ರಸ್ತೆ ಬದಿ ಮೊಮೊಸ್​ ತಿಂದ ಮಹಿಳೆ ಸಾವು, 20 ಜನ ಅಸ್ವಸ್ಥ

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿ 'ದೆಹಲಿ ಮೊಮೊಸ್' ಎಂಬ ಸ್ಟಾಲ್‌ನಲ್ಲಿ ಮಾರಾಟವಾದ ಮೊಮೊಸ್ ತಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇನ್ನೂ 20 ಮಂದಿ ಅಸ್ವಸ್ಥರಾಗಿರುವುದಾಗಿ ವರದಿಯಾಗಿದೆ. GHMC ತನಿಖೆ ಆರಂಭಿಸಿದ್ದು, ಸ್ಟಾಲ್ ಮಾನ್ಯ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ. ಸದ್ಯ ತನಿಖೆ ನಡೆಯುತ್ತಿದೆ.

ರಸ್ತೆ ಬದಿ ಮೊಮೊಸ್​ ತಿಂದ ಮಹಿಳೆ ಸಾವು, 20 ಜನ ಅಸ್ವಸ್ಥ
ಮೊಮೊಸ್​ ತಿಂದ ಮಹಿಳೆ ಸಾವುImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Oct 29, 2024 | 10:25 AM

ಹೈದರಾಬಾದ್: ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರೂ ಮೊಮೊಸ್ ಪ್ರೀಯರಾಗಿದ್ದು ಅದರ ರುಚಿಯನ್ನು ಇಷ್ಟಪಡುತ್ತಾರೆ. ಇದೀಗ ಬಾಯಿ ಚಪ್ಪರಿಸಿ ಕೊಂಡು ತಿನ್ನುವ ಮೊಮೊಸ್ ಮಹಿಳೆಯ ಜೀವವನ್ನೇ ತೆಗೆದಿದೆ. ಇದಲ್ಲದೇ ಮೊಮೊಸ್​ ಸವಿದ 20 ಅಧಿಕ ಜನರು ಆಸ್ವಸ್ಥಗೊಂಡಿದ್ದಾರೆ. ಈ ಘಟನೆ ಹೈದರಾಬಾದ್‌ನ ಬಂಜಾರ ಹಿಲ್ಸ್ ಬಳಿ ಫುಡ್ ಸ್ಟಾಲ್‌ನಲ್ಲಿ ನಡೆದಿದೆ.

ಬಂಜಾರಾ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ತನಿಖೆ ನಡೆಯುತ್ತಿದೆ. “ಮೃತ ಮಹಿಳೆ ಮತ್ತು ಆಸ್ವಸ್ಥಗೊಂಡವರು ‘ದೆಹಲಿ ಮೊಮೊಸ್’ ಹೆಸರಿನ ಫುಡ್ ಸ್ಟಾಲ್‌ನಿಂದ ಮೊಮೊಸ್ ಸೇವಿಸಿದ್ದಾರೆ. ಚಿಂತಲ್ ಬಸ್ತಿಯಲ್ಲಿರುವ ಈ ಸ್ಟಾಲ್ ಅನ್ನು ಮೂರು ತಿಂಗಳ ಹಿಂದೆ ಬಿಹಾರದಿಂದ ಬಂದ ಆರು ಸೇರಿ ಪ್ರಾರಂಭಿಸಿದ್ದರು. ಸ್ಟಾಲ್ ನಡೆಸುತ್ತಿದ್ದವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಮೊಮೊಸ್​ ತಿಂದ ಒಂದು ಗಂಟೆಯ ನಂತರ ಮಹಿಳೆ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: 24 ಗಂಟೆಗಳಲ್ಲಿ 10 ಸಾವಿರ ದೋಸೆ ತಯಾರಿಸಿ ದಾಖಲೆ ಬರೆದ ಬಾಣಸಿಗ ವಿಷ್ಣು ಮನೋಹರ್

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC) ಮಾರಾಟಗಾರರ ಕಾರ್ಯಾಚರಣೆಗಳ ಬಗ್ಗೆ ತನಿಖೆ ಆರಂಭಿಸಿದ್ದು, ಈ ವೇಳೆ ಮಾನ್ಯ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ತಿಳಿದುಬಂದಿದೆ. ಅಲ್ಲಿಂದ ಆಹಾರದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವ್ಯಾಪಾರ ಚಟುವಟಿಕೆಗಳನ್ನು ನಿಲ್ಲಿಸಲು ಮಾರಾಟಗಾರರಿಗೆ ನೋಟೀಸು ನೀಡಲಾಗಿದೆ. ಬೀದಿ ಬದಿ ಆಹಾರವನ್ನು ಸೇವಿಸುವಾಗ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ