Viral Video: ವಿಶ್ವ ಯೋಗ ದಿನದಂದು ಲಡಾಖ್‌ ಹಿಮ ಶಿಖರದಲ್ಲಿ ಭಾರತೀಯ ಯೋಧರ ಯೋಗಾಸನ

International Yoga Day: ಪ್ರತಿವರ್ಷ ಜೂನ್‌ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ವಿವಿಧ ಸಂಘಸಂಸ್ಥೆಗಳು ಯೋಗ ಕಾರ್ಯಕ್ರವನ್ನು ಹಮ್ಮಿಯೊಳ್ಳುತ್ತವೆ. ಅದೇ ರೀತಿ ಭಾರತೀಯ ಸೇನೆ ಪಡೆಯೂ  ಇಂದು ಲಡಾಖ್‌ನ ಹಿಮ ಶಿಖರದಲ್ಲಿ ಯೋಗಾಸನವನ್ನು ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದೆ. ಈ ಕುರಿತ ವಿಡಿಯೋ ಇದೀಗ ವೈರಲ್‌ ಆಗಿದೆ. 

Viral Video: ವಿಶ್ವ ಯೋಗ ದಿನದಂದು ಲಡಾಖ್‌ ಹಿಮ ಶಿಖರದಲ್ಲಿ ಭಾರತೀಯ ಯೋಧರ ಯೋಗಾಸನ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 21, 2024 | 1:05 PM

ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ವಿಶ್ವದೆಲ್ಲೆಡೆ ಯೋಗ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. 2014 ರ ಡಿಸೆಂಬರ್‌ 11 ರಂದು ವಿಶ್ವಸಂಸ್ಥೆಯ ನಡೆದ ಸಾಮಾನ್ಯ ಸಭೆಯಲ್ಲಿ ಜೂನ್‌ 21 ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಬೇಕೆಂದು ತೀರ್ಮಾನಿಸಲಾಯಿತು. ಅಂದಿನಿಂದ ಪ್ರತಿವರ್ಷ ಜೂನ್‌ 21 ರಂದು ಜಾಗತಿಕ ಮಟ್ಟದಲ್ಲಿ ಯೋಗದಿನವನ್ನು ಆಚರಿಸಲಾಗುತ್ತಿದೆ. ಈ ದಿನ ವಿವಿಧ ಸಂಘ ಸಂಸ್ಥೆಗಳು ಯೋಗ ಕಾರ್ಯಕ್ರಮವನ್ನು ಹಮ್ಮಿಯೊಳ್ಳುತ್ತವೆ. ಈ ಆಚರಣೆಯಲ್ಲಿ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾನ್ಯ ಜನರು ಭಾಗಿಯಾಗುತ್ತಾರೆ. ಅದೇ ರೀತಿ ಇಂದು  ಭಾರತೀಯ ಸೇನಾ ಪಡೆಯೂ ಲಡಾಖ್‌ನ ಹಿಮ ಶಿಖರದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಿದ್ದು, ಈ ಕುರಿತ ವಿಡಿಯೋ ಇದೀಗ ವೈರಲ್‌ ಆಗಿದೆ.

ಇಂದು ಮುಂಜಾನೆ ಪೂರ್ವ ಲಡಾಖ್‌ನಲ್ಲಿ ಭಾರತೀಯ ಸೇನಾ ಪಡೆಯು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಣೆ ಮಾಡಿದೆ. ಈ ಕುರಿತ ಪೋಸ್ಟ್‌ ಒಂದನ್ನು ಎ.ಎನ್.ಐ (@ANI) ಸುದ್ದಿ ಸಂಸ್ಥೆ ತನ್ನ ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಅಂತಾರಾಷ್ಟ್ರೀಯ ಯೋಗ ದಿನದಂದು ಪೂರ್ವ ಲಡಾಖ್‌ನಲ್ಲಿ ಭಾರತೀಯ ಸೇನಾ ಪಡೆಯ ಯೋಗ ಪ್ರದರ್ಶನ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್‌ ವಿಡಿಯೋದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಸೇನೆಯ ಸೈನಿಕರು ಲಡಾಖ್‌ ಹಿಮ ಶಿಖರದಲ್ಲಿ ಯೋಗಾಸನ ಮಾಡುವಂತಹ ಅದ್ಭುತ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ತಂದೆ ಆಸ್ತಿಯಲ್ಲಿ ಪಾಲು ಕೊಡಲಿಲ್ಲ ಎಂದು ಮಗ ಮಾಡಿದ್ದೇನು ಗೊತ್ತಾ?

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 11 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೆಟ್ಟಿಗರು ಕಾಮೆಂಟ್ಸ್‌ ಮಾಡುವ ಮೂಲಕ ಯೋಗ ದಿನಾಚರಣೆಗೆ ಶುಭಕೋರಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ