AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್; ಚಾಲಕ ಪಾರಾಗಿದ್ದೇ ರೋಚಕ

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್; ಚಾಲಕ ಪಾರಾಗಿದ್ದೇ ರೋಚಕ

ಅಕ್ಷತಾ ವರ್ಕಾಡಿ
|

Updated on: Dec 28, 2024 | 3:53 PM

Share

ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದಿಂದಾಗಿ ರಸ್ತೆಗಳು ಅಪಾಯಕಾರಿಯಾಗಿವೆ. ಮನಾಲಿಯಲ್ಲಿ ಹಿಮಾವೃತ ರಸ್ತೆಯಲ್ಲಿ ಟ್ರಕ್ ಒಂದು ಕಂದಕಕ್ಕೆ ಉರುಳಿ ಬಿದ್ದಿದೆ. ಚಾಲಕ ಅದೃಷ್ಟವಶಾತ್ ಪಾರಾಗಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಿಮಪಾತದಿಂದಾಗಿ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುವ ಅಪಾಯ ಹೆಚ್ಚಾಗಿದೆ.

ಹಿಮಾಚಲ ಪ್ರದೇಶದ ಭಾರೀ ಹಿಮಪಾತವು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತದಿಂದಾಗಿ ರಸ್ತೆಗಳಲ್ಲಿ ವಾಹನಗಳು ಸ್ಕಿಡ್ ಆಗುವುದರಿಂದ ಪ್ರಯಾಣಿಸುವುದು ಅಪಾಯಕಾರಿಯಾಗಿದೆ. ಇದೀಗ ಮನಾಲಿಯ ಹಿಮಾವೃತ ರಸ್ತೆಯಿಂದ ಟ್ರಕ್ ಒಂದು ಜಾರಿ ಪ್ರಪಾತಕ್ಕೆ ಬಿದ್ದಿರುವ ಘಟನೆ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಟ್ರಕ್​​ ಸೋಲಾಂಗ್ ಕಣಿವೆಗೆ ಬಿದ್ದಿದ್ದು, ಚಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ.

ಹಿಮಾವೃತ ರಸ್ತೆಯಿಂದಾಗಿ ಬ್ರೇಕ್ ವಿಫಲವಾದ ಕಾರಣ ಟ್ರಕ್ ನಿಯಂತ್ರಣ ಕಳೆದುಕೊಂಡಿದ್ದು, ಚಾಲಕ ತಕ್ಷಣವೇ ವಾಹನದಿಂದ ಜಿಗಿದಿದ್ದಾನೆ. ಆತ ವಾಹನವನ್ನು ನಿಲ್ಲಿಸಲು ಪ್ರಯತ್ನಿಸಿದ್ದು, ಆದರೆ ಎಲ್ಲವೂ ವ್ಯರ್ಥವಾಯಿತು. ಅದಾಗಲೇ ಟ್ರಕ್ ಜಾರುತ್ತಾ ಹೋಗಿ ಕಣಿವೆಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. @sanjaykhan26 ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ