Video: ಹೆತ್ತವರನ್ನು ತಾನು ಕೆಲಸ ಮಾಡುವ ಮೈಕ್ರೋಸಾಫ್ಟ್‌ ಆಫೀಸ್‌ ತೋರಿಸಲು ಕರೆತಂದ ಮಗಳು

ಮಕ್ಕಳಿಗೆ ತಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಕೊಳ್ಳಬೇಕು, ಊರು ಸುತ್ತಿಸಬೇಕು ಹೀಗೆ ಸಾಕಷ್ಟು ಆಸೆಯಿರುತ್ತದೆ. ಅಂತಹ ಆಸೆ ನನಸು ಆಗುವ ಕ್ಷಣ ಬಂದರೆ ಅದನ್ನು ಪದಗಳಲ್ಲಿ ವಿವರಿಸಲು ಅಸಾಧ್ಯ. ಮೈಕ್ರೋಸಾಫ್ಟ್ ಉದ್ಯೋಗಿಯೊಬ್ಬರು, ತಮ್ಮ ಪೋಷಕರನ್ನು ತಾನು ಕೆಲಸ ಮಾಡುವ ಕಚೇರಿಯ ಕ್ಯಾಂಪಸ್‌ಗೆ ಕರೆದುಕೊಂಡು ಹೋಗಿರುವ ಕ್ಷಣದ ವಿಡಿಯೋ ವೈರಲ್ ಆಗಿದೆ. ಈ ಹೃದಯ ಸ್ಪರ್ಶಿ ಕ್ಷಣದ ವಿಡಿಯೋ ಕಂಡು ನೆಟ್ಟಿಗರ ಕಣ್ಣು ಒದ್ದೆ ಆಗಿದೆ.

Video: ಹೆತ್ತವರನ್ನು ತಾನು ಕೆಲಸ ಮಾಡುವ ಮೈಕ್ರೋಸಾಫ್ಟ್‌ ಆಫೀಸ್‌ ತೋರಿಸಲು ಕರೆತಂದ ಮಗಳು
ವೈರಲ್‌ ವಿಡಿಯೋ
Image Credit source: Instagram

Updated on: Mar 04, 2026 | 12:03 PM

ತಂದೆ ತಾಯಿಗೆ ತಮ್ಮ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ (job) ಪಡೆದು ಜೀವನದಲ್ಲಿ ಸೆಟಲ್ ಆಗಬೇಕೆನ್ನುವ ಆಸೆಯಿರುತ್ತದೆ. ಅದರಂತೆ ಮಕ್ಕಳು ಬದುಕು ಕಟ್ಟಿಕೊಂಡರೆ ಹೆತ್ತವರಿಗೆ ಅದಕ್ಕಿಂತ ಖುಷಿ ಮತ್ತೊಂದಿಲ್ಲ. ಭಾವನಾತ್ಮಕ ಕ್ಷಣಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಮೈಕ್ರೋಸಾಫ್ಟ್ ಉದ್ಯೋಗಿಯೊಬ್ಬರು ಪೋಷಕರನ್ನು ಹೈದರಾಬಾದ್‌ನ (Hyderabad) ತಮ್ಮ ಆಫೀಸಿಗೆ ಕರೆದುಕೊಂಡು ಹೋಗಿದ್ದಾರೆ. ಹೆತ್ತವರು ಹೆಮ್ಮೆ ಪಡುವಂತೆ ಮಾಡಿದ ಮಗಳ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತನೇಯಾ ಸೋನಿ (taneyasoni_vlogs) ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋಗೆ ಕನಸು ನನಸಾದ ಕ್ಷಣ ಎಂದು ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೋದಲ್ಲಿ ತಮ್ಮ ಪೋಷಕರು ತಾನು ಕೆಲಸ ಮಾಡುವ ಮೈಕ್ರೋಸಾಫ್ಟ್ ಕಚೇರಿ ಕ್ಯಾಂಪಸ್‌ಗೆ ಭೇಟಿ ನೀಡುತ್ತಿರುವುದನ್ನು ಕಾಣಬಹುದು. ದಂಪತಿಗಳು ಕಚೇರಿಯ ವಿವಿಧ ವಿಭಾಗಗಳನ್ನು ನೋಡುತ್ತಿದ್ದಾಳೆ. ಇತ್ತ ಮಗಳು ತನ್ನ ತಂದೆತಾಯಿಗೆ ಮಾರ್ಗದರ್ಶನ ಮಾಡುತ್ತಿದ್ದು, ಹೆಮ್ಮೆಯಿಂದ ತನ್ನ ವೃತ್ತಿಪರ ಜಗತ್ತಿಗೆ ಪರಿಚಯಿಸುತ್ತಿರುವುದನ್ನು ಕ್ಲಿಪ್‌ನಲ್ಲಿ ಸೆರೆ ಹಿಡಿಯಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಮ್ಮನಿಗೆ ಭಯ, ಆದ್ರೆ ಅದು ನನ್ನ ಕನಸು: ಕೊನೆಗೂ ತಾಯಿಯನ್ನು ಆಕಾಶದಲ್ಲಿ ಹಾರಾಡಿಸಿದ ಮಗ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಹೆಮ್ಮೆ ಹಾಗೂ ಸಾಧನೆಯ ಕ್ಷಣ ಎಂದು ಹೇಳಿದ್ದಾರೆ. ಇನ್ನೊಬ್ಬರು, ಪ್ರಾಮಾಣಿಕವಾಗಿ ಹೇಳಬೇಕೆಂದರೆ ಪೋಷಕರು ಮಕ್ಕಳ ಇಂತಹ ಕೆಲಸದಿಂದ ಹೆಚ್ಚು ಸಂತೋಷಪಡುತ್ತಾರೆ. ಈ ಕ್ಷಣವನ್ನು ಎಂದಿಗೂ ಮರೆಯುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಇಂತಹ ಮಗಳನ್ನು ಪಡೆದ ಕ್ಷಣ ನೀವೇ ಧನ್ಯ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 12:02 pm, Wed, 4 March 26

Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us