Video: ಹೆಲ್ಮೆಟ್ ಕಡ್ಡಾಯ ನಿಯಮವನ್ನು ಹಿಂಪಡೆಯಿರಿ; ರೋಡಿಗಿಳಿದು ಪ್ರತಿಭಟನೆ ಮಾಡಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು

ಸಾರ್ವಜನಿಕರ ಅಮೂಲ್ಯವಾದ ಜೀವವನ್ನು ರಕ್ಷಿಸುವ ದೃಷ್ಟಿಯಿಂದ ಸೂರತ್ ನಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ನಿಯಮವನ್ನು ಜಾರಿಗೊಳಿಸಲಾಗಿದೆ. ಹೀಗಿರುವಾಗ ಗುಜರಾತ್‌ನ ಸೂರತ್‌ನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ ಎನ್ನುವ ನಿಯಮವನ್ನು ಹಿಂಪಡೆಯುವಂತೆ ಒತ್ತಾಯಿಸಿ ರೋಡಿಗಿಳಿದಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಹೆಲ್ಮೆಟ್ ಕಡ್ಡಾಯ ನಿಯಮವನ್ನು ಹಿಂಪಡೆಯಿರಿ; ರೋಡಿಗಿಳಿದು ಪ್ರತಿಭಟನೆ ಮಾಡಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು
ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
Image Credit source: Twitter

Updated on: Oct 14, 2025 | 11:30 AM

ಗುಜರಾತ್, ಅಕ್ಟೋಬರ್ 14: ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಕೆಲವರು ಹೈಲ್ಮೆಟ್‌ ಧರಿಸದೆ, ಸೀಟ್‌ ಬೆಲ್ಟ್‌ ಧರಿಸದೆ ವಾಹನ ಚಲಾಯಿಸಿ ಟ್ರಾಫಿಕ್‌ ರೂಲ್ಸ್‌ಗಳನ್ನು (Traffic Rules) ಬ್ರೇಕ್‌ ಮಾಡ್ತಾರೆ. ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಸೂರತ್ ಸಂಚಾರ ಪೊಲೀಸರು (Surat Traffic Police) ದ್ವಿಚಕ್ರ ವಾಹನ ಸವಾರರಿಗೆ ಕಡ್ಡಾಯ ಹೆಲ್ಮೆಟ್ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದು, ಇದೇ ವಿಚಾರವಾಗಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ರೋಡಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಇದೇ ವೇಳೆ ನಗರದಲ್ಲಿ ಕಡ್ಡಾಯ ಹೆಲ್ಮೆಟನ್ನು ರೋಡಿಗೆ ಎಸೆದು ಈ ನಿಯಮವನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

@gemsofbabus ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾದ ವಿಡಿಯೋದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಕಡ್ಡಾಯ ಹೆಲ್ಮೆಟ್ ನಿಯಮವನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವುದನ್ನು ಕಾಣಬಹುದು. ಇದೇ ವೇಳೆ ಹೆಲ್ಮೆಟ್ ರೋಡಿಗೆಸೆದು ಈ ನಿಯಮವನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಪೊಲೀಸರು ಈ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗುತ್ತಿರುವುದನ್ನು ನೀವಿಲ್ಲಿ ನೋಡಬಹುದು.

ಇದನ್ನೂ ಓದಿ
ಹೈವೇ ರೋಡಲ್ಲಿ ಒಂದೇ ಸ್ಕೂಟಿಯಲ್ಲಿ ಐವರ ಡೇಂಜರ್ಸ್ ಸ್ಟಂಟ್
ಜಿಮ್‌ನಲ್ಲಿ ಜುಟ್ಟು  ಹಿಡಿದು ಎಳೆದಾಡಿಕೊಂಡ ಮಹಿಳಾಮಣಿಯರು
ತರಕಾರಿ ಕೊಳ್ಳಲು ಬಂದ ಯುವತಿಯರ ಕದ್ದು ವಿಡಿಯೋ ಮಾಡಿದ ವ್ಯಕ್ತಿ
ಚಲಿಸುತ್ತಿದ್ದ ಕಾರಿ ಬೋನೆಟ್​ಗೆ ಅರೆಬೆತ್ತಲೆ ಸ್ಥಿತಿಯಲ್ಲಿ ಜಿಗಿದ ಯುವಕ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಅಕ್ಟೋಬರ್ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಏಳು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು ಒಬ್ಬ ಬಳಕೆದಾರ ಇದು ನಿಜಕ್ಕೂ ವಿಪರ್ಯಾಸ. ಕಾಂಗ್ರೆಸ್ ಮೂರ್ಖತನದಿಂದ ವರ್ತಿಸುತ್ತಿದೆ. ಹೆಲ್ಮೆಟ್ ಗಳು ಸಾವಿನ ಅಪಾಯವನ್ನು ಶೇಕಡಾ 42 ರಷ್ಟು ಕಡಿಮೆ ಮಾಡುತ್ತದೆ ಹಾಗೂ ಶೇಕಡಾ 87 ರಷ್ಟು ಸಾವುಗಳು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದ ಕಾರಣವೇ ಸಂಭವಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Video: ಎತ್ತಾಕ್ಕೊಂಡ್ ಹೋಯ್ತಾ ಇರೋದೇ; ಹೈವೇ ರೋಡಲ್ಲಿ ಒಂದೇ ಸ್ಕೂಟಿಯಲ್ಲಿ ಐವರ ಡೇಂಜರ್ಸ್ ಸ್ಟಂಟ್

ಇನ್ನೊಬ್ಬ ಬಳಕೆದಾರ ಹೆಲ್ಮೆಟ್ ರಕ್ಷಣೆ ಹಾಗೂ ಸುರಕ್ಷತೆಗಾಗಿ, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಇದನ್ನು ಯಾಕೆ ವಿರೋಧಿಸುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರ ಸುರಕ್ಷತೆಯ ವಿರುದ್ಧ ಪ್ರತಿಭಟಿಸುತ್ತೀರಾ? ಹೆಲ್ಮೆಟ್ ಗಳು ಜೀವವನ್ನು ಉಳಿಸುತ್ತದೆ. ಜೀವಗಳ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ