Har Ghar Tiranga: ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಖಜುರಾಹೊದ ದೇವಾಲಯಗಳು

ಸ್ವಾತಂತ್ರ್ಯದ ಅಮೃತ ಮಹೋತ್ಸದ ಪ್ರಯುಕ್ತ ಖಜುರಾಹೊದ ಚಂದೇಲ್ ಕಾರ್ಪೆಟ್ ವಿಶ್ವನಾಥ ದೇವಸ್ಥಾನವನ್ನು ರಾತ್ರಿ ವೇಳೆ ಮೂರು ಬಣ್ಣಗಳ ದೀಪಗಳಿಂದ ಅಲಂಕರಿಸಲಾಗಿತ್ತು. ಧ್ವಜದ ಬಣ್ಣಗಳ ರೋಮಾಂಚಕ ಕಲಾಕೃತಿಯನ್ನು ನೋಡಿದ ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದರು.

Har Ghar Tiranga: ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಖಜುರಾಹೊದ ದೇವಾಲಯಗಳು
ರಾಷ್ಟ್ರ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ದೇವಾಲಯ
Follow us
TV9 Web
| Updated By: Rakesh Nayak Manchi

Updated on: Aug 04, 2022 | 9:42 AM

ಟ್ರೆಂಡಿಂಗ್ ನ್ಯೂಸ್: ಸ್ವಾತಂತ್ರ್ಯದ ಅಮೃತ ಮಹೋತ್ಸದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರ ಮನವಿಯ ನಂತರ ಇಡೀ ದೇಶವೇ ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ (Har Ghar Tiranga Campaign) ಭಾಗವಹಿಸಿದ್ದು, ಅನೇಕ ಕಡೆಗಳಲ್ಲಿ ದೇವಾಲಯಗಳು ವಿಶೇಷವಾಗಿ ಅಭಿಯಾನದಲ್ಲಿ ಪಾಲ್ಗೊಂಡಿವೆ. ಈ ಪೈಕಿ ಖಜುರಾಹೊದ ದೇವಾಲಯಗಳು ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿವೆ. ಖಜುರಾಹೊದ ಚಂದೇಲ್ ಕಾರ್ಪೆಟ್ ವಿಶ್ವನಾಥ ದೇವಸ್ಥಾನವನ್ನು ರಾತ್ರಿ ವೇಳೆ ಮೂರು ಬಣ್ಣಗಳ ದೀಪಗಳಿಂದ ಅಲಂಕರಿಸಲಾಗಿತ್ತು. ಧ್ವಜದ ಬಣ್ಣಗಳ ರೋಮಾಂಚಕ ಕಲಾಕೃತಿಯನ್ನು ನೋಡಿದ ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದರು.

ಸ್ವಾತಂತ್ರ್ಯದ ಅಮೃತಮಹೋತ್ಸವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ ಇಡೀ ದೇಶವು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು. ಅಲ್ಲದೆ ಪ್ರಜೆಗಳು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ರಾಷ್ಟ್ರಧ್ವಜದ ಪ್ರೊಫೈಲ್ ಫೋಟೋಗಳನ್ನು ಹಾಕುವಂತೆಯೂ ಸಲಹೆ ನೀಡಿದ್ದಾರೆ.

ಪ್ರಧಾನಿ ಮೋದಿಯವರ ಮನವಿಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಕೋಟ್ಯಾಂತರ ಜನರು ತಮ್ಮ ಪ್ರೊಫೈಲ್​ನಲ್ಲಿ ತಿರಂಗದ ಫೋಟೋವನ್ನು ಹಾಕಿದ್ದಾರೆ. ಇನ್ನೂ ಕೆಲವರು ತ್ರಿವರ್ಣ ಧ್ವಜದೊಂದಿಗಿನ ತಮ್ಮ ಭಾವಚಿತ್ರವಿರುವ ಫೋಟೋವನ್ನು ಹಾಕಿಕೊಂಡು ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

ಸಾಮಾನ್ಯ ಜನರ ಜೊತೆಗೆ ದೇಶದ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ಕೂಡ ಈ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರ ಡಿಪಿಯಲ್ಲಿ ತ್ರಿವರ್ಣ ಧ್ವಜದ ಚಿತ್ರ ಹಾಕಲಾಗಿದೆ. ಇದೇ ವೇಳೆ ಪ್ರಧಾನಿ ಮೋದಿಯವರ ಈ ಅಭಿಯಾನಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡ ಹೊಸ ಅಭಿಯಾನ ಆರಂಭಿಸಿದೆ. ಕಾಂಗ್ರೆಸ್ ಪಕ್ಷವು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದಿರುವ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಚಿತ್ರವನ್ನು ಡಿಪಿಯಲ್ಲಿ ಹಾಕಲು ಪ್ರಾರಂಭಿಸಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ