Video: ಮಹಿಳಾ ರೋಗಿಗಳ ಮುಂದೆ ಹೆರಿಗೆ ವಾರ್ಡ್‌ನಲ್ಲಿ ಹಸ್ತಮೈಥುನ ಮಾಡುತ್ತಾ ವಿಕೃತಿ ಮೆರೆದ ವ್ಯಕ್ತಿ

ಉತ್ತರಾಖಂಡದ ಕೋಟ್‌ದ್ವಾರದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನವೆಂಬರ್ 13 ರಂದು ನಡೆದಿದ್ದು, ರೋಗಿಗಳು ದೂರಿನ ಮೇರೆಗೆ ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಉತ್ತರಾಖಂಡ: ಹೆರಿಗೆ ವಾರ್ಡ್‌ನಲ್ಲಿ ನಿಂತು ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಉತ್ತರಾಖಂಡದ ಕೋಟ್‌ದ್ವಾರದಲ್ಲಿ ನಡೆದಿದೆ. ಪೌರಿ ಗರ್ವಾಲ್‌ನ ಕೋಟ್‌ದ್ವಾರದ ಸರ್ಕಾರಿ ಆಸ್ಪತ್ರೆಯೊಳಗೆ ಈ ಘಟನೆ ಸಂಭವಿಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹೆರಿಗೆ ವಾರ್ಡ್‌ನ ಒಳಗಡೆ ಇರುವ ಹಾಸಿಗೆಯ ಬಳಿ ನಿಂತು ವ್ಯಕ್ತಿ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ಘಟನೆ ಬುಧವಾರ (ನವೆಂಬರ್ 13) ಸಂಭವಿಸಿದೆ ಎಂದು ವರದಿಯಾಗಿದೆ. ವಾರ್ಡ್‌ನೊಳಗೆ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವ್ಯಕ್ತಿಯನ್ನು ಕಂಡು ವಾರ್ಡ್‌ನೊಳಗಿದ್ದ ಮಹಿಳಾ ರೋಗಿಗಳು ಅಲಾರಾಂ ಮಾಡಿದ್ದರು. ಗಲಾಟೆಯಿಂದಾಗಿ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ, ಆದರೆ ವಾರ್ಡ್‌ನೊಳಗಿನ ಮಹಿಳಾ ರೋಗಿಯೊಬ್ಬರು ಘಟನೆಯನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: ವಧು ಮದುವೆಗೂ ಮುನ್ನ 30 ದಿನಗಳವರೆಗೆ ಒಂದು ಗಂಟೆ ಅಳಬೇಕು, ಇದು ಇಲ್ಲಿನ ವಿಚಿತ್ರ ಪದ್ಧತಿ

ಈ ಕುರಿತು ಪೊಲೀಸರು ಕ್ರಮ ಕೈಗೊಂಡಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಕಾನೂನು ಕ್ರಮದ ವರದಿಗಳಿಲ್ಲ ಮತ್ತು ವ್ಯಕ್ತಿಯನ್ನು ಇನ್ನೂ ಗುರುತಿಸಲಾಗಿಲ್ಲ. ಪೊಲೀಸರು ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us