Viral: ಅಶ್ಲೀಲ ಮೆಸೇಜ್‌ ಮಾಡಿದ ಆರೋಪ; ವಿದ್ಯಾರ್ಥಿನಿ ಮತ್ತು ಕುಟುಂಬಸ್ಥರ ಕೈಯಿಂದ ಶಿಕ್ಷಕನಿಗೆ ಬಿತ್ತು ಗೂಸಾ

ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿ ಕಿರುಕುಳ ನೀಡಿದ ಆರೋಪದ ಮೇರೆಗೆ ಶಿಕ್ಷಕನೊಬ್ಬನಿಗೆ ಚಪ್ಪಲಿ ಏಟು ಬಿದ್ದಂತಹ ಘಟನೆ ನಡೆದಿದೆ. ಶಾಲೆಗೆ ನುಗ್ಗಿದ ವಿದ್ಯಾರ್ಥಿನಿಯ ಕುಟುಂಬಸ್ಥರು ಎಲ್ಲರ ಎದುರಲ್ಲೇ ಅಶ್ಲೀಲವಾಗಿ ಮೆಸೇಜ್‌ ಮಾಡಿದಂತಹ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಶಿಕ್ಷಕರನ್ನು ವಿದ್ಯಾರ್ಥಿಗಳ ಪಾಲಿನ ಹೊಂಬೆಳಕು ಅಂದ್ರೆ ತಪ್ಪಾಗಲಾರದು. ಆದ್ರೆ ಇಲ್ಲೊಬ್ಬ ವಿದ್ಯಾರ್ಥಿಗಳಿ ದಾರಿದೀಪವಾಗಬೇಕಿದ್ದ ಶಿಕ್ಷಕನೇ ದಾರಿ ತಪ್ಪಿದ್ದು, ವಿದ್ಯಾರ್ಥಿಯೋರ್ವಳಿಗೆ ಅಶ್ಲೀಲ ಮೆಸೇಜ್‌ಗಳನ್ನು ಕಳುಹಿಸಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ನುಗ್ಗಿದ ವಿದ್ಯಾರ್ಥಿನಿಯ ಕುಟುಂಬಸ್ಥರು ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ಘಟನೆ ಹಿಮಾಚಲ ಪ್ರದೇಶದ ಹಮೀರ್‌ಪುರ ಎಂಬಲ್ಲಿ ನಡೆದಿದ್ದು, ಅಶ್ಲೀಮ ಮೆಸೇಜ್‌ ಕಳುಹಿಸಿದ ಆರೋಪದ ಮೇರೆಗೆ ವಿದ್ಯಾರ್ಥಿನಿಯ ಕುಟುಂಬಸ್ಥರು ಶಿಕ್ಷಕನೊಬ್ಬನಿಗೆ ಚಪ್ಪಲಿ ಏಟು ನೀಡಿದ್ದಾರೆ. ಆ ಶಿಕ್ಷಕ ವಿದ್ಯಾರ್ಥಿನಿಗೆ ಪದೇ ಪದೇ ಅಶ್ಲೀಲ ಮೆಸೇಜ್‌ ಕಳುಹಿಸುವ ಮೂಲಕ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ವಿದ್ಯಾರ್ಥಿನಿ ಈ ಬಗ್ಗೆ ಮನೆಯವರಿಗೆ ದೂರನ್ನು ನೀಡಿದ್ದಾಳೆ. ಈ ವಿಷಯ ತಿಳಿಯುತ್ತಿದ್ದಂತೆ ಏಕಾಏಕಿ ಶಾಲೆಗೆ ನುಗ್ಗಿದ ಆಕೆಯ ಮನೆಯವರು ಎಲ್ಲರ ಎದುರಲ್ಲೇ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.

ಇದನ್ನೂ ಓದಿ: ಜೈಲಿಂದ ಬಿಡುಗಡೆಯಾದ ಖುಷಿಯಲ್ಲಿ ಯುವಕನ ಸಖತ್ ಬ್ರೇಕ್‌ ಡಾನ್ಸ್; ವಿಡಿಯೋ ವೈರಲ್

ಈ ಕುರಿತ ವಿಡಿಯೋವನ್ನು News1IndiaTweet ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬಸ್ಥರು ಅಶ್ಲೀಲ ಮೆಸೇಜ್‌ ಕಳುಹಿಸಿದಂತಹ ಶಿಕ್ಷಕನಿಗೆ ಶಾಲೆಯ ಹೊರಗಡೆ ವಿದ್ಯಾರ್ಥಿಗಳ ಮುಂದೆಯೇ ಚಪ್ಪಲಿ ಸೇವೆ ಮಾಡುವಂತಹ ದೃಶ್ಯವನ್ನು ಕಾಣಬಹುದು. ಮಕ್ಕಳಿಗೆ ದಾರಿ ದೀಪವಾಗಬೇಕಿದ್ದ ಶಿಕ್ಷಕನೇ ಈ ರೀತಿ ನಡೆದುಕೊಂಡ ವಿಷಯ ತಿಳಿದು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us