AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ವಿಮಾನ ಎಡವಟ್ಟು: ದೆಹಲಿಯಿಂದ ಕೊಚ್ಚಿಯಲ್ಲಿ ಬಂದು ಇಳಿದ್ರೂ ತಲುಪಲಿಲ್ಲ ಮಹಿಳೆಯ ಸೂಟ್‌ಕೇಸ್

ಬೆಂಗಳೂರು ಸೇರಿ ದೇಶಾದ್ಯಂತ ಇಂಡಿಗೋ ವಿಮಾನಗಳ ವಿಳಂಬ, ರದ್ದತಿಯಿಂದ ಮೂರು ದಿನಗಳಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. 600ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಬ್ಯಾಗ್ ಕಳೆದುಹೋಗಿರುವ ಘಟನೆಗಳೂ ವರದಿಯಾಗಿವೆ. ವಿಮಾನಯಾನ ಸಂಸ್ಥೆ ಸೂಕ್ತ ಮಾಹಿತಿ ನೀಡದೆ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದೆ. ಇಂಡಿಗೋ ತಂಡಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸುತ್ತಿದ್ದು, ಕ್ಷಮೆಯಾಚಿಸಿವೆ.

ಇಂಡಿಗೋ ವಿಮಾನ ಎಡವಟ್ಟು:  ದೆಹಲಿಯಿಂದ ಕೊಚ್ಚಿಯಲ್ಲಿ ಬಂದು ಇಳಿದ್ರೂ ತಲುಪಲಿಲ್ಲ ಮಹಿಳೆಯ ಸೂಟ್‌ಕೇಸ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 05, 2025 | 5:25 PM

Share

ಬೆಂಗಳೂರು ಸೇರಿದಂತೆ ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ ವಿಮಾನಗಳ (IndiGo flights) ಸಂಚಾರದಲ್ಲಿ ವ್ಯತ್ಯವಾಗಿ ಸತತ ಮೂರನೇ ದಿನವೂ ಪ್ರಯಾಣಿಕರು ಪರದಾಡುವಂತಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಯಾಣಿಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಮತ್ತೊಂದು ಸುದ್ದಿ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿದೆ. 600 ಕ್ಕೂ ಹೆಚ್ಚು ಇಂಡಿಗೋ ವಿಮಾನಗಳು ರದ್ದಾಗಿದ್ದು, ಈ ಬಗ್ಗೆ ವಿಮಾನಯಾನ ಸಂಸ್ಥೆ ಮೊದಲೇ ಯಾವುದೇ ಮಾಹಿತಿ ನೀಡಿಲ್ಲ. ಇದೀಗ ಪ್ರಯಾಣಿಕರ ಸಹಾಯಕ್ಕೂ ಬಂದಿಲ್ಲ. ಇದರ ನಡುವೆ ದೆಹಲಿಯಿಂದ ಕೊಚ್ಚಿಗೆ ಪ್ರಯಾಣ ಬೆಳೆಸಿದ್ದ ಮಹಿಳೆಯೊಬ್ಬರು ತಾವು ಅನುಭವಿಸಿದ ಸಮಸ್ಯೆಯನ್ನು ಹೇಳಿದ್ದಾರೆ. ಈ ಮಹಿಳೆ ದೆಹಲಿಯಿಂದ ಕೊಚ್ಚಿಗೆ ಬಂದಿದ್ದಾರೆ. ಆದರೆ ಅವರ ಬ್ಯಾಗ್​​​​, ಸೂಟ್‌ಕೇಸ್ ಮಾತ್ರ ಬಂದಿಲ್ಲ, ಈ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳನ್ನು ಕೇಳಿದ್ರೆ ಯಾವುದೇ ಸಹಾಯ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಹಲವು ಪ್ರಯಾಣಿಕರು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಮಹಿಳೆ ವಿಮಾನ ನಿಲ್ದಾಣದಲ್ಲಿ ಬಂದು ಇಳಿದ್ರೂ ಅವರ ಬ್ಯಾಗ್​ ಮಾತ್ರ ಬಂದಿಲ್ಲ. ಅದು ಎಲ್ಲಿದೆ ಎಂಬ ಮಾಹಿತಿ ಕೂಡ ಇಲ್ಲ. ಈ ಬಗ್ಗೆ ಅವರ ಗಂಡ ಹೀಗೆ ಹೇಳಿದ್ದಾರೆ. “ನನ್ನ ಪತ್ನಿ ಮದುವೆಗಾಗಿ ಕೊಚ್ಚಿಗೆ ಬಂದಿದ್ದಾಳೆ. ವಿಮಾನ ನಿಲ್ದಾಣದಲ್ಲಿ ಬಂದು ಇಳಿದ ನಂತರ ಆಕೆಯ ಬ್ಯಾಗ್​​ ಬಂದಿಲ್ಲ. ಅದರಲ್ಲಿ ಬೆಲೆಬಾಳುವ ವಸ್ತುಗಳು ಇತ್ತು. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ರೆ ಯಾವುದೇ ಮಾಹಿತಿ ನೀಡುತ್ತಿಲ್ಲ” ಎಂದು ಹೇಳಿದ್ದಾರೆ. ಈ ಸಂಭಾಷಣೆಯ ಸ್ಕ್ರೀನ್‌ಶಾಟ್​​​ನ್ನು ಸೋಶಿಯಲ್​​ ಮೀಡಿಯಾದಲ್ಲಿ ಮಹಿಳೆಯ ಗಂಡ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ವಧು ವರರ ಕುರ್ಚಿಯಲ್ಲಿ ಕುಳಿತ ತಂದೆ-ತಾಯಿ! ಮಧುಮಕ್ಕಳಿಲ್ಲದೇ ಹುಬ್ಬಳ್ಳಿಯಲ್ಲಿ ನಡೆಯಿತು ಆರತಕ್ಷತೆ: ಇಂಡಿಗೋ ವಿಮಾನ ರದ್ದು ಕಾರಣ

ವಿಮಾನ ವಿಳಂಬ, ರದ್ದತಿ ಕುರಿತು ಇಂಡಿಗೋ ಹೇಳಿಕೆ:

ನವೆಂಬರ್ 4 ರಂದು ಹಂಚಿಕೊಂಡ ಟ್ವೀಟ್‌ನಲ್ಲಿ, ವಿಮಾನ ರದ್ದತಿ ಮತ್ತು ವಿಳಂಬದ ಸಮಸ್ಯೆಗಳನ್ನು ವಿಮಾನಯಾನ ಸಂಸ್ಥೆಯು ಪರಿಹರಿಸಿದೆ. ಜತೆಗೆ ಪ್ರಯಾಣಿಕ ಕ್ಷಮೆಯಾಚಿಸಿದೆ. ಕಳೆದ ಎರಡು ದಿನಗಳಿಂದ ಇಂಡಿಗೋದ ನೆಟ್‌ವರ್ಕ್ ಮತ್ತು ಕಾರ್ಯಾಚರಣೆಗಳಲ್ಲಿ ವ್ಯಾಪಕ ಅಡಚಣೆ ಉಂಟಾಗಿದೆ. ಹಾಗಾಗಿ ವಿಮಾನ ನಿಲ್ದಾಣದ ಹಾಗೂ ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ಪ್ರಯಾಣಿಕರಲ್ಲಿ ಕ್ಷಮೆ ಕೇಳಿದ್ದಾರೆ. ಇಂಡಿಗೋ ತಂಡಗಳು ಶ್ರದ್ಧೆಯಿಂದ ಕೆಲಸ ಮಾಡುತ್ತಿವೆ. ಸಮಸ್ಯೆಯನ್ನು ಪರಿಹಾರ ಮಾಡಲು MOCA, DGCA, BCAS, AAI ಮತ್ತು ವಿಮಾನ ನಿಲ್ದಾಣ ನಿರ್ವಾಹಕರ ಸಹಾಯ ಪಡೆದುಕೊಂಡಿದ್ದೇವೆ. ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:33 am, Fri, 5 December 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ