AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೂವರ ಪಾಲಿಗೆ ಯಮನಾದ ಕಾರು, ಲಾರಿಗೆ ಡಿಕ್ಕಿ ಹೊಡೆದ ಕಾರು, ಮೂರು ಸಾವು

ದಿನನಿತ್ಯ ಅಪಘಾತಗಳ ಸುದ್ದಿ ಗಳನ್ನು ಕೇಳುತ್ತೀರಿ. ಕೆಲವು ಭಯಾನಕ ಅಪಘಾತಗಳ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುತ್ತದೆ. ಆದರೆ ಇದೀಗ ಅತಿ ವೇಗವಾಗಿ ಬರುತ್ತಿದ್ದ ಕಾರೊಂದು, ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ರಣಭೀಕರ ಅಪಘಾತವೊಂದು ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಈ ಭಯಾನಕ ಅಪಘಾತದ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Video: ಮೂವರ ಪಾಲಿಗೆ ಯಮನಾದ ಕಾರು, ಲಾರಿಗೆ ಡಿಕ್ಕಿ ಹೊಡೆದ ಕಾರು, ಮೂರು ಸಾವು
Trending News In Kannada Accident
ಸಾಯಿನಂದಾ
| Edited By: |

Updated on:May 21, 2025 | 3:23 PM

Share

ಹೈದರಾಬಾದ್, ಮೇ 21 : ನಿಧಾನವೇ ಪ್ರಧಾನ, ಅತಿ ವೇಗದಲ್ಲಿ ವಾಹನಗಳನ್ನು ಚಲಾಯಿಸಬೇಡಿ ಎಂದು ಎಷ್ಟೇ ಹೇಳಿದ್ರೂ ಕೂಡ ಹೆಚ್ಚಿನವರು ಈ ಸಂಚಾರ ನಿಯಮ (traffic rules) ಗಳನ್ನು ಗಾಳಿಗೆ ತೂರಿ ವೇಗವಾಗಿ ವಾಹನ ಚಲಾಯಿಸುತ್ತಾರೆ. ಅತೀ ವೇಗದಿಂದ ವಾಹನಗಳನ್ನು ಓಡಿಸಿದ ಪರಿಣಾಮವಾಗಿ ಅದೆಷ್ಟೋ ರಣ ಭೀಕರ ಅಪಘಾತ (accident) ಗಳು ಸಂಭವಿಸಿವೆ. ಇಂತಹ ಸಾಕಷ್ಟು ಅಪಘಾತಗಳ ಬಗ್ಗೆ ದಿನನಿತ್ಯ ಸುದ್ದಿಗಳನ್ನು ಕೇಳುತ್ತೀರಿ. ಆದರೆ ಇದೀಗ ಹೈದರಾಬಾದ್ (Hyderabad) ನಗರ ವ್ಯಾಪ್ತಿಯ ಹಯಾತ್‌ನಗರ ಕಂಟ್ಲೂರಿ (Hayatnagar Kantloor) ನಲ್ಲಿ ಭಯಾನಕ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರೊಂದು, ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದ ಭಯಾನಕ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹೌದು, ಯಮವೇಗವಾಗಿ ಬರುತ್ತಿದ್ದ ಕಾರೊಂದು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ವ್ಯಕ್ತಿಯ ಸ್ಥಿತಿಯೂ ಗಂಭೀರವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸಂಬಂಧಿಕರ ಮನೆಯ ಸಮಾರಂಭದಲ್ಲಿ ಭಾಗಿಯಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ

ಇದನ್ನೂ ಓದಿ
Image
ಟೈಮ್‌ ಟ್ರಾವೆಲಿಂಗ್‌ ಮಾಡಿ ಮಹಾತ್ಮರನ್ನು ಭೇಟಿಯಾದ ಮೋದಿಜಿ-ಯೋಗಿಜಿ
Image
ಫ್ರೀಯಾಗಿ ಕೊಟ್ಟ ಚಟ್ನಿಯ ಹೆಸ್ರನ್ನೂ ಬಿಲ್‌ನಲ್ಲಿ ನಮೂದಿಸಿದ ಹೋಟೆಲ್
Image
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
Image
ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರುತ್ತಾ?

ವೈರಲ್ ವಿಡಿಯೋ ಇಲ್ಲಿದೆ ನೋಡಿ

@itz sagarreddy ಹೆಸರಿನ ಖಾತೆಯಲ್ಲಿ ಈ ಭಯಾನಕ ಅಪಘಾತದ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಡಿಕ್ಕಿ ಹೊಡೆಯುವ ಮೊದಲು ಕಾರು ಅತಿ ವೇಗದಲ್ಲಿ ಬರುತ್ತಿರುವುದನ್ನು ನೋಡಬಹುದು. ಢಿಕ್ಕಿ ಹೊಡೆದ ರಭಸಕ್ಕೆ ಕಾರು ತೀವ್ರವಾಗಿ ಹಾನಿಗೊಳಗಾಗಿದೆ. ಈ ವಾಹನದೊಳಗೆ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ : ವಿಡಿಯೋ ವೈರಲ್: ಈ ಮನೆಯಲ್ಲಿ ಹಾವುಗಳದ್ದೇ ರಾಶಿ, ಮೈ ಜುಮ್ ಎನಿಸುವ ದೃಶ್ಯ

ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ಒಂದೇ ಗ್ರಾಮದವರು ಎನ್ನಲಾಗಿದ್ದು, ಮೃತಪಟ್ಟವರನ್ನು ಚಂದ್ರಸೇನ ರೆಡ್ಡಿ, ತ್ರಿನಾದ್ ರೆಡ್ಡಿ ಮತ್ತು ವರ್ಷಿತ್ ರೆಡ್ಡಿ ಎಂದು ಗುರುತಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಅಪಘಾತಕ್ಕೆ ಅತಿ ವೇಗವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧ ಪಟ್ಟಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Wed, 21 May 25

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು