Isha Arora: ಕರ್ತವ್ಯ ದಕ್ಷತೆ ಮೆರೆದ ಇಶಾ, ಇವರ ಕೆಲಸಕ್ಕೆ ಮತದಾರರೇ ಫಿದಾ

ಉತ್ತರ ಪ್ರದೇಶದ ಸಹರಾನ್‌ಪುರದ ಪೋಲಿಂಗ್ ಏಜೆಂಟ್ ಇಶಾ ಅರೋರಾ ಅವರ ಕರ್ತವ್ಯ ದಕ್ಷತೆಗೆ ಎಲ್ಲರೂ ಫಿದಾ ಆಗಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗಿದೆ. ಇಶಾ ಅರೋರಾ ಅವರನ್ನು ಗಂಗೋಹ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆಯ ಮೇಲ್ವಿಚಾರಕರಾಗಿ ನಿಯೋಜಿಸಲಾಗಿತ್ತು. ಕರ್ತವ್ಯ ಮತ್ತು ಸಮಯಪಾಲನೆಯಲ್ಲಿ ಅವರ ಸಮರ್ಪಣೆಯಿಂದ ಮತದಾರರ ಗಮನ ಸೆಳೆದಿದ್ದಾರೆ.

Isha Arora: ಕರ್ತವ್ಯ ದಕ್ಷತೆ ಮೆರೆದ ಇಶಾ, ಇವರ ಕೆಲಸಕ್ಕೆ ಮತದಾರರೇ ಫಿದಾ
ವೈರಲ್​​ ವಿಡಿಯೋ
Follow us
ಅಕ್ಷಯ್​ ಪಲ್ಲಮಜಲು​​
|

Updated on: Apr 20, 2024 | 5:01 PM

ಸಾಮಾಜಿಕ ಜಾಲತಾಣದಲ್ಲಿ ಈ ಒಂದು ಸುದ್ದಿ ಭಾರೀ ವೈರಲ್​​ ಆಗುತ್ತಿದೆ. ಒಬ್ಬ ಅಧಿಕಾರಿ ತನಗೆ ನೀಡಿದ ಕರ್ತವ್ಯವನ್ನು ಎಷ್ಟು ಜವಾಬ್ದಾರಿಯಿಂದ ಮಾಡಬೇಕು ಎಂಬುದನ್ನು ಈ ಮಹಿಳಾ ಅಧಿಕಾರಿಯಿಂದ ಕಲಿಯಬೇಕು. ಹೌದು ಇಲ್ಲೊಂದು ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​​​ ಆಗುತ್ತಿದೆ. ಈ ಅಧಿಕಾರಿಯ ಕಾರ್ಯಕ್ಕೆ ಜನರು ಕೂಡ ಫಿದಾ ಆಗಿದ್ದಾರೆ. ದೇಶದಲ್ಲಿ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಪ್ರಾರಂಭವಾಗಿದೆ. ಮೊದಲ ಹಂತದ ಚುನಾವಣೆ ಮುಕ್ತಾಯವಾಗಿದೆ. ಈ ಸಮಯದಲ್ಲಿ ಕರ್ತವ್ಯ ನಿರತರಾಗಿದ್ದ ಉತ್ತರ ಪ್ರದೇಶದ ಸಹರಾನ್‌ಪುರದ ಪೋಲಿಂಗ್ ಏಜೆಂಟ್ ಇಶಾ ಅರೋರಾ ತನ್ನ ಕೆಲಸದಲ್ಲಿ ದಕ್ಷತೆಯನ್ನು ಮೆರೆದಿದ್ದಾರೆ.

ಇಶಾ ಅರೋರಾ ಅವರನ್ನು ಗಂಗೋಹ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆಯ ಮೇಲ್ವಿಚಾರಕರಾಗಿ ನಿಯೋಜಿಸಲಾಗಿತ್ತು. ಕರ್ತವ್ಯ ಮತ್ತು ಸಮಯಪಾಲನೆಯಲ್ಲಿ ಅವರ ಸಮರ್ಪಣೆಯಿಂದ ಮತದಾರರ ಗಮನ ಸೆಳೆದದ್ದು, ಇದೀಗ ಈ ವಿಚಾರಕ್ಕೆ ಸಂಬಂಧಿದಂತೆ ವಿಡಿಯೋವೊಂದು ವೈರಲ್​​ ಆಗಿದೆ. ಇಶಾ ಅರೋರಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಿಯಾಗಿದ್ದು, ಗಂಗೋಹ್ ವಿಧಾನಸಭಾ ಕ್ಷೇತ್ರದ ಮಹಾಂಗಿ ಗ್ರಾಮದಲ್ಲಿ ಚುನಾವಣಾ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಇದನ್ನೂ ಓದಿ: ಮಹಿಳಾ ರಿಪೋರ್ಟರ್​​ಗೆ ಬಲವಂತವಾಗಿ ಹಿಜಾಬ್​​ ಹಾಕಿದ ಮುಸ್ಲಿಂ ಯುವಕ, ಆಕೆಯ ಪ್ರತ್ಯುತ್ತರಕ್ಕೆ ನೆಟ್ಟಿಗರು ಫಿದಾ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಎಕ್ಸ್​​​​​ನಲ್ಲಿ ಈ ಬಗ್ಗೆ ಎರಡು ವಿಡಿಯೋ ವೈಲರ್​​​ ಆಗಿದೆ. ಸಹರಾನ್‌ಪುರದ ಮತಗಟ್ಟೆ ಅಧಿಕಾರಿ ಇಶಾ ಅರೋರಾ ಅವರ ಕೆಲಸದ ಶೈಲಿ ಎಲ್ಲರ ಮನಸ್ಸು ಗೆದ್ದಿದೆ ಎಂದು ಬರೆದುಕೊಂಡಿದ್ದಾರೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಇಶಾ ಅವರು, ಈ ವಿಡಿಯೋವನ್ನು ನೋಡಲು ಸಮಯ ಸಿಕ್ಕಿಲ್ಲ, ಇದು ಚುನಾವಣಾ ಸಮಯ ಮತ್ತು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುವುದು ನನ್ನ ಕರ್ತವ್ಯ. ನನ್ನ ಸಮಯಪ್ರಜ್ಞೆ ಮತ್ತು ಕರ್ತವ್ಯ ಭಕ್ತಿಯಿಂದ ಈ ವಿಡಿಯೋ ವೈರಲ್​​ ಆಗಿದೆ ಎಂದು ಅವರು ಎಎನ್​​ಐಗೆ ಹೇಳಿದ್ದಾರೆ. ಇನ್ನು ಈ ವಿಡಿಯೋವನ್ನು ನೋಡಿ ಅನೇಕ ಶ್ಲಾಘಿಸಿದ್ದಾರೆ

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ