಗಿದ್ದಾರೆ. ಅದರಲ್ಲಿ ಒಬ್ಬ ವ್ಯಕ್ತಿ ಸಿಪಿಆರ್ ಮಾಡಲು ಮುಂದಾಗಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗಿದೆ. ತಕ್ಷಣ ಹತ್ತಿರ ಆಸ್ಪತ್ರೆಗೆ ದಾಖಲಿಸಲಾದರೂ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಸದ್ಯ ಘಟನೆಯ ಸಂಪೂರ್ಣ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಮ್ಯಾನ್ಮಾರ್ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ

ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
