Reels Craze: ಇನ್ಸ್ಟಾಗ್ರಾಮ್​​ ರೀಲ್‌ಗಾಗಿ 100 ಅಡಿ ಎತ್ತರದಿಂದ ನೀರಿಗೆ ಜಿಗಿದ ಯುವಕ ಸಾವು

ಇನ್ಸ್ಟಾಗ್ರಾಮ್​​ ರೀಲ್‌ಗಾಗಿ 100 ಅಡಿ ಎತ್ತರದ ನೀರಿಗೆ ಜಿಗಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕ ನೀರಿಗೆ ಜಿಗಿದಿರುವುದನ್ನು ಆತನ ಸ್ನೇಹಿತ ರೆಕಾರ್ಡ್ ಮಾಡಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Reels Craze: ಇನ್ಸ್ಟಾಗ್ರಾಮ್​​ ರೀಲ್‌ಗಾಗಿ 100 ಅಡಿ ಎತ್ತರದಿಂದ ನೀರಿಗೆ ಜಿಗಿದ ಯುವಕ ಸಾವು
Follow us
ಅಕ್ಷತಾ ವರ್ಕಾಡಿ
|

Updated on: May 22, 2024 | 12:11 PM

ಜಾರ್ಖಂಡ್‌:  ಇನ್‌ಸ್ಟಾಗ್ರಾಮ್ ರೀಲ್ (Instagram Reels) ಚಿತ್ರೀಕರಿಸಲು 18 ವರ್ಷದ ಯುವಕನೊಬ್ಬ 100 ಅಡಿ ಎತ್ತರದಿಂದ ಆಳಕ್ಕೆ ಹಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ಸಾಹಿಬ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಮೃತ ತೌಸಿಫ್(18) ಸೋಮವಾರ ಸಂಜೆ ಸುಮಾರು 100 ಅಡಿ ಎತ್ತರದಿಂದ ಕ್ವಾರಿ ಕೆರೆಗೆ ಹಾರಿದ್ದಾನೆ. ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ಆತನ ಸ್ನೇಹಿತರು ಆತನನ್ನು ರಕ್ಷಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.

ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಶೋಧ ಕಾರ್ಯಾಚರಣೆಯ ಕೆಳ ಹೊತ್ತಿನ ಬಳಿಕ ಯುವಕನ ಮೃತದೇಹ ಪತ್ತೆಯಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವಕ ನೀರಿಗೆ ಜಿಗಿದಿರುವುದನ್ನು ಆತನ ಸ್ನೇಹಿತ ರೆಕಾರ್ಡ್ ಮಾಡಿದ್ದಾನೆ. ಆದರೆ, ಈಜುವ ಬದಲಾಗಿ ಯುವಕ ಮುಳುಗುತ್ತಿದ್ದರೂ ಆತನ ಗೆಳೆಯರು ಪ್ರಾರಂಭದಲ್ಲಿ ತಮಾಷೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಎಷ್ಟೇ ಹೊತ್ತಾದರೂ ಆತನ ಮೇಲೆ ಬಾರದೇ ಇದ್ದಿದ್ದರಿಂದ ಸ್ನೇಹಿತರು ಆತನನ್ನು ರಕ್ಷಿಸಿ ಮೇಲೆ ತರಲು ಮುಂದಾಗಿದ್ದಾರೆ.

ಇದನ್ನೂ ಓದಿ: ಹಲವರಿಗೆ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ

ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಕುಶ್ವಾಹ ಅವರ ಪ್ರಕಾರ, “100 ಅಡಿ ಆಳದ ನೀರಿಗೆ ಹಾರಿದ ನಂತರ, ಯುವಕ ತನ್ನನ್ನು ನಿಯಂತ್ರಿಸಲು ಸಾಧ್ಯವಾಗದೆ ಮುಳುಗಿ ಸಾವನ್ನಪ್ಪಿದ್ದಾನೆ” ಎಂದು ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್