ಪ್ರೇಯಸಿಯನ್ನು ಸೂಟ್ ಕೇಸ್ ನಲ್ಲಿ ತುಂಬಿಕೊಂಡು ಹಾಸ್ಟೆಲ್​​ಗೆ ಬಂದ ವಿದ್ಯಾರ್ಥಿ, ಮುಂದೇನಾಯ್ತು ನೋಡಿ

ದೂರದ ಊರಿನಿಂದ ಓದಲು ಬರುವ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಉಳಿದುಕೊಂಡು ತಮ್ಮ ವಿದ್ಯಾಭ್ಯಾಸ ಪೂರ್ಣಗೂಳಿಸುತ್ತಾರೆ. ಈ ವೇಳೆಯಲ್ಲಿ ಪ್ರೀತಿ ಪ್ರೇಮಕ್ಕೆ ಬಿದ್ದು ಅಡ್ಡದಾರಿ ಹಿಡಿಯುವವರೇ ಹೆಚ್ಚು. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವಿದ್ಯಾರ್ಥಿಯೊಬ್ಬನು ತನ್ನ ಪ್ರೆಯಸಿಯನ್ನು ಸೂಟ್ ಕೇಸ್ ನಲ್ಲಿ ತುಂಬಿಕೊಂಡು ಹುಡುಗರ ಹಾಸ್ಟೆಲ್ ಪ್ರವೇಶಿಸುವ ವೇಳೆ ವಾರ್ಡನ್ ಕೈ ಯಲ್ಲಿ ಸಿಕ್ಕಿ ಬಿದ್ದಿದ್ದಾನೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ತರಹೇವಾರಿ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ.

ಪ್ರೇಯಸಿಯನ್ನು ಸೂಟ್ ಕೇಸ್ ನಲ್ಲಿ ತುಂಬಿಕೊಂಡು ಹಾಸ್ಟೆಲ್​​ಗೆ ಬಂದ ವಿದ್ಯಾರ್ಥಿ, ಮುಂದೇನಾಯ್ತು ನೋಡಿ
ವೈರಲ್​​ ವಿಡಿಯೋ
Updated By: ಅಕ್ಷಯ್​ ಪಲ್ಲಮಜಲು​​

Updated on: Apr 12, 2025 | 2:41 PM

ಹರಿಯಾಣ, ಏಪ್ರಿಲ್ 12: ಶಿಕ್ಷಣ (education) ಕ್ಕಾಗಿ ಹಾಸ್ಟೆಲ್ (hostel) ಸೇರಿಕೊಳ್ಳುವ ವಿದ್ಯಾರ್ಥಿಗಳು (students) ಮಾಡುವ ಕಿತಾಪತಿಗಳು ಒಂದೆರಡಲ್ಲ. ಕೆಲವೊಮ್ಮೆ ಎಡವಟ್ಟು ಮಾಡಿಕೊಂಡು ಹಾಸ್ಟೆಲ್ ವಾರ್ಡನ್ (hostel warden) ಕೈಯಲ್ಲಿ ಸಿಕ್ಕಿ ಬೀಳುತ್ತಾರೆ. ಈ ವೇಳೆಯಲ್ಲಿ ಕಠಿಣ ಶಿಕ್ಷೆಯನ್ನು ವಿಧಿಸುವುದು ಇದೆ. ಇದಕ್ಕೆ ಸಂಬಂಧಪಟ್ಟ ಸಾಕಷ್ಟು ವಿಡಿಯೋಗಳು ಸೋಶಿಯಲ್ ಮೀಡಿಯಾ (social media) ದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಹರಿಯಾಣ (haryana) ದ ಒಪಿ ಜಿಂದಾಲ್ ವಿಶ್ವವಿದ್ಯಾಲಯ ( ದ ವಿದ್ಯಾರ್ಥಿಯೊಬ್ಬನು ತನ್ನ ಗೆಳೆತಿಯನ್ನು ಸೂಟ್ ಕೇಸ್ (suitcase) ನಲ್ಲಿ ತುಂಬಿಕೊಂಡು ಯಾರಿಗೂ ಗೊತ್ತಾಗದಂತೆ ಬಾಯ್ಸ್ ಹಾಸ್ಟೆಲ್ ಪ್ರವೇಶಿಸುತ್ತಿದ್ದಂತೆ ಹಾಸ್ಟೆಲ್ ವಾರ್ಡನ್ ಕೈಯಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಘಟನೆಯೂ ಹರಿಯಾಣದ ಸೋನಿಪತ್‌ನಲ್ಲಿರುವ ವಿಶ್ವವಿದ್ಯಾಲಯದ ಬಾಯ್ಸ್ ಹಾಸ್ಟೆಲ್‌ ನಲ್ಲಿ ನಡೆದಿದೆ ಎನ್ನಲಾಗಿದೆ.

Ghar ke kalesh ಹೆಸರಿನ ಖಾತೆಯಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ವಿದ್ಯಾರ್ಥಿಯೊಬ್ಬನು ತನ್ನ ಗೆಳೆತಿಯನ್ನು ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಬಾಯ್ಸ್ ಹಾಸ್ಟೆಲ್‌ಗೆ ಕರೆತರಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಅನುಮಾನಗೊಂಡ ಭದ್ರತಾ ಸಿಬ್ಬಂದಿ ಸೂಟ್‌ಕೇಸ್ ತೆರೆಯುತ್ತಿದ್ದು, ಈ ವೇಳೆಯಲ್ಲಿ ಹುಡುಗಿ ಬ್ಯಾಗಿನಿಂದ ಹೊರಬರುವುದನ್ನು ಕಾಣಬಹುದು. ವರದಿಯ ಪ್ರಕಾರ ಸೂಟ್ ಕೇಸ್ ಬ್ಯಾಗ್ ನಲ್ಲಿದ್ದ ಯುವತಿ ಜೋರಾಗಿ ಕಿರುಚಿಕೊಂಡಿದ್ದು ಈ ವೇಳೆಯಲ್ಲಿ ಹಾಸ್ಟೆಲ್ ಸಿಬ್ಬಂದಿ ಸೂಟ್ ಕೇಸ್ ತೆರೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಇದನ್ನೂ ಓದಿ : ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಯ ಹಾಲ್ ಟಿಕೆಟ್ ಎಗರಿಸಿದ ಹದ್ದು, ಕಂಗಲಾದ ಅಭ್ಯರ್ಥಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ವೈರಲ್ ಆಗುತ್ತಿದ್ದಂತೆ ಬಗ್ಗೆ ವಿಶ್ವವಿದ್ಯಾನಿಲಯವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅದಲ್ಲದೆ, ವಿದ್ಯಾರ್ಥಿಯ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ ಎಂಬ ಬಗ್ಗೆಯೂ ವಿಶ್ವವಿದ್ಯಾನಿಲಯವು ಯಾವುದೇ ಮಾಹಿತಿ ನೀಡಿಲ್ಲ.ಆದರೆ ಈ ವಿಡಿಯೋವೊಂದು ಮೂವತ್ತಾನಾಲ್ಕು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ. ಬಳಕೆದಾರರೊಬ್ಬರು, ‘ಇದು ಆಕೆಯ ಗೆಳೆತಿ’ ಎಂದು ಹೇಳಿದ್ದಾರೆ. ಇನ್ನೊಬ್ಬರು, ‘ಅಬ್ಬಬಾ ಈ ವಿದ್ಯಾರ್ಥಿ ಎಷ್ಟು ಬುದ್ಧಿವಂತ ನೋಡಿ’ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಮತ್ತೊರ್ವ ಬಳಕೆದಾರರು, ‘ಈತನ ಧೈರ್ಯಕ್ಕೆ ಸೆಲ್ಯೂಟ್ ‘ ಎಂದು ಕಾಮೆಂಟ್ ಮಾಡಿದ್ದಾರೆ. ಮಗದೊಬ್ಬ ಬಳಕೆದಾರರು,

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 2:40 pm, Sat, 12 April 25