Viral: ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಭರ್ಜರಿ ಹಣ ಸಂಪಾದಿಸಿ; ಜಾಹೀರಾತು ವೈರಲ್

ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಲಕ್ಷ ಲಕ್ಷ ಹಣ ಸಂಪಾದಿಸಿ ಎಂದು ಜಾಬ್‌ ಆಫರ್‌ ನೀಡಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ವಿವಾದಾತ್ಮಕ ಜಾಹಿರಾತು ನೀಡಿ ಜನರಿಂದ ಹಣ ಪೀಕುತ್ತಿದ್ದ ಇಬ್ಬರು ಆರೋಪಿಗಳನ್ನು ‌ ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ವೈರಲ್‌ ಆಗುತ್ತಿದೆ.

Viral: ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಭರ್ಜರಿ ಹಣ ಸಂಪಾದಿಸಿ; ಜಾಹೀರಾತು ವೈರಲ್
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 08, 2024 | 5:26 PM

ಆಧುನಿಕ ತಂತ್ರಜ್ಞಾನ ಬೆಳೆದಂತೆ ಮೋಸ, ವಂಚನೆಗಳ ಪ್ರಕರಣಗಳೂ ಹೆಚ್ಚಾಗುತ್ತಿದೆ. ಒಂದೆಡೆ ಮೊಬೈಲ್‌ ನಂಬರ್‌, ಬ್ಯಾಂಕ್‌ ಖಾತೆ ನಂಬರ್‌ಗಳಿಂದ ಹಲವು ರೀತಿಯಲ್ಲಿ ಹಣವನ್ನು ಖದೀಮರು ದೋಚಿದರೆ, ಇನ್ನೊಂದೆಡೆ ಸೋಷಿಯಲ್‌ ಮೀಡಿಯಾದಲ್ಲಿ ಮನೆಯಲ್ಲಿಯೇ ಕುಳಿತು ದಿನಕ್ಕೆ ಐದರಿಂದ ಹತ್ತು ಸಾವಿರ ರೂಪಾಯಿ ಗಳಿಸಬಹುದು ಎಂಬ ಫೇಕ್‌ ಜಾಬ್‌ ಆಫರ್‌ಗಳನ್ನು ನೀಡುವ ಮೂಲಕ ಜನರಿಗೆ ವಂಚನೆ ಮಾಡುತ್ತಿರುತ್ತಾರೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು ವಂಚಕರಿಬ್ಬರು ಸಾಮಾಜಿಕ ಜಾಲತಾಣದಲ್ಲಿ “ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಲಕ್ಷಗಟ್ಟಲೆ ಹಣ ಸಂಪಾದಿಸಿ” ಎಂಬ ನಕಲಿ ಜಾಹಿರಾತುಗಳನ್ನು ನೀಡಿ ಜನರಿಂದ ಹಣ ದೋಚುವ ಕೆಲಸಕ್ಕೆ ಇಳಿದಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ಆಘಾತಕಾರಿ ಘಟನೆ ಹರಿಯಾಣದ ಸುಹ್‌ ಜಿಲ್ಲೆಯಲ್ಲಿ ನಡೆದಿದ್ದು, ವಂಚಕರಿಬ್ಬರು ಆನ್‌ಲೈನ್‌ನಲ್ಲಿ “ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಭರ್ಜರಿ ಹಣ ಸಂಪಾದಿಸಿ” ಎಂಬ ಜನರ ದಿಕ್ಕು ತಪ್ಪಿಸುವಂತ ಜಾಹೀರಾತುಗಳನ್ನು ಪೋಸ್ಟ್‌ ಮಾಡಿ, ಜನರಿಂದ ಹಣ ದೋಚುವಂತಹ ಕೆಲಸಕ್ಕೆ ಇಳಿದಿದ್ದರು. ವಂಚಕರು ನಕಲಿ ಜಾಹಿರಾತುಗಳನ್ನು ಪೋಸ್ಟ್‌ ಮಾಡುತ್ತಿದ್ದರು. ಮತ್ತು ಜನರನ್ನು ಬಲೆಗೆ ಬೀಳಿಸಿ ಮಹಿಳೆಯರ ನಕಲಿ ಫೋಟೋಗಳನ್ನು ಸೆಂಡ್‌ ಮಾಡಿ ನಂತರ ನೋಂದಣಿ ಮತ್ತು ಫೈಲಿಂಗ್‌ ಶುಲ್ಕವನ್ನು ವಿಧಿಸಿ ಮೂಲಕ ಹಣ ದೋಚುತ್ತಿದ್ದರು.

ಇದನ್ನೂ ಓದಿ: ಹಾಯ್‌ ಫ್ರೆಂಡ್ಸ್‌ ಇವತ್ತು ನಮ್ಮ ಫಸ್ಟ್‌ ನೈಟ್‌, ಮೊದಲ ರಾತ್ರಿಯ ವಿಡಿಯೋ ಹಂಚಿಕೊಂಡ ನವ ಜೋಡಿ

ಈ ವಿಚಾರ ಪೊಲೀಸರ ಗಮನಕ್ಕೆ ಬಂದಿದ್ದು, ಈ ವಿವಾದಾತ್ಮಕ ಜಾಹಿರಾತನ್ನು ಕಂಡು ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. ನಂತರ ಸೂಕ್ತ ತನಿಖೆ ನಡೆಸಿದ್ದು, ತನಿಖೆಯ ವೇಳೆ ನಾಲ್ಕು ನಕಲಿ ಫೇಸ್‌ಬುಕ್‌ ಖಾತೆಗಳು ಮತ್ತು ಜಾಹಿರಾತುಗಳು ಪತ್ತೆಯಾಗಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಐದು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳಾದ ಎಜಾಜ್‌ ಮತ್ತು ಇರ್ಷಾದ್‌ ನನ್ನು ಬಂಧಿಸಲಾಗಿದೆ. ಬಳಿಕ ಶನಿವಾರ (ಜುಲೈ 7) ಆರೋಪಿಗಳನ್ನು ನುಹ್‌ನಲ್ಲಿರುವ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್