Viral: ತಾಯವ್ವ ಜಾತ್ರೆಯಲ್ಲಿ ಸಿದ್ದರಾಮಯ್ಯ ಎದುರು ಮೋದಿ ಪರ ಘೋಷಣೆ, ಸಿಎಂ ರಿಯಾಕ್ಷನ್​​​ ನೋಡಿ

ಸಿಎಂ ಸಿದ್ದರಾಮಯ್ಯ ಅವರು ಹಾವೇರಿಯ ತಡಸ ಗ್ರಾಮದಲ್ಲಿನ ತಾಯವ್ವ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಯುವಕರ ತಂಡವೊಂದು ಸಿಎಂ ಎದುರು ಮೋದಿ… ಮೋದಿ… ಎಂದು ಜೋರಾಗಿ ಕೂಗುತ್ತಾ ಪ್ರಧಾನಿ ಮೋದಿ ಪರ ಘೋಷಣೆಯನ್ನು ಕೂಗಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಕೆಲ ತಿಂಗಳುಗಳ ಹಿಂದೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಭಕ್ತರು ಮೋದಿ ಪರ ಜೋರಾಗಿ ಘೋಷಣೆ ಕೂಗಿದಂತಹ ಸುದ್ದಿ ಸಖತ್‌ ವೈರಲ್‌ ಆಗಿತ್ತು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಹಾವೇರಿಯ ತಡಸ ಗ್ರಾಮದ ತಾಯವ್ವ ದೇವಿ ದೇವಸ್ಥಾನಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಯುವಕರ ತಂಡವೊಂದು ಜೋರಾಗಿ ಮೋದಿ ಪರ ಘೋಷಣೆ ಕೂಗಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ಹಾವೇರಿಯಲ್ಲಿ ನಡೆದಿದ್ದು, ಮಂಗಳವಾರ (ನವೆಂಬರ್‌ 05) ಇಲ್ಲಿನ ತಡಸ ಗ್ರಾಮದಲ್ಲಿರುವ ತಾಯವ್ವ ದೇವಿ ದೇವಸ್ಥಾನಕ್ಕೆ ಜಾತ್ರೆಯ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ, ಸಿಎಂ ವಾಹನ ಜಾಥದಲ್ಲಿ ಸಾಗುತ್ತಿದ್ದ ವೇಳೆ ಅಲ್ಲಿ ನೆರೆದಿದ್ದ ಯುವಕರು ಮೋದಿ… ಮೋದಿ.. ಎಂದು ಜೋರಾಗಿ ಕೂಗುತ್ತಾ ಪ್ರಧಾನಿ ಮೋದಿ ಪರ ಘೋಷಣೆಯನ್ನು ಕೂಗಿದ್ದಾರೆ.

ಇದನ್ನೂ ಓದಿ: ಕಂದಮ್ಮಗಳ ರಕ್ಷಣೆಗೆ ಸಿಂಹಿಣಿಯೊಂದಿಗೆ ಘೋರ ಯುದ್ಧಕ್ಕೆ ಇಳಿದ ತಾಯಿ ಚಿರತೆ; ವಿಡಿಯೋ ವೈರಲ್‌

karnatakaportf ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎದುರು ಯುವಕರ ತಂಡವೊಂದು ಮೋದಿ ಪರ ಘೋಷಣೆ ಕೂಗುತ್ತಿರುವ ದೃಶ್ಯವನ್ನು ಕಾಣಬಹುದು. ತಾಯವ್ವ ದೇವಿ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ವಾಹನ ಜಾಥದಲ್ಲಿ ಸಿಎಂ ಸಿದ್ದರಾಮಯ್ಯ ಬರುತ್ತಿದ್ದ ವೇಳೆ ಅಲ್ಲಿ ನೆರೆದಿದ್ದ ಯುವಕರ ಗುಂಪೊಂದು ಮೋದಿ.. ಮೋದಿ… ಎಂದು ಜೋರಾಗಿ ಫೋಷಣೆಯನ್ನು ಕೂಗಿದ್ದಾರೆ. ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us