AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಚೀನಾ vs ಭಾರತ ಸೇನೆ ನಡುವೆ ಹಗ್ಗ ಜಗ್ಗಾಟ; ರೋಚಕ ಪಂದ್ಯದಲ್ಲಿ ಚೀನಾ ಯೋಧರನ್ನು  ಸೋಲಿಸಿದ ಭಾರತೀಯ ಸೇನೆ

ವಿಶ್ವ ಸಂಸ್ಥೆಯ ಶಾಂತಿಪಾಲನಾ ಕಾರ್ಯಾಕ್ರಮದ ಭಾಗವಾಗಿ ಸುಡಾನ್‌ನಲ್ಲಿ ಆಯೋಜಿಸಲಾಗಿದ್ದ ʼಟಗ್‌-ಆಫ್-ವಾರ್‌ʼ ಸ್ಪರ್ಧೆಯಲ್ಲಿ ಚೀನಾ ಸೈನಿಕರನ್ನು ಭಾರತೀಯ ಸೇನೆಯ ಸೈನಿಕರು ಸೋಲಿಸಿದ್ದಾರೆ. ಉಭಯ ದೇಶಗಳ ಸೈನಿಕರ ಸೌಹಾರ್ದಯುತವಾದ ಈ ಸ್ಪರ್ಧೆಯ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. 

Viral: ಚೀನಾ vs ಭಾರತ ಸೇನೆ ನಡುವೆ ಹಗ್ಗ ಜಗ್ಗಾಟ; ರೋಚಕ ಪಂದ್ಯದಲ್ಲಿ ಚೀನಾ ಯೋಧರನ್ನು  ಸೋಲಿಸಿದ ಭಾರತೀಯ ಸೇನೆ
ಮಾಲಾಶ್ರೀ ಅಂಚನ್​
| Edited By: |

Updated on: May 31, 2024 | 5:18 PM

Share

ಏಷ್ಯಾ ಖಂಡದಲ್ಲಿ ಬಲಿಷ್ಠ ರಾಷ್ಟ್ರಗಳು ಎಂಬ ಹೆಸರು ಪಡೆದಿರುವ ಭಾರತ ಮತ್ತು ಚೀನಾ ಬದ್ಧ ವೈರಿಗಳು ಅಂತಾನೇ ಹೇಳಬಹುದು. 1962 ರಿಂದಲೂ  ಚೀನಾ-ಭಾರತ ಬಾರ್ಡರ್‌ ಫೈಟ್‌ ನಡೆಯುತ್ತಲೇ ಇವೆ. ಇದೀಗ ಈ ಎರಡು ರಾಷ್ಟ್ರಗಳಿಗೆ ಸಂಬಂಧಪಟ್ಟ ವಿಡಿಯೋವೊಂದು ವೈರಲ್‌ ಆಗಿದ್ದು, ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸೌಹಾರ್ದಯುತ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ನಮ್ಮ ಹೆಮ್ಮೆಯ ಭಾರತೀಯ ಸೇನೆ  ಚೀನಾ ಯೋಧರನ್ನು ಸೋಲಿಸಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಆಫ್ರಿಕಾದ ಸುಡಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಕ್ರಮದ ಭಾಗವಾಗಿ  ಆಯೋಜಿಸಲಾಗಿದ್ದ ಸೌಹಾರ್ದಯುತ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ  ಭಾರತೀಯ ಸೇನೆಯ ಯೋಧರು ಚೀನಾದ ಸೈನಿಕರನ್ನು ಸೋಲಿಸಿದ್ದಾರೆ. ಈ ಕುರಿತ ವಿಡಿಯೋವೊಂದನ್ನು  ಸುದ್ದಿ ಸಂಸ್ಥೆ ANI ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಯುಎನ್‌ ಶಾಂತಿಪಾಲನಾ ಕಾರ್ಯಕ್ರಮದ ಅಡಿಯಲ್ಲಿ ಸುಡಾನ್‌ನಲ್ಲಿ ಆಯೋಜಿಸಲಾದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಚೀನಾ ಸೈನಿಕರ ವಿರುದ್ಧದ ಪಂದ್ಯದಲ್ಲಿ ಭಾರತೀಯ ಯೋಧರು ರೋಚಕ ಜಯ ಸಾಧಿಸಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

49 ಸೆಕೆಂಡುಗಳ ಈ ವೈರಲ್‌ ವಿಡಿಯೋದಲ್ಲಿ ಭಾರತೀಯ ಸೈನ್ಯ ಮತ್ತು ಚೀನಾ ಸೈನ್ಯದ ನಡುವೆ ನಡೆದ ಸೌಹಾರ್ದಯುತ, ಮೋಜಿನ ಹಗ್ಗಜಗ್ಗಾಟ ಸ್ಪರ್ಧೆಯನ್ನು ಕಾಣಬಹುದು. ಈ ಪಂದ್ಯದಲ್ಲಿ ಭಾರತೀಯ ಯೋಧರು ರೋಚಕ ಜಯವನ್ನು ಸಾಧಿಸಿದ್ದಾರೆ.

ಇದನ್ನೂ ಓದಿ: ಬಾಡಿಗೆ ಗರ್ಲ್ ಫ್ರೆಂಡ್; ಈ ಹುಡುಗಿಯ ಕಡೆಯಿಂದ ಸಿಂಗಲ್ಸ್​​​​ ಹುಡುಗರಿಗೆ ಬಿಗ್​​ ಆಫರ್​

ಮೇ 28 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನೆಟ್ಟಿಗರು ಕಾಮೆಂಟ್ಸ್‌ ಮಾಡುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ