AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಂಗೆ 35 ವರ್ಷ, ಮದ್ವೆಯಾಗಲು ವರ ಬೇಕು; ಮದುವೆ ಪ್ರಸ್ತಾಪ ಮುಂದಿಟ್ಟ ಮಹಿಳೆ

ಇತ್ತೀಚೆಗಿನ ದಿನಗಳಲ್ಲಿ ಯುವಕ ಯುವತಿಯರು ವೈಯುಕ್ತಿಕ ಜೀವನದ ಬಗ್ಗೆ ಯೋಚನೆ ಮಾಡದೇ ಲೈಫ್ ಕೆರಿಯರ್ ಹಿಂದೆ ಬೀಳುತ್ತಿದ್ದಾರೆ. ಹೀಗಾಗಿ ವಯಸ್ಸು ಏರಿದ ಬಳಿಕ ಮದ್ವೆ ಬಗ್ಗೆ ಯೋಚನೆ ಮಾಡ್ತಾರೆ. ಇಲ್ಲೊಬ್ಬ ಮಹಿಳೆ ನಂಗೆ 35 ವರ್ಷ, ಮದ್ವೆಯಾಗಲು ಸೂಕ್ತ ವರ ಬೇಕೆಂದು ಹೇಳಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ನಂಗೆ 35 ವರ್ಷ, ಮದ್ವೆಯಾಗಲು ವರ ಬೇಕು; ಮದುವೆ ಪ್ರಸ್ತಾಪ ಮುಂದಿಟ್ಟ ಮಹಿಳೆ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on:Sep 28, 2026 | 11:34 AM

Share

ಬದುಕಿನ ಆಯ್ಕೆಗಳು ಬದಲಾಗಿವೆ. ಹೀಗಾಗಿ ಓದು ಮುಗಿಯುತ್ತಿದ್ದಂತೆ ಉದ್ಯೋಗ, ಕೆರಿಯರ್ ಬಗ್ಗೆ ಹೆಚ್ಚು ಆಲೋಚಿಸುತ್ತಾರೆ. ಮದುವೆ ಜೀವನದ (marriage life) ಬಗ್ಗೆ ಅಷ್ಟಾಗಿ ಆಸಕ್ತಿ ತೋರುವುದಿಲ್ಲ. ಹೀಗಾಗಿ ವಯಸ್ಸು ಏರಿದಾಗ ಸಂಗಾತಿ ಹುಡುಕಾಟದಲ್ಲಿ ತೊಡಗಿಕೊಳ್ತಾರೆ. ಇಲ್ಲೊಬ್ಬ ಮಹಿಳೆಯದ್ದು ಅದೇ ಕಥೆ. ಅಹಮದಾಬಾದ್‌ನ ಹಿಮಾನಿ ಎಂಬ ಮಹಿಳೆ ಸೂಕ್ತ ವರನ ಹುಡುಕಾಟದಲ್ಲಿದ್ದಾರೆ. ತನ್ನ ವಯಸ್ಸು ಹಾಗೂ ಜೀವನ ಸಂಗಾತಿಯ ಬಗ್ಗೆ ತನಗಿರುವ ನಿರೀಕ್ಷೆಗಳ ಕುರಿತು ಹೇಳಿರುವ ಮಹಿಳೆ ಈ ವಿಡಿಯೋ ಚರ್ಚೆಗೆ ಕಾರಣವಾಗಿದೆ.

ಮದುವೆ ಪ್ರಸ್ತಾಪ ಮುಂದಿಟ್ಟ ಮಹಿಳೆ

ಆಶೀಶ್‌ ವಿಮಲ್‌ ಬಾಜಪೇಯಿ (Ashish Vimal Bajpai) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ನನಗೆ ಈಗ 35 ವರ್ಷ. ಮದುವೆಯಾಗಲು ಸೂಕ್ತವಾದ ಹುಡುಗ ಬೇಕಾಗಿದ್ದಾನೆ. ನನ್ನ ಮನಸ್ಸಿಗೆ ಒಪ್ಪುವ ಹಾಗೂ ಆಸಕ್ತಿ ಇರುವವರು ನಿಮ್ಮ ಬಯೋಡೇಟಾವನ್ನು ನನಗೆ ನೇರವಾಗಿ ಡಿಎಂ ಮಾಡಿ ಎಂದಿದ್ದಾರೆ.

ಮದುವೆಯಾಗಲು ಸಂಪೂರ್ಣ ಸಿದ್ಧ

ಇಷ್ಟು ವರ್ಷಗಳ ಕಾಲ ನನ್ನ ವೃತ್ತಿಜೀವನದ ಬೆಳವಣಿಗೆ, ಆರ್ಥಿಕ ಸ್ವಾವಲಂಬನೆ ಹಾಗೂ ವೈಯಕ್ತಿಕ ಸ್ಥಿರತೆಗೆ ಬಗ್ಗೆ ಹೆಚ್ಚು ಗಮನ ಹರಿಸಿದೆ. ಹೀಗಾಗಿ ಮದುವೆಯ ನಿರ್ಧಾರ ತಡವಾಯ್ತು. ಈಗ ನಾನು ಮದುವೆಯಾಗಲು ಸಂಪೂರ್ಣ ಸಿದ್ಧಳಾಗಿದ್ದೇನೆ ಎಂದು ಹೇಳಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪ್ರೀತಿಸಿದವಳ ಕೈ ಹಿಡಿಯಲು ಮಗನಿಗೆ ಷರತ್ತು ಹಾಕಿದ ಪೋಷಕರು; ಬೇಸರ ವ್ಯಕ್ತಪಡಿಸಿದ ಯುವಕ

ಸೆಪ್ಟೆಂಬರ್ 27 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಮೂವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, 35 ವರ್ಷ ಹೆಚ್ಚೇನು ಅಲ್ಲ ಎನಿಸುತ್ತದೆ. ನಿಮ್ಗೆ ಸೂಕ್ತ ಸಂಗಾತಿ ಸಿಗುತ್ತಾರೆ, ಚಿಂತೆ ಬಿಡಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಮದುವೆ ಪ್ರಸ್ತಾಪವನ್ನು ಮಾಡಲು ಇದೊಂದು ಅಸಾಮಾನ್ಯ ವಿಧಾನ ಎಂದಿದ್ದಾರೆ. ಇನ್ನೊಬ್ಬರು, ಈ ರೀತಿ ವರ ಹುಡುಕಬಹುದು ಎಂದು ತಿಳಿದೇ ಇರಲಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 am, Mon, 28 September 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ