Viral: ಭಾರತ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಯಲ್ಲಿ ರಸ್ತೆಗಿಳಿದು ಸಂಭ್ರಮಾಚರಣೆ ಮಾಡಿದ ಅಭಿಮಾನಿಗಳ ಮೇಲೆ ಲಾಠಿ ಬೀಸಿದ ಪೊಲೀಸರು

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ಸ್‌ ಟ್ರೋಫಿ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಟ್ರೋಫಿ ಗೆದ್ದ ಖುಷಿಗೆ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ಇಲ್ಲೊಂದು ಕಡೆ ರಸ್ತೆಗಿಳಿದು ಭಾರತ ತಂಡದ ಗೆಲುವನ್ನು ಸಂಭ್ರಮಿಸಿದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಈ ದೃಶ್ಯ ಇದೀಗ ವೈರಲ್‌ ಆಗಿದ್ದು, ಪೊಲೀಸರ ವರ್ತನೆಗೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

Viral: ಭಾರತ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಯಲ್ಲಿ ರಸ್ತೆಗಿಳಿದು ಸಂಭ್ರಮಾಚರಣೆ ಮಾಡಿದ ಅಭಿಮಾನಿಗಳ ಮೇಲೆ ಲಾಠಿ ಬೀಸಿದ ಪೊಲೀಸರು
ವೈರಲ್​ ವಿಡಿಯೋ
Edited By:

Updated on: Mar 10, 2025 | 10:42 AM

ಹೈದರಾಬಾದ್‌, ಮಾ.10: ದುಬೈನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡದ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಭಾರತ ತಂಡ ಚಾಂಪಿಯನ್‌ (India Champions) ಆಗಿ ಹೊರ ಹೊಮ್ಮಿದೆ. ಭಾರತ ತಂಡವು ನ್ಯೂಜಿಲೆಂಡ್‌ ತಂಡವನ್ನು ನಾಲ್ಕು 4 ವಿಕೆಟ್‌ಗಳಿಂದ ಸೋಲಿಸಿ ಚಾಂಪಿಯನ್ಸ್‌ ಟ್ರೋಫಿ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಟೀಂ ಇಂಡಿಯಾ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಗೆ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ಕ್ರಿಕೆಟ್‌ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಅದೇ ರೀತಿ ಹೈದರಾಬಾದ್‌ ಕ್ರಿಕೆಟ್‌ ಅಭಿಮಾನಿಗಳು ರಸ್ತೆಗಿಳಿದು ಗೆಲುವನ್ನು ಸಂಭ್ರಮಿಸಿದ್ದು, ಸಂಭ್ರಮಾಚರಣೆಯಲ್ಲಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಪೊಲೀಸರ ವರ್ತನೆಗೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

ಈ ಘಟನೆ ಹೈದರಾಬಾದ್‌ನ ದಿಲ್‌ಸುಖ್‌ ನಗರದಲ್ಲಿ ನಡೆದಿದ್ದು, ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಯಲ್ಲಿ ರಸ್ತೆಗಿಳಿದು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.

ಇದನ್ನೂ ಓದಿ
ಈಜುಕೊಳದಲ್ಲಿ ಪಲ್ಟಿ ಹೊಡೆದ 84 ರ ಹರೆಯದ ಅಜ್ಜಿ
ಕುದುರೆಗೆ ಬಲವಂತವಾಗಿ ಸಿಗರೇಟ್ ಸೇದಿಸಿದ ಯುವಕರು
ಚರಂಡಿಯಲ್ಲಿ ಸಿಲುಕಿದ್ದ ಹಸುವನ್ನು ರಕ್ಷಿಸಿದ ಹೃದಯವಂತ
ಲೈಫ್​​ನ್ನು ಬ್ಯಾಚುರಲ್ ಇದ್ದಾಗಲೇ ಎಂಜಾಯ್ ಮಾಡಿ ಎಂದ ಪೊಲೀಸ್

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವರದಿಗಳ ಪ್ರಕಾರ ಅಭಿಮಾನಿಗಳು ರಸ್ತೆಗಿಳಿದು ಪಟಾಕಿ ಸಿಡಿಸಿ, ಡ್ಯಾನ್ಸ್‌ ಮಾಡುವ ಮೂಲಕ ಟೀಂ ಇಂಡಿಯಾದ ಗೆಲುವನ್ನು ಸಂಭ್ರಮಿಸಿದ್ದು, ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕಾರಣ ಸಂಚಾರ ದಟ್ಟಣೆ ಉಂಟಾಗಿದೆ. ಈ ಸಂದರ್ಭದಲ್ಲಿ ಇದನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ರಸ್ತೆಗಿಳಿದ ಅಭಿಮಾನಿಗಳ ಮೇಲೆ ಹೈದರಾಬಾದ್‌ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ಈ ಕುರಿತ ವಿಡಿಯೋವನ್ನು TeluguScribe ಹೆಸರಿನ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಟೀಂ ಇಂಡಿಯಾದ ಗೆಲುವನ್ನು ಸಂಭ್ರಮಿಸುವ ಸಲುವಾಗಿ ರಸ್ತೆಗಿಳಿದ ಕ್ರಿಕೆಟ್‌ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಒದ್ದೋಡಿಸುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಚಿಕನ್‌ ಮೂಳೆ ಗಂಟಲಲ್ಲಿ ಸಿಲುಕಿ ಪರದಾಡಿದ ಮಹಿಳೆ; ನಾನ್‌ವೆಜ್‌ ಪ್ರಿಯರೇ ಬಿರಿಯಾನಿ ತಿನ್ನೋ ಮುನ್ನ ಜೋಪಾನ

ಮಾರ್ಚ್‌ 09 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.2 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಗೆಲುವನ್ನು ಸಂಭ್ರಮಿಸುವುದರಲ್ಲಿ ತಪ್ಪೇನಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಅಲ್ಲ ಅವರೇನು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ್ದೇ? ಪೊಲೀಸರ ವರ್ತನೆ ಸರಿಯಿಲ್ಲʼ ಎಂದು ಕಿಡಿ ಕಾರಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಮ್ಮ ಆಚರಣೆ, ಸಂಭ್ರಮ ಇತರರಿಗೆ ತೊಂದರೆಯಾಗದಂತೆ ಇರಲಿʼ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ