Viral: ಗರ್ಲ್ಸ್ ಹಾಸ್ಟೆಲ್ ಬಾತ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಕೆ ಆರೋಪ; 300ಕ್ಕೂ ವಿಡಿಯೋ ಇರುವ ಶಂಕೆ
ವರ್ಷಗಳ ಹಿಂದೆ ಉಡುಪಿಯ ಕಾಲೇಜೊಂದರ ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದಂತಹ ಘಟನೆಯೊಂದು ಭಾರೀ ವಿವಾದವನ್ನು ಸೃಷ್ಟಿಸಿತ್ತು. ಇದೀಗ ಇಲ್ಲೊಂದು ಗರ್ಲ್ಸ್ ಹಾಸ್ಟೆಲ್ ಬಾತ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಲಾಗಿದೆ ಎಂಬ ಆರೋಪವೊಂದು ಕೇಳಿ ಬಂದಿದೆ. ಹಾಸ್ಟೆಲ್ ವಾಶ್‌ರೂಮ್‌ನಲ್ಲಿ ಅಡುಗೆ ಸಿಬ್ಬಂದಿ ಹಿಡನ್ ಕ್ಯಾಮೆರಾ ಇಟ್ಟು ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಇದೀಗ ಪ್ರತಿಭಟನೆಗೆ ಇಳಿದಿದ್ದಾರೆ.
ಟಾಯ್ಲೆಟ್, ವಾಶ್‌ರೂಮ್‌ಗಳಲ್ಲಿ ಹಿಡನ್ ಕ್ಯಾಮೆರಾ, ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದಂತಹ ಪ್ರಕರಣಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇತ್ತೀಚಿಗಷ್ಟೇ ಆಂಧ್ರಪ್ರದೇಶದ ಇಂಜಿನಿಯರ್ ಕಾಲೇಜಿನಲ್ಲಿ ಮಹಿಳಾ ಹಾಸ್ಟೆಲ್ ವಾಶ್ ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆಯಾದ ಆತಂಕಕಾರಿ ಘಟನೆ ನಡೆದಿತ್ತು. ಇದೀಗ ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಗರ್ಲ್ಸ್ ಹಾಸ್ಟೆಲ್ ಬಾತ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಲಾಗಿದೆ ಎಂಬ ಆರೋಪವೊಂದು ಕೇಳಿ ಬಂದಿದೆ. ಹಾಸ್ಟೆಲ್ ವಾಶ್‌ರೂಮ್‌ನಲ್ಲಿ ಅಡುಗೆ ಸಿಬ್ಬಂದಿ ಹಿಡನ್ ಕ್ಯಾಮೆರಾ ಇಟ್ಟು ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಇದೀಗ ಪ್ರತಿಭಟನೆಗೆ ಇಳಿದಿದ್ದಾರೆ.
ಈ ಘಟನೆ ತೆಲಂಗಾಣದ ಮೇಡ್ಚಲ್‌ನ ಸಿಎಂಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದು, ಹಾಸ್ಟೆಲ್ ಬಾತ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಕ್ಯಾಮೆರಾ ಇಟ್ಟಿದ್ದಾರೆ ಎಂದು ಆರೋಪಿಸಿ ಇಲ್ಲಿನ ವಿದ್ಯಾರ್ಥಿನಿಯರು ಪ್ರತಿಭಟನೆಗೆ ಇಳಿದಿದ್ದಾರೆ. ಹಾಸ್ಟೆಲ್ ಬಾತ್‌ರೂಮ್‌ನಲ್ಲಿ ಅಡುಗೆ ಸಿಬ್ಬಂದಿಯೇ ಹಿಡನ್ ಕ್ಯಾಮೆರಾ ಇಟ್ಟಿರಬಹುದೆಂದು ಹಲವರು ಆರೋಪಿಸಿದ್ದಾರೆ. ತೀವ್ರ ಮಟ್ಟದ ಪ್ರತಿಭಟನೆ ನಡೆದಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಮೇಡ್ಚಿಲ್ ಮೊಲೀಸರು ಕೂಡಲೇ ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿನಿಯರಿಗೆ ಭರವಸೆ ನೀಡಿದ್ದಾರೆ.
Privacy Breach Triggers Protest at CMR College
Late Wednesday night, female students of CMR Engineering College in Medchal protested over allegations that hostel cooking staff secretly recorded videos in bathrooms. Chanting “We want justice,” they demanded immediate action. pic.twitter.com/v1esnIKLvF
— Informed Alerts (@InformedAlerts) January 2, 2025
31ರಂದು ಹೊಸ ವರ್ಷದ ಸಂಭ್ರಮದ ಅಂಗವಾಗಿ ಹಾಸ್ಟೆಲ್‌ನಲ್ಲಿ ಡಿಜೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ನಂತರ, ಎಲ್ಲಾ ಹುಡುಗಿಯರು ಹಾಸ್ಟೆಲ್‌ಗೆ ಹೋದಾಗ, ಅಲ್ಲಿ ಕ್ಯಾಮೆರಾ ಇರುವುದನ್ನು ಅವರು ಪತ್ತೆ ಹಚ್ಚಿದ್ದಾರೆ. ಅಲ್ಲದೆ ಬಾತ್ ರೂಂನ ವೆಂಟಿಲೇಟರ್‌ನಲ್ಲಿ ಕೈಗಳ ಗುರುತು, ಕನ್ನಡಿಯ ಮೇಲೆ ಹೊರಗಿನಿಂದ ಕ್ಯಾಮೆರಾ ಇಟ್ಟಿರುವ ಗುರುತುಗಳು ಪತ್ತೆಯಾಗಿವೆ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಜೊತೆಗೆ ಕಳೆದ ಮೂರು ತಿಂಗಳಿನಿಂದ ಸುಮಾರು 300 ರೆಕಾರ್ಡಿಂಗ್‌ಗಳನ್ನು ಸೆರೆ ಹಿಡಿಯಲಾಗಿದೆ, ಇದೆಲ್ಲಾ ಅಡುಗೆ ಸಿಬ್ಬಂದಿಯೇ ಮಾಡಿರಬೇಕು ಎಂಬ ಸಂಶಯವಿದೆ ಎಂದು ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದಾರೆ. .
ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ; ನಡುರಾತ್ರಿ ಸ್ಕೂಟಿಯಲ್ಲಿ ಕುಳಿತು ನಾಯಿಯನ್ನು ಎಳೆದೊಯ್ದ ವ್ಯಕ್ತಿ
ಸದ್ಯ ವಿದ್ಯಾರ್ಥಿನಿಯರ ದೂರು ಸ್ವೀಕರಿಸಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅವರಿಂದ 12 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಾಳೆಯೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸುವುದಾಗಿ ವಿದ್ಯಾರ್ಥಿ ಸಂಘಟನೆಗಳು ಎಚ್ಚರಿಕೆ ನೀಡಿವೆ.
ವೈರಲ್ ಸುಸ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ