AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೈರಲ್ ಆಗಲು ನಡು ರಸ್ತೆಯಲ್ಲಿ ಮೈ ಬಳುಕಿಸಿದ ಯುವತಿ

Shreya kalra video: ಇಂದೋರ್​ನ ಪ್ರಮುಖ ರಸ್ತೆ ರಸೋಮ ಚೌಕ್​ನ ಟ್ರಾಫಿಕ್ ಸಿಗ್ನಲ್ ಬಿದ್ದಾಗ, ಜೀಬ್ರಾ ಕ್ರಾಸಿಂಗ್‌ನಲ್ಲಿ ಶ್ರೇಯಾ ಕಲ್ರಾ ಭರ್ಜರಿ ಡ್ಯಾನ್ಸ್ ಮಾಡಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದಳು.

Viral Video: ವೈರಲ್ ಆಗಲು ನಡು ರಸ್ತೆಯಲ್ಲಿ ಮೈ ಬಳುಕಿಸಿದ ಯುವತಿ
Indore girl
TV9 Web
| Updated By: ಝಾಹಿರ್ ಯೂಸುಫ್|

Updated on: Sep 15, 2021 | 10:45 PM

Share

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಯುವಕ-ಯುವತಿಯರು ಮಾಡುವ ನಾನಾ ಸರ್ಕಸ್ಸುಗಳನ್ನು ನೀವು ನೋಡಿರುತ್ತೀರಿ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಇನ್​ಸ್ಟಾಗ್ರಾಮ್​ ರೀಲ್ಸ್​ಗಾಗಿ ಚಿತ್ರ-ವಿಚಿತ್ರ ಕುಣಿದು ಕುಪ್ಪಳಿಸಿ ಪ್ರಚಾರಗಿಟ್ಟಿಸಿಕೊಳ್ಳುವ ಟ್ರೆಂಡ್​ವೊಂದು ಶುರುವಾಗಿದೆ. ಇಂತಹದೊಂದು ಟ್ರೆಂಡ್ ಮೊರೆ ಹೋಗಿ ಯುವತಿಯೊಬ್ಬಳು ಫಜೀತಿಗೆ ಸಿಲುಕಿರುವ ಘಟನೆ ಇಂದೋರ್​ನಲ್ಲಿ ನಡೆದಿದೆ. ಇನ್​ಸ್ಟ್ರಾಮ್​ನಲ್ಲಿ 2 ಲಕ್ಷಕ್ಕೂ ಅಧಿಕ ಫಾಲೋವರ್ಸ್​ ಹೊಂದಿರುವ ಶ್ರೇಯಾ ಕಲ್ರಾ ಇತ್ತೀಚೆಗೆ ತನ್ನ ಫಾಲೋವರ್​ಗಳನ್ನು ಮೆಚ್ಚಿಸಲು ವಿಶೇಷ ವಿಡಿಯೋವೊಂದನ್ನು ಚಿತ್ರೀಕರಿಸಿದ್ದರು. ಅದು ಕೂಡ ಟ್ರಾಫಿಕ್​ ಸಿಗ್ನಲ್​ನಲ್ಲಿ ಎಂಬುದು ವಿಶೇಷ.

ಹೌದು, ಇಂದೋರ್​ನ ಪ್ರಮುಖ ರಸ್ತೆ ರಸೋಮ ಚೌಕ್​ನ ಟ್ರಾಫಿಕ್ ಸಿಗ್ನಲ್ ಬಿದ್ದಾಗ, ಜೀಬ್ರಾ ಕ್ರಾಸಿಂಗ್‌ನಲ್ಲಿ ಶ್ರೇಯಾ ಕಲ್ರಾ ಭರ್ಜರಿ ಡ್ಯಾನ್ಸ್ ಮಾಡಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದಳು. ಸಖತ್ ಸ್ಟೆಪ್ಸ್​ ಮೂಲಕ ಕುಣಿದು ಕುಪ್ಪಳಿಸಿದ್ದ​ ಯುವತಿಯನ್ನು ನೋಡಿ ವಾಹನದಲ್ಲಿದ್ದವರು ಆಶ್ಚರ್ಯಗೊಂಡಿದ್ದರು. ತನ್ನ ಯೋಜನೆಯಂತೆ ಭರ್ಜರಿ ಡ್ಯಾನ್ಸ್​ ವಿಡಿಯೋವನ್ನು ಶೂಟ್ ಮಾಡಿ ಶ್ರೇಯಾ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ. ಆಕೆಯ ನಿರೀಕ್ಷೆ ಹುಸಿಯಾಗಲಿಲ್ಲ. ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಧೂಳೆಬ್ಭಿಸಿತು.

ವಿಡಿಯೋ ವೈರಲ್ ಆಗಿ 2.5 ಲಕ್ಷಕ್ಕೂ ಅಧಿಕ ವೀವ್ಸ್ ಪಡೆದರೂ, ಟ್ರಾಫಿಕ್​ ಸಿಗ್ನಲ್​ನಲ್ಲಿ ಮಾಡಿದ ಕಪಿಚೇಷ್ಠೆಗಳ ಬಗ್ಗೆ ಅನೇಕ ನೆಟಿಜನ್‌ಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಈ ವಿಡಿಯೋ ಬಗ್ಗೆ ಅನೇಕರು ರಾಜ್ಯ ರಸ್ತೆ ಸಾರಿಗೆ ಸಚಿವರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಹಾಗೆಯೇ ಟ್ರಾಫಿಕ್ ಪೊಲೀಸರಿಗೂ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ದೂರು ನೀಡಿದ್ದಾರೆ.

ಇದನ್ನು ಇದೀಗ ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ, ಆಕೆಯ ವಿರುದ್ದ ಮೋಟಾರ್ ವಾಹನ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಹದ್ದು ಮೀರಿ ವರ್ತಿಸುವ ಇಂತಹ ಘಟನೆಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅದರಂತೆ ಇದೀಗ ವೈರಲ್ ಹುಡುಗಿಗೆ ನೊಟೀಸ್ ನೀಡಲಾಗಿದೆ. ಒಟ್ಟಿನಲ್ಲಿ ವೈರಲ್ ಆಗಬೇಕೆಂದು ಬಯಸಿದ್ದ ಶ್ರೇಯಾ ಕಲ್ರಾ ಅವರ ಆಸೆಯಂತು ಈಡೇರಿದೆ. ಆದರೆ ಅದು ಪೊಲೀಸ್ ಕೇಸ್ ಮೂಲಕ ಎಂಬುದು ಇಲ್ಲಿ ವಿಶೇಷ.

View this post on Instagram

A post shared by Shreya Kalra (@shreyakalraa)

ಇದನ್ನೂ ಓದಿ: IPL 2021: ಪ್ಲೇ ಆಫ್ ಪ್ರವೇಶಿಸಲು ದ್ವಿತಿಯಾರ್ಧದಲ್ಲಿ ಪ್ರತಿ ತಂಡಗಳು ಎಷ್ಟು ಪಂದ್ಯ ಗೆಲ್ಲಬೇಕು?

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಭಾಗ್ಯ ಕೊಹ್ಲಿ, ಗೇಲ್, ಎಬಿಡಿಗೆ ಇನ್ನೂ ಸಿಕ್ಕಿಲ್ಲ

ಇದನ್ನೂ ಓದಿ: Crime News: ಅಕ್ಕನಿಗೆ ಯುವಕನೊಂದಿಗೆ ಸಂಬಂಧ: ಕಥೆ ಮುಗಿಸಿ ನಗುತ್ತಾ ನಿಂತಿದ್ದ ತಮ್ಮ..!

ಇದನ್ನೂ ಓದಿ: Crime News: ಹುಡುಗಿ ಧ್ವನಿಯಲ್ಲೇ ಡಾಕ್ಟರ್​ ಕೈಯಿಂದ 2 ಕೋಟಿ ರೂ ಪೀಕಿದ ಚಾಲಾಕಿ..!

(Indore girl dances at traffic signal in viral video)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ