ಪ್ರತಿವರ್ಷ ಆಗಸ್ಟ್ 15 ರಂದು ದೇಶದಲ್ಲೆಡೆ ಬಹಳ ವಿಜೃಂಭನೆಯಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಶಾಲಾ ಕಾಲೇಜು ಸೇರಿದಂತೆ ಸರ್ಕಾರಿ ಹಾಗೂ ಸರ್ಕಾರೇತರ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ, ಪರಸ್ಪರ ಸಿಹಿ ಹಂಚುತ್ತಾ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ ಸನ್ನಿಹಿತವಾಗುತ್ತಿದ್ದು, ನೀವು ಮನೆಯಲ್ಲಿ ಸುಲಭವಾಗಿ ತ್ರಿವರ್ಣ ಧ್ವಜ ತಯಾರಿಸುವ ಸಿಂಪಲ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
ಸದ್ಯ ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಬಾಳೆ ಎಲೆಯನ್ನು ಬಳಸಿ ಸುಂದರವಾದ ತಿವರ್ಣ ಧ್ವಜವನ್ನು ತಯಾರಿಸಿರುವುದನ್ನು ಕಾಣಬಹುದು. ಬಾಳೆ ಎಲೆಯನ್ನು ಚಿಕ್ಕದಾಗಿ ಕತ್ತರಿಸಿ ಅದಕ್ಕೆ ಕೇಸರಿ, ಬಿಳಿ,ಹಸಿರು ಬಣ್ಣವನ್ನು ಹಚ್ಚಿ ಸುಂದರವಾಗಿ ತಯಾರಿಸಿರುವುದನ್ನು ಕಾಣಬಹುದು.
ಇದನ್ನೂ ಓದಿ: 78ನೇ ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ; ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್
@priyas.artwork ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆಗಸ್ಟ್ 07ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 6.3 ಮಿಲಿಯನ್ ಅಂದರೆ 60ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:19 pm, Sat, 10 August 24