Kerala: ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸಿ, ತುಂಬಿ ಹರಿಯುತ್ತಿದ್ದ ಹಳ್ಳದೊಳಗೆ ಮುಳುಗಿದ ಕಾರು

|

Updated on: May 25, 2024 | 3:31 PM

ಭಾರೀ ಮಳೆಯಿಂದಾಗಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ನೀರಿನಿಂದ ಆವೃತವಾಗಿತ್ತು. ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿಲ್ಲದ ಕಾರಣ, ಅವರು ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್ ಮಾಡಿದ್ದಾರೆ. ಪರಿಣಾಮ ಕಾರು ನೇರವಾಗಿ ಹಳ್ಳದೊಳಗೆ ಬಿದ್ದು ಮುಳುಗಿದೆ.

Kerala: ಗೂಗಲ್ ಮ್ಯಾಪ್  ನಂಬಿ ಕಾರು ಓಡಿಸಿ, ತುಂಬಿ ಹರಿಯುತ್ತಿದ್ದ ಹಳ್ಳದೊಳಗೆ ಮುಳುಗಿದ ಕಾರು
ಸಾಂದರ್ಭಿಕ ಚಿತ್ರ
Image Credit source: Pinterest
Follow us on

ಕೊಟ್ಟಾಯಂ, ಕೇರಳ: ಹೈದರಾಬಾದ್‌ನ ಪ್ರವಾಸಿಗರ ತಂಡವೊಂದು ಕೇರಳಕ್ಕೆ ಪ್ರವಾಸಕ್ಕೆಂದು ಕಾರಿನಲ್ಲಿ ಬಂದು, ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್ ಮಾಡಿ, ಕಾರನ್ನು ಸೀದಾ ಹಳ್ಳದೊಳಗೆ ಇಳಿಸಿದ್ದಾರೆ. ಪರಿಣಾಮ ಕಾರು ಸಂಪೂರ್ಣವಾಗಿ ಮುಳುಗಿ ಹೋಗಿದ್ದು, ಸ್ಥಳೀಯ ನಿವಾಸಿಗಳ ಸಹಾಯದಿಂದ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ತಡರಾತ್ರಿ ಮಹಿಳೆ ಸೇರಿದಂತೆ ನಾಲ್ವರ ಗುಂಪು ಅಲಪ್ಪುಳ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಪ್ರಯಾಣಿಸುತ್ತಿದ್ದ ವೇಳೆ ರಸ್ತೆಯು ಭಾರೀ ಮಳೆಯಿಂದಾಗಿ ಹೊಳೆಯಿಂದ ತುಂಬಿ ಹರಿಯುವ ನೀರಿನಿಂದ ಆವೃತವಾಗಿತ್ತು ಮತ್ತು ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿಲ್ಲದ ಕಾರಣ, ಅವರು ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್ ಮಾಡಿದ್ದಾರೆ. ಪರಿಣಾಮ ಕಾರು ನೇರವಾಗಿ ತುಂಬಿ ಹರಿಯುತ್ತಿದ್ದ ಹಳ್ಳದೊಳಗೆ ಮುಳುಗಿದೆ.

ಮುಳಗುತ್ತಿದ್ದ ಪ್ರವಾಸಿಗರ ಕೂಗು ಕೇಳುತ್ತಿದ್ದಂತೆ ಸ್ಥಳೀಯರು ಧಾವಿಸಿ ರಕ್ಷಣೆ ಮಾಡಿದ್ದಾರೆ. ಕಾರು ಸಂಪೂರ್ಣವಾಗಿ ಮುಳುಗಿದ್ದು “ವಾಹನವನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಕಡುತುರುತಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಕೇರಳದಲ್ಲಿ ಇಂತಹ ಘಟನೆ ವರದಿಯಾಗುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಇಬ್ಬರು ವೈದ್ಯರು ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್​ ಮಾಡಿದ ಪರಿಣಾಮ ಕಾರು ಸಮೇತ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದರು.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:29 pm, Sat, 25 May 24