AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮಗನ ಮೃತ ದೇಹ ಕಂಡು ದಂಗಾದ ವೈದ್ಯ; ವಿಡಿಯೋ ವೈರಲ್​​

Israel Hamas War: ಪ್ಯಾಲೆಸ್ತೀನ್ ವೈದ್ಯರೊಬ್ಬರು ಹಗಲಿರುಳು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದಾಗ ಸ್ಟ್ರೆಚರ್ ನಲ್ಲಿದ್ದ ಸ್ವಂತ ಮಗನ ಮೃತದೇಹವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಈ ವೈದ್ಯರ ಮಗ ಸಾವನ್ನಪ್ಪಿರುವುದು ತಿಳಿದುಬಂದಿದೆ.

Video Viral: ಮಗನ ಮೃತ ದೇಹ ಕಂಡು ದಂಗಾದ ವೈದ್ಯ; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: Oct 19, 2023 | 6:44 PM

Share

ಇಸ್ರೇಲ್ ಮತ್ತು ಹಮಾಸ್ ನಡುವಿನ ವಿಧ್ವಂಸಕ ಯುದ್ಧವು 12 ನೇ ದಿನವೂ ಮುಂದುವರಿದಿದೆ. ಇದೇ ವೇಳೆ ಗಾಯಾಳುಗಳ ಚಿಕಿತ್ಸೆಯಲ್ಲಿ ಹಗಲಿರುಳು ಶ್ರದ್ಧೆಯಿಂದ ದುಡಿಯುತ್ತಿದ್ದ ಪ್ಯಾಲೆಸ್ತೀನ್ ವೈದ್ಯರೊಬ್ಬರ ಸ್ಟ್ರೆಚರ್ ನಲ್ಲಿದ್ದ ಸ್ವಂತ ಮಗನ ಮೃತದೇಹವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಇಸ್ರೇಲ್​​​ ವೈಮಾನಿಕ ದಾಳಿಯಲ್ಲಿ ಈ ವೈದ್ಯರ ಮಗ ಸಾವನ್ನಪ್ಪಿದ್ದಾನೆ. ಮಗನ ಶವ ನೋಡುತ್ತಿದ್ದಂತೆ ಶಾಕ್​​ಗೆ ಒಳಗಾದ ವೈದ್ಯನ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ಇಸ್ರೇಲ್ ಪ್ರಸ್ತುತ ದಾಳಿಗೊಳಗಾಗುತ್ತಿರುವ ಗಾಜಾ ಪಟ್ಟಿಯಲ್ಲಿ ವೈದ್ಯರ ಕುಟುಂಬ ವಾಸಿಸುತ್ತಿದ್ದು, ಕೆಳ ದಿನಗಳಿಂದ ನಿರಂತರವಾಗಿ ವೈಮಾನಿಕ ದಾಳಿಯಿಂದ ವೈದ್ಯರ ಕುಟುಂಬ ಕಂಗಾಲಾಗಿತ್ತು. ಇದೀಗಾ ಕುಟುಂಬದಲ್ಲಿ ಮಗುವೊಂದು ಸಾವನ್ನಪ್ಪಿದ್ದು, ಕುಟುಂಬದ ಹಲವು ಮಂದಿ ಗಾಯಗೊಂಡಿದ್ದಾರೆ. ವೈರಲ್ ಆಗಿರುವ ಕ್ಲಿಪ್‌ನಲ್ಲಿ, ಗಾಯಾಳುಗಳನ್ನು ಉಪಚರಿಸುವಾಗ, ಸ್ಟ್ರೆಚರ್‌ನಲ್ಲಿ ಸ್ವಂತ ಮಗನ ಶವ ಕಾಣಿಸಿಕೊಂಡಾಗ, ಶಾಕ್​​​ಗೆ ಒಳಗಾಗಿರುವುದನ್ನು ಕಾಣಬಹುದು.

ಇದನ್ನೂ ಓದಿ: ವೈದ್ಯರ ಎಡವಟ್ಟಿನಿಂದ ಎರಡು ವರ್ಷ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆದ ಮಹಿಳೆ

ಯುದ್ಧದ ಭೀಕರತೆಯನ್ನು ವಿವರಿಸುವ ಸುದ್ದಿ ಸಂಸ್ಥೆಗಳು, ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಅನೇಕ ನೋವಿನ ಕಥೆಗಳು ಹರಿದಾಡುತ್ತಿವೆ.ಎರಡು ದೇಶಗಳ ನಡುವಿನ ಯುದ್ಧದಲ್ಲಿ ಅಂತಿಮವಾಗಿ ನರಳುವುದು ಶ್ರೀಸಾಮಾನ್ಯರೇ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ನೋವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!