AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OYO ರೂಮ್ ಮುಚ್ಚಿಸಿದ್ದೀರಾ, ಈಗ ನಮಗೆ ನೀವೇ ರೂಮ್​​​ ನೀಡಿ ಶಾಸಕರ ಮುಂದೆ ಬೇಡಿಕೆಯಿಟ್ಟ ಲವರ್ಸ್​​

ಪಾರ್ಕ್​​​ ಮೇಲೆ ದಾಳಿ ಮಾಡಿ ಅಲ್ಲಿದ್ದ ಲವರ್ಸ್​​ಗಳನ್ನು ಪಾರ್ಕ್​​ನಿಂದ ಹೊರಗೆ ಹೋಗುವಂತೆ ಹೇಳಿದ ಶಾಸಕರಿಗೆ ಲವರ್ಸ್​​​​ಗಳು ವಿಶೇಷ ಬೇಡಿಕೆಯನ್ನು ಇಟ್ಟಿದ್ದಾರೆ. ಪಾರ್ಕ್​​ನ ಅಕ್ಕಪಕ್ಕದ ನಿವಾಸಿಗಳು ನೀಡಿದ ದೂರಿನ ಆಧಾರದ ಮೇಲೆ ಶಾಸಕರು ಈ ದಾಳಿಯನ್ನು ನಡೆಸಿದ್ದಾರೆ. ಶಾಸಕರ ಈ ಕ್ರಮಕ್ಕೆ ಜೋಡಿ ಹಕ್ಕಿಗಳು ಕೋಪಗೊಂಡಿದ್ದಾರೆ. ನಮಗೆ OYO ರೂಮ್​​ ನೀಡಿ. ಈಗಾಗಲೇ ಅವುಗಳನ್ನು ಮುಚ್ಚಿಸಿದ್ದೀರಾ ಎಂದು ಶಾಸಕರಿಗೆ ಮುಂದೆ ಪ್ರಶ್ನೆ ಮಾಡಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on: Apr 23, 2024 | 3:54 PM

Share

ಪಾರ್ಕ್​ನಲ್ಲಿ ಲವರ್ಸ್​​​​​​ ಏಕಾಂತದಲ್ಲಿರಬೇಕಾದರೆ ಶಾಸಕರೊಬ್ಬರು ಈ ಪಾರ್ಕ್​​ಗೆ ದಾಳಿ ಮಾಡಿದ್ದಾರೆ, ಅಲ್ಲಿದ್ದ ಜೋಡಿಗಳನ್ನು ಪಾರ್ಕ್​​ನಿಂದ ಹೊರಗೆ ಹೋಗುವಂತೆ ಹೇಳಿದ್ದಾರೆ. ಇವರ ಈ ಕ್ರಮಕ್ಕೆ ರೋಚಿಗೆದ್ದು ಪ್ರೇಮಿಯೊಬ್ಬ OYO ರೂಮ್​ಗಳನ್ನು  ಮುಚ್ಚಿದೆ. ನೀವೇ ನಮಗೆ OYO ರೂಮ್​​​​​​​ ವ್ವವಸ್ಥೆ ಮಾಡಿ ಎಂದು ಹೇಳಿದ್ದಾರೆ, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಛತ್ತೀಸ್​​​ಗಢದ ಶಾಸಕ ರಿಕೇಶ್​ ಸೇನ್​​​ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಈ ವಿಡಿಯೋದಲ್ಲಿ ಶಾಸಕರು ಕಾರಿನಲ್ಲಿ ಬಂದು ಪಾರ್ಕ್​​ ಬಳಿ ಇಳಿಯುತ್ತಾರೆ. ತಮ್ಮ ಸಹಾಯಕರಲ್ಲಿ ಎಲ್ಲವನ್ನು ವಿಡಿಯೋ ಮಾಡಿಕೊಳ್ಳುವಂತೆ ಹೇಳುತ್ತಾರೆ. ಶಾಸಕರು ಪ್ರೇಮಿಗಳ ಬಳಿ ಹೋಗಿ, ಪಾರ್ಕ್​​​ನಿಂದ ಹೊರಗೆ ಹೋಗುವಂತೆ ಹೇಳುತ್ತಾರೆ. ಆದರೆ ಇವರ ಈ ಕ್ರಮವನ್ನು ಯುವಕನೊಬ್ಬ ಪ್ರಶ್ನೆ ಮಾಡುತ್ತಾರೆ. ನಾವು ಏಲ್ಲಿಗೆ ? ಹೋಗಬೇಕು. ಈಗಾಗಲೇ ನೀವು OYO ಮುಚ್ಚಿಸಿದ್ದೀರಾ? ನಮಗೆ OYO ವ್ಯವಸ್ಥೆ ಮಾಡಿ ಎಂದು ಕೇಳಿದ್ದಾರೆ. ಇದಕ್ಕೆ ಕೋಪಗೊಂಡ ಶಾಸಕರು, OYO ಬದಲು ನಿಮ್ಮ ಮನೆಯಲ್ಲೇ ಟೈಮ್​​ ಪಾಸ್​​ ಮಾಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಂಥಾ ಕಾಲ ಬಂತು ಗುರು ಫೋನ್ ಕಾಲಿಂಗ್ ಮೂಲಕ ದೇವರಿಗೆ ಪ್ರಾರ್ಥನೆ

ಶಾಸಕರು ಭಿಲಾಯಿ ನಗರದಲ್ಲಿರುವ ಈ ಪಾರ್ಕ್​​ನ ಅಕ್ಕಪಕ್ಕದ ಜನರು ಲವರ್ಸ್​​​ಗಳು ಈ ಪಾರ್ಕ್​​ಗೆ ಭೇಟಿ ನೀಡುವ ಕಾರಣ ನಮಗೆ ತೊಂದರೆ ಆಗುತ್ತಿದೆ ಎಂದು ಶಾಸಕರಿಗೆ ದೂರು ನೀಡಿದ್ದಾರೆ. ಹಾಗಾಗಿ ಶಾಸಕರು ಈ ಪಾರ್ಕ್​​ಗೆ ಭೇಟಿ ನೀಡಿದ್ದಾರೆ. ಈ ಹಿಂದೆ ಇದೆ ಶಾಸಕರು OYO ಹೋಟೆಲ್​​​ ಮೇಲೆ ದಾಳಿ ಮಾಡಿದ್ದರು. ನಂತರ ಎರಡು ಹೋಟೆಲ್​​ಗಳನ್ನು ಮುಚ್ಚಲಾಗಿತ್ತು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು