AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಿಕ್ಷಾದಲ್ಲಿ ಮೈ ಮುಟ್ಟಿ ಕಿರುಕುಳ; ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ವ್ಯಕ್ತಿ

ಗ್ವಾಲಿಯರ್‌ನಲ್ಲಿ ಆಟೋ ರಿಕ್ಷಾದೊಳಗೆ ವ್ಯಕ್ತಿಯೊಬ್ಬ ಯುವತಿಗೆ ನಿರಂತರವಾಗಿ ಕಿರುಕುಳ ನೀಡಿದ್ದು, ಕೋಪಗೊಂಡ ಯುವತಿ ರಿಕ್ಷಾದಿಂದ ಹೊರಬಂದು, ವ್ಯಕ್ತಿಯನ್ನು ಹೊರಗೆಳೆದು ಸಾರ್ವಜನಿಕವಾಗಿ ಚಪ್ಪಳಿಯಲ್ಲಿ ಥಳಿಸಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Viral Video: ರಿಕ್ಷಾದಲ್ಲಿ ಮೈ ಮುಟ್ಟಿ ಕಿರುಕುಳ; ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Nov 30, 2024 | 6:30 PM

Share

ಮಧ್ಯಪ್ರದೇಶ: ರಿಕ್ಷಾದಲ್ಲಿ ಕಿರುಕುಳ ಮತ್ತು ಚುಡಾಯಿಸಿದ ಆರೋಪದ ಮೇಲೆ ಯುವತಿಯೊಬ್ಬಳು ನಡುರಸ್ತೆಯಲ್ಲೇ ವ್ಯಕ್ತಿಯೊಬ್ಬನಿಗೆ ಚಪ್ಪಲಿಯಲ್ಲಿ ಹೊಡೆದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಇಂದು(ನ.30) ಮಧ್ಯಾಹ್ನ ಈ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಮಾಹಿತಿಯ ಪ್ರಕಾರ, ಪಾದವ್ ಪೊಲೀಸ್ ಠಾಣಾ ವ್ಯಾಪ್ತಿಯ ಫೂಲ್‌ಬಾಗ್ ಸ್ಕ್ವೇರ್‌ನಲ್ಲಿ ಈ ಘಟನೆ ನಡೆದಿದೆ. ರಿಕ್ಷಾದೊಳಗೆ ಮಧ್ಯವಯಸ್ಕ ವ್ಯಕ್ತಿಯೊಬ್ಬ ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಕೋಪಗೊಂಡ ಯುವತಿ ರಿಕ್ಷಾದಿಂದ ಹೊರಬಂದು, ವ್ಯಕ್ತಿಯನ್ನು ಹೊರಗೆಳೆದು ಸಾರ್ವಜನಿಕವಾಗಿ ಚಪ್ಪಳಿಯಲ್ಲಿ ಥಳಿಸಿದ್ದಾಳೆ. ಈ ಘಟನೆಯನ್ನು ಕಣ್ಣಾರೆ ಕಂಡ ಸ್ಥಳೀಯರು ಮೊಬೈಲ್​ ಮೂಲಕ ವಿಡಿಯೋ ಮಾಡಿ, ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 52 ಕೋಟಿ ಕೊಟ್ಟು ಹರಾಜಿನಲ್ಲಿ ಖರೀದಿಸಿದ್ದ ಬಾಳೆಹಣ್ಣನ್ನು ಒಂದೇ ಕ್ಷಣದಲ್ಲಿ ತಿಂದು ಮುಗಿಸಿದ ವ್ಯಕ್ತಿ

ಈ ಬಗ್ಗೆ ಯುವತಿ ಇನ್ನೂ ಔಪಚಾರಿಕವಾಗಿ ದೂರು ದಾಖಲಿಸಿಲ್ಲ . ದೂರು ನೀಡಿದರೆ ಆ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್