ಮಾಡಿಸಿದ್ರೆ ಇಂತಹ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸ್ಬೇಕು! ಏನ್​​ ಅದ್ಭುತವಾಗಿದೆ ನೋಡಿ

ಇತ್ತೀಚಿನ ದಿನಗಳಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಸಖತ್ ಟ್ರೆಂಡ್ ಅಲ್ಲಿದೆ. ಬಹುತೇಕ ಎಲ್ಲರೂ ವೆಸ್ಟರ್ನ್ ಶೈಲಿಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡರೆ, ಇಲ್ಲೊಂದು ಜೋಡಿ ಮಾತ್ರ ಭಾರತೀಯ ಸಂಸ್ಕೃತಿಯಂತೆ ವಿಶಿಷ್ಟವಾಗಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ನೋಡಿದ ಅನೇಕರು  ಪ್ರೀ ವೆಡ್ಡಿಂಗ್ ಶೂಟ್ ಅಂದ್ರೆ ಇದಪ್ಪಾ… ಎಂದು ಹೊಗಳಿಕೆಯ ಮಾತುಗಳನ್ನಾಡುತ್ತಿದ್ದಾರೆ. 

ಮಾಡಿಸಿದ್ರೆ ಇಂತಹ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸ್ಬೇಕು! ಏನ್​​ ಅದ್ಭುತವಾಗಿದೆ ನೋಡಿ
ವೈರಲ್ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 08, 2023 | 3:24 PM

ಇತ್ತೀಚಿನ ದಿನಗಳಲ್ಲಿ ಪ್ರೀ ವೆಡ್ಡಿಂಗ್ ಮತ್ತು ಪೋಸ್ಟ್ ವೆಡ್ಡಿಂಗ್ ಶೂಟ್ ತುಂಬಾ ಟ್ರೆಂಡಿಂಗ್ ಅಲ್ಲಿದೆ. ಬಹುತೇಕ ವಿವಾಹವಾಗುವಂತಹ ಎಲ್ಲಾ ಜೋಡಿಗಳು ವಿವಿಧ ಥೀಮ್ ಗಳಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಳ್ಳಬೇಕೆಂದು ಬಯಸುತ್ತಾರೆ. ಮತ್ತು   ಈ ಕ್ಷಣವನ್ನು ಸ್ಮರಣೀಯವಾಗಿರಿಸಲು ಕೆಲವೊಬ್ಬರು ವಿದೇಶಕ್ಕೆ ಹೋಗಿ  ಪ್ರೀ ವೆಡ್ಡಿಂಗ್ ಶೂಟ್  ಮಾಡಿಸಿಕೊಂಡರೆ,  ಕೆಲವೊಬ್ಬರು ಬೀಚ್, ನಿಸರ್ಗದ ಮಡಿಲಲ್ಲಿ, ಸ್ನೋ ಫಾಲ್ ಇತ್ಯಾದಿ ಸ್ಥಳಗಳಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸುತ್ತಾರೆ.  ಅದರಲ್ಲೂ ಇನ್ನೂ ಕೆಲವೊಬ್ಬರೂ ಸಭ್ಯತೆಯ ಎಲ್ಲೆ ಮೀರಿ   ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಈ ಹಿಂದೆ ಕೇರಳದ ಜೋಡಿಯೊಂದು ಅಸಭ್ಯ ರೀತಿಯಲ್ಲಿ ಪೋಸ್ಟ್ ವೆಡ್ಡಿಂಗ್ ಶೂಟ್ ಮಾಡಿಸಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಆದರೆ ಇಲ್ಲೊಂದು ಜೋಡಿ ನಮ್ಮ ಸಂಸ್ಕೃತಿ, ಸಂಪ್ರದಾಯದಕ್ಕೆ ಸರಿ ಹೊಂದುವಂತೆ  ಅದ್ಭುತವಾದ ಥೀಮ್ ಇಟ್ಟುಕೊಂಡು ಪ್ರೀ ವೆಡಿಂಗ್ ಶೂಟ್ ಮಾಡಿದ್ದಾರೆ.   ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೆಟ್ಟಿಗರಿಂದ  ಭಾರಿ ಮೆಚ್ಚುಗೆಯನ್ನು ಪಡೆದುಕೊಂಡಿದೆ.

ಶಿವಾರ್ಚಕ ಮಧು ದೀಕ್ಷೀತ್ ದಂಪತಿ ಈ  ಅದ್ಭುತ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದು, ಈ  ವಿಡಿಯೋವನ್ನು ನಿತ್ಯಾನಂದ ಎಸ್.ಬಿ ಎಂಬವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಾಗೂ  ʼಇದ್ದಪ್ಪಾ ಪ್ರೀ ವೆಡಿಂಗ್ ಶೂಟ್ ಅಂದ್ರೆ!!!ʼ ಎಂಬ ಶೀರ್ಷಿಕೆಯನ್ನು ಕೂಡಾ ಬರೆದುಕೊಂಡಿದ್ದಾರೆ.   ʼಓಂʼ ಚಿತ್ರ ಬ್ರಹ್ಮಾನಂದ ಓಂಕಾರʼ ಹಾಡಿಗೆ  ಹಿಂದೂ ಸಂಸ್ಕೃತಿಯಂತೆ ವಿಡಿಯೋ ಶೂಟ್ ಮಾಡಿಸಿದ್ದು, ನವ ಜೋಡಿಗಳು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟ ಸುಂದರವಾದ ದೃಶ್ಯಾವಳಿಗಳನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಈ  ವಿಡಿಯೋವನ್ನು ದೇವಾಲಯ ಹಾಗೂ ಅಲ್ಲಿನ ಸುತ್ತಮುತ್ತಲಿನ ಪರಿಸರದಲ್ಲಿ  ಶೂಟ್ ಮಾಡಲಾಗಿದ್ದು, ವಿದೇಶಿ ಸಂಸ್ಕೃತಿಗೆ ಮಾರು ಹೋಗಿ ವೆಸ್ಟರ್ನ್ ಶೈಲಿಯಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುವವರ ಮಧ್ಯೆ ಈ ಜೋಡಿಯ  ಅರ್ಥಪೂರ್ಣವಾದ  ಪ್ರೀ ವೆಡ್ಡಿಂಗ್ ಶೂಟ್ಗೆ  ಭಾರಿ ಮೆಚ್ಚುಗೆ ಸಿಕ್ಕಿದೆ.

ಇದನ್ನೂ ಓದಿ: ಈ ರೆಸ್ಟೋರೆಂಟ್​​ನಲ್ಲಿ ಕಪಾಳಮೋಕ್ಷ ಸ್ಪೆಷಲ್​​ ಮೆನು

ಫೇಸ್ಬುಕ್ ಅಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ  497 ಸಾವಿರ ವೀಕ್ಷಣೆಗಳನ್ನು ಹಾಗೂ ಹಲವಾರು ಕಮೆಂಟ್ಸ್ಗಳನ್ನು ಪಡೆದುಕೊಂಡಿದೆ.   ಒಬ್ಬ ಬಳಕೆದಾರರು ʼನಿಜವಾಗಿಯೂ ಇದು ತುಂಬಾ ಅದ್ಭುತವಾಗಿದೆʼ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದೊಂದು ಅದ್ಭುತ ಕಾನ್ಸೆಪ್ಟ್.  ಈ ತರಹದ ಒಂದು ಪ್ರೀ ವೆಡಿಂಗ್ ಶೂಟ್ ನಾನು ಈವರೆಗೆ ನೋಡೆ ಇಲ್ಲʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಎಲ್ಲಿಯೂ ಸಭ್ಯತೆ ಮೀರದೆ ಮಾಡಿರುವ ಈ ವಿಡಿಯೋ ಶೂಟ್ ತುಂಬಾ ಚೆನ್ನಾಗಿದೆʼ ಎಂದು ಹೇಳಿದ್ದಾರೆ. ಇನ್ನು ಹಲವರೂ ಈ ಅದ್ಭುತವಾದ ಪ್ರೀ ವೆಡ್ಡಿಂಗ್ ಶೂಟ್ ಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ