AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅರೆಬರೆ ಬಟ್ಟೆ ತೊಟ್ಟು ರೀಲ್ಸ್​ ಮಾಡುತ್ತಿದ್ದ ಹೆಂಡತಿ; ಅವಮಾನ ತಾಳಲಾರದೇ ಆಕೆಗೆ ‘ಪಿಂಡದಾನ’ ಮಾಡಿದ ಗಂಡ!

ರೀಲ್ಸ್ ಹುಚ್ಚಿನಿಂದ ಸಂಸಾರದಲ್ಲಿ ಬಿರುಕು ಮೂಡಿದ ಹರಿದ್ವಾರದ ಆಘಾತಕಾರಿ ಘಟನೆ ಇದು. ಪತ್ನಿ ಹೇಮಾ ಚೌಧರಿ ಸೋಶಿಯಲ್ ಮೀಡಿಯಾ ರೀಲ್ಸ್‌ಗಳಿಗೆ ಅತಿಯಾಗಿ ಮಗ್ನಳಾಗಿ, ಅರೆಬರೆ ಬಟ್ಟೆ ಧರಿಸಿ ವಿಡಿಯೋ ಮಾಡುತ್ತಿದ್ದಳು. ಇದರಿಂದ ರೋಸಿಹೋದ ಪತಿ, ಆಕೆ ಜೀವಂತವಾಗಿದ್ದಾಗಲೇ ಹರಿದ್ವಾರದಲ್ಲಿ ಆಕೆಗೆ 'ಪಿಂಡದಾನ' ವಿಧಿ ನೆರವೇರಿಸಿದ್ದಾನೆ. ಈ ಮೂಲಕ ತನ್ನ ಪತ್ನಿ ತನಗೆ ಸತ್ತಂತೆ ಎಂದು ಸಂದೇಶ ರವಾನಿಸಿದ್ದಾನೆ. ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

Viral: ಅರೆಬರೆ ಬಟ್ಟೆ ತೊಟ್ಟು ರೀಲ್ಸ್​ ಮಾಡುತ್ತಿದ್ದ ಹೆಂಡತಿ; ಅವಮಾನ ತಾಳಲಾರದೇ ಆಕೆಗೆ 'ಪಿಂಡದಾನ' ಮಾಡಿದ ಗಂಡ!
ಪತ್ನಿಯ ರೀಲ್ಸ್​​ ಹುಚ್ಚಿಗೆ ಆಕೆಗೆ 'ಪಿಂಡದಾನ' ಮಾಡಿದ ಗಂಡImage Credit source: instagram
ಅಕ್ಷತಾ ವರ್ಕಾಡಿ
|

Updated on: May 14, 2026 | 10:41 AM

Share

ಹರಿದ್ವಾರ: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ರೀಲ್ಸ್ ಹುಚ್ಚು ಸಂಸಾರಗಳ ಮಧ್ಯೆ ಎಂತಹ ಬಿರುಕು ಮೂಡಿಸುತ್ತಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ತನ್ನ ಮಾತನ್ನು ಕೇಳದೆ ಸದಾ ಅರೆಬರೆ ಬಟ್ಟೆ ತೊಟ್ಟು ರೀಲ್ಸ್ ಮಾಡುವುದರಲ್ಲಿ ಮಗ್ನಳಾಗಿದ್ದ ಪತ್ನಿಯ ವರ್ತನೆಯಿಂದ ರೋಸಿಹೋದ ವ್ಯಕ್ತಿಯೊಬ್ಬ, ಆಕೆ ಬದುಕಿದ್ದಾಗಲೇ ಹರಿದ್ವಾರದಲ್ಲಿ ಆಕೆಗೆ ‘ಪಿಂಡದಾನ’ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಏನಿದು ಘಟನೆ?

ವರದಿಗಳ ಪ್ರಕಾರ, ರೀಲ್ಸ್ ಸ್ಟಾರ್ ಆಗಿರುವ ಹೇಮಾ ಚೌಧರಿ(@hemachoudhary986) ಎಂಬುವವರ ಪತಿಯೇ ಈ ವಿಚಿತ್ರ ಸಾಹಸಕ್ಕೆ ಕೈಹಾಕಿದವರು. ಹೇಮಾ ಅವರು ಸದಾ ಕಾಲ ಸೋಶಿಯಲ್ ಮೀಡಿಯಾದಲ್ಲಿ ಕಂಟೆಂಟ್ ಕ್ರಿಯೇಟ್ ಮಾಡುವುದು ಮತ್ತು ರೀಲ್ಸ್ ಮಾಡುವುದರಲ್ಲಿ ಬ್ಯುಸಿಯಾಗಿರುತ್ತಿದ್ದಳು. ಈ ವಿಚಾರವಾಗಿ ದಂಪತಿಗಳ ನಡುವೆ ಸಾಕಷ್ಟು ಬಾರಿ ಜಗಳ ನಡೆದಿತ್ತು. “ರೀಲ್ಸ್ ಮಾಡುವುದನ್ನು ನಿಲ್ಲಿಸು, ಸಂಸಾರದ ಕಡೆ ಗಮನ ಕೊಡು” ಎಂಬ ಪತಿಯ ಮನವಿಗೆ ಹೇಮಾ ಕಿವಿಗೊಟ್ಟಿರಲಿಲ್ಲ ಎನ್ನಲಾಗಿದೆ.

ಪಿಂಡದಾನ ಮಾಡುವ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನಮ್ಮ ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್​; ‘ಟಾಪ್ 10’ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಸ್ಥಾನ!

ಬದುಕಿರುವಾಗಲೇ ಪತ್ನಿಗೆ ಅಂತ್ಯಸಂಸ್ಕಾರದ ವಿಧಿವಿಧಾನ:

ಅರೆಬರೆ ಬಟ್ಟೆತೊಟ್ಟು ರೀಲ್ಸ್​​ ಮಾಡುತ್ತಿದ್ದ ಪತ್ನಿಯಿಂದ ಅಸಮಾಧಾನಗೊಂಡ ಪತಿ ಆಯ್ದುಕೊಂಡ ದಾರಿ ಹರಿದ್ವಾರ. ಅಲ್ಲಿಗೆ ತೆರಳಿದ ಆತ, ಸಾಮಾನ್ಯವಾಗಿ ಸತ್ತವರಿಗೆ ಮಾಡುವ ‘ಪಿಂಡದಾನ’ ವಿಧಿವಿಧಾನವನ್ನು ತನ್ನ ಪತ್ನಿಯ ಹೆಸರಿನಲ್ಲಿ ನೆರವೇರಿಸಿದ್ದಾರೆ. ವಿಶೇಷವೆಂದರೆ, ಪತ್ನಿ ರೀಲ್ಸ್ ಮಾಡುವುದನ್ನು ವಿರೋಧಿಸುತ್ತಿದ್ದ ಪತಿ, ತಾನು ಮಾಡಿದ ಈ ಪಿಂಡದಾನದ ಇಡೀ ಪ್ರಕ್ರಿಯೆಯನ್ನು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ. “ನನ್ನ ಪತ್ನಿ ಈಗ ನನಗೆ ಸತ್ತಂತೆ” ಎಂಬ ಸಂದೇಶವನ್ನು ರವಾನಿಸಲು ಆತ ಈ ರೀತಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ